ಬೆಂಗಳೂರು: ಬಿಜೆಪಿ ಮಾಜಿ ಕಾರ್ಪೊರೇಟರ್ ರೇಖಾ ಕದಿರೇಶ್ ಹತ್ಯೆಯ ಪ್ರಮುಖ ಆರೋಪಿಗಳಾದ ಪೀಟರ್ ಮತ್ತು ಸೂರ್ಯನನ್ನು ಪೊಲೀಸರು ಶುಕ್ರವಾರ ಮಧ್ಯಾಹ್ನ ಬಂಧಿಸಿದ್ದಾರೆ.
ಬೆಂಗಳೂರಿನ ಕಾಮಾಕ್ಷಿಪಾಳ್ಯದ ಸುಮನಹಳ್ಳಿಯ ಶನಿ ಮಹಾತ್ಮ ದೇವಸ್ಥಾನದ ಬಳಿ ಆರೋಪಿಗಳು ಪೊಲೀಸರಿಗೆ ಸಿಕ್ಕಿದ್ದಾರೆ. ಶರಣಾಗುವಂತೆ ಪೊಲೀಸರು ಹೇಳಿದಾಗ್ಯೂ ಪೋಲೀಸರ ಮೇಲೇ ದಾಳಿಗೆ ಮುಂದಾಗಿದ್ದಾರೆ. ಈ ಸಮಯದಲ್ಲಿ ಇನ್ಸ್ ಪೆಕ್ಟರ್ ಗಳಾದ ಶಿವಾನಂದ್ ಮತ್ತು ಚಿದಾನಂದ್ ರವರು ಫೈರಿಂಗ್ ಮಾಡಿ ಬಂಧಿಸಿದ್ದಾರೆ.
ನಿನ್ನೆ ಪ್ರತಿಕ್ರಿಯೆ ನೀಡಿದ್ದ ಮುಖ್ಯಮಂತ್ರಿ ಯಡಿಯೂರಪ್ಪ, ಆರೋಪಿಗಳನ್ನು 24 ಗಂಟೆಗಳಲ್ಲಿಯೇ ಬಂಧಿಸಲಾಗುವುದು ಎಂದು ಹೇಳಿದ್ದರು. ಗೃಹ ಸಚಿವರು ಕೂಡ ಶೀಘ್ರವೇ ಆರೋಪಿಗಳನ್ನು ಬಂಧಿಸುವ ವಿಶ್ವಾಸ ವ್ಯಕ್ತಪಡಿಸಿದ್ದರು. ಇದೀಗ ಪೊಲೀಸರು ಕಾರ್ಯಾಚರಣೆಯಲ್ಲಿ ಯಶಸ್ವಿಯಾಗಿದ್ದಾರೆ.
ಇದನ್ನೂ ಓದಿರಿ: ಜಿಯೋ ಫೋನ್ ನೆಕ್ಸ್ಟ್-5 ಜಿ ಸ್ಮಾರ್ಟ್ಫೋನ್ ಬಿಡುಗಡೆಯ ದಿನಾಂಕ ಘೋಷಿಸಿದ ಮುಕೇಶ್ ಅಂಬಾನಿ