music-composer-rajan-of-famed-duo-passes-away

ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ಸಂಗೀತ ನಿರ್ದೇಶಕರಲ್ಲಿ ಒಬ್ಬರಾದ ರಾಜನ್ (87) ಅವರು ಭಾನುವಾರ ರಾತ್ರಿ ವಿಧಿವಶರಾಗಿದ್ದಾರೆ.

ಮೂಲತಃ ಮೈಸೂರಿನವರಾದ ರಾಜನ್ ಅವರು, ಸಹೋದರ ನಾಗೇಂದ್ರ ಅವರ ಜೊತೆಗೂಡಿ ರಾಜನ್ – ನಾಗೇಂದ್ರ ಹೆಸರಿನಲ್ಲಿ 1952 ರಲ್ಲಿ ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟಿದ್ದರು. ಐದು ದಶಕಗಳ ಕಾಲ ಕನ್ನಡ ಚಿತ್ರರಂಗಕ್ಕೆ ದುಡಿದ ಇವರು ಸುಮಾರು 400 ಕ್ಕೂ ಅಧಿಕ ಚಿತ್ರಗಳಿಗೆ ಸಂಗೀತ ನಿರ್ದೇಶನ ಮಾಡಿದ್ದಾರೆ.

ರಾಜನ್ – ನಾಗೇಂದ್ರ ಅವರ ಪೈಕಿ ರಾಜನ್ ಹಿರಿಯರಾಗಿದ್ದರು. ರಾಜನ್ ಅವರ ಸಹೋದರ ನಾಗೇಂದ್ರ ಅವರು 2000 ನೇ ಇಸವಿಯಲ್ಲಿ ಅನಾರೋಗ್ಯದ ಕಾರಣದಿಂದ ಸಾವನ್ನಪ್ಪಿದ್ದರು. ಇವರ ತಂದೆ ರಾಜಪ್ಪ ಹಾರ್ಮೋನಿಯಂ ಮತ್ತು ಕೊಳಲು ವಾದಕರಾಗಿದ್ದರು.

ಕನ್ನಡದ ಪ್ರಖ್ಯಾತ ಚಿತ್ರಗಳಾದ ನ್ಯಾಯವೇ ದೇವರು, ಗಂಧದ ಗುಡಿ, ನಾ ನಿನ್ನಾ ಮರೆಯಲಾರೆ, ಭಾಗ್ಯವಂತರು, ಎರಡು ಕನಸು, ನಾ ನಿನ್ನಾ ಬಿಡಲಾರೆ, ಹೊಂಬಿಸಿಲು, ಬಯಲು ದಾರಿ, ಗಿರಿ ಕನ್ಯೆ ಇಂತಹ ಅನೇಕ ಚಿತ್ರಗಳಿಗೆ ಸಂಗೀತ ನಿರ್ದೇಶನ ಮಾಡಿದ್ದರು.

LEAVE A REPLY

Please enter your comment!
Please enter your name here