ಬೆಂಗಳೂರು: ಬೆಂಗಳೂರಿನ ನಾಗವಾರ ಬಳಿ ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್ ದಿಢೀರ್ ಕುಸಿದುಬಿದ್ದು ಗಂಭೀರವಾಗಿ ಗಾಯಗೊಂಡು ತಾಯಿ ಹಾಗೂ ಮಗು ಮೃತಪಟ್ಟಿರುವ ಘಟನೆ ನಡೆದಿದೆ.
ನಾಗವಾರ ರಿಂಗ್ ರೋಡ್‍ನ ಎಚ್‍ಬಿಆರ್ ಲೇಔಟ್ ಬಳಿ ಮೆಟ್ರೋ ಕಾಮಗಾರಿ ನಡೆಯುತ್ತಿತ್ತು. ಕಾಮಗಾರಿ ವೇಳೆ ಪಿಲ್ಲರ್ ನಿರ್ಮಿಸಲು ನಿಲ್ಲಿಸಿದಂತಹ ರಾಡ್‌ಗಳು ಏಕಾಏಕಿ ರಸ್ತೆಗೆ ಬಿದ್ದಿದೆ. ಈ ವೇಳೆ ಅದೇ ರಸ್ತೆಯಲ್ಲಿ ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದ ದಂಪತಿ ಹಾಗೂ ಮಗು ಮೇಲೆ ಬಿದ್ದಿದೆ.
ಇದನ್ನೂ ಓದಿರಿ: ಶ್ರದ್ಧಾ ವಾಕರ್ ಹತ್ಯೆ ಪ್ರಕರಣ: ಅಫ್ತಾಬ್‌ಗೆ 14 ದಿನ ನ್ಯಾಯಾಂಗ ಬಂಧನ ವಿಸ್ತರಿಸಿದ ದೆಹಲಿ ನ್ಯಾಯಾಲಯ
ಈ ಘಟನೆಯಲ್ಲಿ ತಾಯಿ ಹಾಗೂ ಮಗುವಿಗೆ ಗಂಭೀರ ಗಾಯಗಳಾಗಿದ್ದು, ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ಸೇರಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ತಾಯಿ-ಮಗು ಕೊನೆಯುಸಿರೆಳೆದಿದ್ದಾರೆ. ಈ ಘಟನೆಯಲ್ಲಿ ಸಾವನ್ನಪ್ಪಿರುವವರನ್ನು ತೇಜಸ್ವಿನಿ (35) ಹಾಗೂ ವಿಹಾನ್ (2 ವರ್ಷ 6 ತಿಂಗಳು) ಎಂದು ಗುರುತಿಸಲಾಗಿದೆ.
ಇದನ್ನೂ ಓದಿರಿ: ಶಾಲೆಯ ಬಸ್ ನಿಂದ ಕೆಳಗೆ ಬಿದ್ದು ಯು.ಕೆ ಜಿ ವಿದ್ಯಾರ್ಥಿ ಸಾವು