modi-held-an-all-party-meeting-with-political-leaders-of-jammu-and-kashmir

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ದೆಹಲಿಯ ತಮ್ಮ ನಿವಾಸದಲ್ಲಿ ಜಮ್ಮು-ಕಾಶ್ಮೀರದ ರಾಜಕೀಯ ಮುಖಂಡರೊಂದಿಗೆ ಸರ್ವಪಕ್ಷ ಸಭೆಯನ್ನು ನಡೆಸಿದ್ದಾರೆ.

ಜಮ್ಮು ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದತಿಯ ಬಳಿಕ ಇದೇ  ಮೊದಲಬಾರಿಗೆ ಕೇಂದ್ರ ಸರ್ಕಾರ ರಾಜಕೀಯ ಪಕ್ಷಗಳ ಜತೆಗೆ ಸಭೆ ನಡೆಸಿದೆ. ಸಭೆಯಲ್ಲಿ ನ್ಯಾಷನಲ್‌ ಕಾನ್ಫರೆನ್ಸ್ ಮುಖಂಡರಾದ ಡಾ.ಫಾರೂಕ್ ಅಬ್ದುಲ್ಲಾ ಮತ್ತು ಒಮರ್ ಅಬ್ದುಲ್ಲಾ, ಕಾಂಗ್ರೆಸ್ ಮುಖಂಡ ಗುಲಾಮ್ ನಬಿ ಆಜಾದ್, ಪಿಡಿಪಿ ನಾಯಕ ಮೆಹಬೂಬಾ ಮುಫ್ತಿ, ಗೃಹ ಸಚಿವ ಅಮಿತ್ ಶಾ, ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ, ಬಿಜೆಪಿಯ ಜಮ್ಮು-ಕಾಶ್ಮೀರ ಅಧ್ಯಕ್ಷ ರವೀಂದರ್ ರೈನಾ, ಪೀಪಲ್ಸ್ ಕಾನ್ಫರೆನ್ಸ್ ಅಧ್ಯಕ್ಷ ಸಜ್ಜಾದ್ ಲೋನ್ ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಭಾಗವಹಿಸಿದ್ದರು.

ಸಭೆಯ ಬಳಿಕ ಮಾಹಿತಿ ನೀಡಿದ ಪ್ರಧಾನಿ, ಪ್ರಜಾಪ್ರಭುತ್ವದ ಅತಿದೊಡ್ಡ ಶಕ್ತಿ ಎಂದರೇ ಒಂದೇ ಟೇಬಲ್​ ಮೇಲೆ ತಮ್ಮ ಅಭಿಪ್ರಾಯವನ್ನು ಹಂಚಿಕೊಳ್ಳುವುದಾಗಿದೆ. ಜನರು ಅದರಲ್ಲೂ ಯುವಜನರಿಗೆ ರಾಜಕೀಯ ನಾಯಕತ್ವ ಒದಗಿಸಬೇಕು ಮತ್ತು ಅವರ ಆಕಾಂಕ್ಷೆಗಳನ್ನು ಈಡೇರಿಸಬೇಕು ಎಂದು ನಾನು ಜಮ್ಮು ಮತ್ತು ಕಾಶ್ಮೀರ ಮುಖಂಡರಿಗೆ ತಿಳಿಸಿದ್ದೇನೆ ಎಂದು ಟ್ವೀಟ್​ನಲ್ಲಿ ತಿಳಿಸಿದ್ದಾರೆ.

ಗೃಹ ಸಚಿವ ಅಮಿತ್ ಷಾ ಅವರು ಈ ಕುರಿತು ಮಾತನಾಡುತ್ತ, ಜಮ್ಮು-ಕಾಶ್ಮೀರ ವಿಚಾರವಾಗಿ ಇಂದಿನ ಸಭೆ ಅತ್ಯಂತ ಸೌಹಾರ್ದಯುತವಾಗಿ ನಡೆದಿದ್ದು, ಇಲ್ಲಿ ಚುನಾವಣೆ ನಡೆಸುವುದು ಸೇರಿದಂತೆ ವಿವಿಧ ಅಂಶಗಳ ಬಗ್ಗೆ ಚರ್ಚೆ ನಡೆದಿದೆ. ಜಮ್ಮು ಕಾಶ್ಮೀರದಲ್ಲಿ ರಾಜ್ಯ ಸ್ಥಾನಮಾನವನ್ನು ನೀಡಲು ಕೇಂದ್ರ ಬದ್ಧವಾಗಿದೆ ಎಂದು ಹೇಳಿದ್ದಾರೆ.

modi-held-an-all-party-meeting-with-political-leaders-of-jammu-and-kashmir

ಈ ಸಭೆಯಲ್ಲಿ ಜಮ್ಮು ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನ ನೀಡುವುದು, ವಿಧಾನ ಸಭಾ ಕ್ಷೇತ್ರಗಳ ಪುನರ್ ವಿಂಗಡಣೆ ಮಾಡುವುದು ಸೇರಿದಂತೆ ಹಲವು ವಿಚಾರಗಳ ಕುರಿತು ಚರ್ಚಿಸಲಾಗಿದೆ. ಇದಲ್ಲದೇ  ಕಾಂಗ್ರೆಸ್ ನ ಫಾರುಖ್ ಅಬ್ದುಲ್ಲಾ, ಮೆಹಬೂಬಾ ಮುಪ್ತಿ ಸೇರಿದಂತೆ ಗುಪ್ಕರ್ ಮೈತ್ರಿ ಪಕ್ಷಗಳು, ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನ ಮರಳಿ ನೀಡುವಂತೆ ಒತ್ತಾಯಿಸಿದ್ದಾರೆ ಎನ್ನಲಾಗಿದೆ.

ತಾಜಾ ಸುದ್ದಿಗಳಿಗಾಗಿ ನಮ್ಮನ್ನು ಸಾಮಾಜಿಕ ತಾಣಗಳಲ್ಲಿ ಫಾಲೋ ಮಾಡಿ
ವಾಟ್ಸಪ್ಟೆಲಿಗ್ರಾಮ್ಕೂ ಆಫ್ಫೇಸ್ ಬುಕ್ ಫೇಜ್

ಪ್ರತಿಷ್ಠಿತ ನ್ಯೂಸ್ ಆಫ್ ಗಳಲ್ಲಿ ನಮ್ಮನ್ನು ಫಾಲೋ ಮಾಡಿ
ಡೈಲಿಹಂಟ್ಗೂಗಲ್ ನ್ಯೂಸ್ 

LEAVE A REPLY

Please enter your comment!
Please enter your name here