ಕಲಬುರಗಿ: ಯಾದಗಿರಿ ಜಿಲ್ಲೆ ಹುಣಸಗಿ ತಾಲೂಕಿನ ಕೊಡೆಕಲ್ ಗ್ರಾಮಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದಾರೆ. ಇಲ್ಲಿ ನಾರಾಯಣಪುರ ಎಡದಂಡೆ ಕಾಲುವೆ ನವೀಕರಣ, ವಿಸ್ತರಣೆ ಹಾಗೂ ಆಧುನೀಕರಣ, ಬಹು ಗ್ರಾಮ ಕುಡಿಯುವ ನೀರಿನ ಯೋಜನೆ ಸೇರಿದಂತೆ ಹಲವು ಅಭಿವೃದ್ಧಿ ಕಾರ್ಯಕ್ರಮಗಳಿಗೆ ಪ್ರಧಾನಿಗಳು ಚಾಲನೆ ನೀಡಿದ್ದಾರೆ.
ಕೊಡೆಕಲ್ ನಲ್ಲಿ ನಡೆದ ಸಮಾರಂಭದಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಕನ್ನಡದಲ್ಲೇ ತಮ್ಮ ಭಾಷಣ ಪ್ರಾರಂಭಿಸಿದರು. ಕರ್ನಾಟಕದ ಸಹೋದರ, ಸಹೋದರಿಯರಿಗೆ ವಂದನೆಗಳು, ಯಾದಗಿರಿಗೆ ದೊಡ್ಡ ಇತಿಹಾಸವಿದೆ ಎಂದು ಹೇಳುತ್ತಾ ರಾಜಾ ವೆಂಕಟ್ಟಪ್ಪರನ್ನು ಪ್ರಧಾನಿ ಮೋದಿ ಸ್ಮರಿಸಿದ್ದಾರೆ.
ಯಾದಗಿರಿಯ ಕೊಡೆಕಲ್ ನಲ್ಲಿ ಬಹುಪಯೋಗಿ ನೀರಾವರಿ ಯೋಜನೆಗೆ ಚಾಲನೆ ನೀಡಿದ್ದೇವೆ. ಯೋಜನೆಯಿಂದ ಲಕ್ಷಾಂತರ ರೈತರಿಗೆ ಸಹಾಯಕವಾಗಿದೆ. ಮುಂದಿನ 25 ವರ್ಷಗಳ ಸಂಕಲ್ಪ ಇಟ್ಟುಕೊಂಡು ವಿವಿಧ ಯೋಜನೆಗಳನ್ನು ಹಮ್ಮಿಕೊಳ್ಳಲಗುತ್ತಿದೆ. ಕರ್ನಾಟಕದಲ್ಲಿ ಇದೀಗ ವಿಕಾಸ ಪರ್ವ ಸೃಷ್ಟಿಯಾಗಿದೆ.
ಯಾದಗಿರಿ ಜಿಲ್ಲೆ ಹಿಂದುಳಿಯಲು ಹಿಂದಿನ ಸರ್ಕಾರಗಳೇ ಕಾರಣ. ಈಗಿನ ಸರ್ಕಾರದಿಂದ ಕರ್ನಾಟಕದ ಮತ್ತಷ್ಟು ಅಭಿವೃದ್ಧಿಯಾಗಲಿದೆ. ವೋಟ್ ಬ್ಯಾಕಿಂಗ್ ಕಾರಣದಿಂದ ಯಾದಗಿರಿ ಹಿಂದುಳಿದಿದೆ ಎಂದು ಹೇಳಿದರು.
ಇದನ್ನೂ ಓದಿರಿ: ಕಲಬುರಗಿಗೆ ಬಂದಿಳಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ