mysore-dasara-jamboo-savari-live-updates-ambari-mysuru-palace-dasara-procession-latest-news

ಮೈಸೂರು: ಕರೋನಾ ಕಾರಣದಿಂದಾಗಿ ಕಳೆದೆರಡು ವರ್ಷಗಳಿಂದ ವಿಜೃಂಭಣೆ ಕಳೆದುಕೊಂಡಿದ್ದ ನಾಡಹಬ್ಬ ವಿಶ್ವವಿಖ್ಯಾತ ಮೈಸೂರು ದಸರಾ ಈ ಬಾರಿ ವಿಜೃಂಭಣೆಯಿಂದ ನಡೆಯುತ್ತಿದೆ. ಈ ಭಾರೀ ರಾಷ್ಟ್ರಪತಿ ದ್ರೌಪದಿ ಮುರ್ಮು ಮೈಸೂರು ದಸರಾಕ್ಕೆ ಚಾಲನೆ ನೀಡಿದ್ದು, ಮೂರನೆಯ ಬಾರಿ ಅಭಿಮನ್ಯು ಅಂಬಾರಿಯನ್ನು ಹೊಂತಿದ್ದಾನೆ.

ಅಭಿಮನ್ಯು ಈಗಾಗಲೇ ಅಂಬಾರಿಯನ್ನು ಹೊತ್ತಿದ್ದು, ಮೆರವಣಿಗೆ ಆರಂಭವಾಗಿದೆ. ಅಂಬಾರಿಯಲ್ಲಿ ತಾಯಿ ಚಾಮುಂಡೇಶ್ವರಿ ದೇವಿ ವಿರಾಜಮಾನಳಾಗಿದ್ದಾಳೆ. ಅಭಿಮನ್ಯುವಿಗೆ ಅರ್ಜುನ ನಿಶಾನೆ ಆನೆ, ಚೈತ್ರ ಮತ್ತು ಕಾವೇರಿ ಕುಮ್ಕಿ ಆನೆಗಳಾಗಿ ಜಂಬೂ ಸವಾರಿಯಲ್ಲಿ ಪಾಲ್ಗೊಂಡಿವೆ.

ಈ ಬಾರಿಯ ಜಂಬೂಸವಾರಿ ಮೆರವಣಿಗೆಯಲ್ಲಿ 47 ಸ್ತಬ್ಧಚಿತ್ರ ಪ್ರದರ್ಶನವಾಗಲಿವೆ. 31 ಜಿಲ್ಲೆಗಳ ಕಲೆ, ಸಾಹಿತ್ಯ, ಇತಿಹಾಸವನ್ನು ಸ್ತಬ್ಧಚಿತ್ರ ಪ್ರತಿಬಿಂಬಿಸಲಿವೆ. ಈ ಬಾರಿ ನಟ ದಿ. ಪುನೀತ್​ ರಾಜಕುಮಾರ್​ ಭಾವಚಿತ್ರ ಇರುವ ಸ್ತಬ್ಧಚಿತ್ರ ಪ್ರದರ್ಶನವಾಗಲಿದೆ.

ನಾಡಹಬ್ಬ ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂ ಸವಾರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಿದ್ದಾರೆ. ಈ ಸಮಯದಲ್ಲಿ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಟಿ.ಸೋಮಶೇಖರ್‌, ರಾಜ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಮೈಸೂರು ಪಾಲಿಕೆ ಮೇಯರ್ ಶಿವಕುಮಾರ್‌, ಜಿಲ್ಲಾಧಿಕಾರಿ ಬಗಾದಿ ಗೌತಮ್‌, ಪೊಲೀಸ್ ಆಯುಕ್ತ ಚಂದ್ರಗುಪ್ತ ಉಪಸ್ಥಿತರಿದ್ದರು.

ತಾಜಾ ಸುದ್ದಿಗಳಿಗಾಗಿ ನಮ್ಮನ್ನು ಸಾಮಾಜಿಕ ತಾಣಗಳಲ್ಲಿ ಫಾಲೋ ಮಾಡಿ
ವಾಟ್ಸಪ್ಟೆಲಿಗ್ರಾಮ್ಕೂ ಆಫ್ಫೇಸ್ ಬುಕ್ ಫೇಜ್

ಪ್ರತಿಷ್ಠಿತ ನ್ಯೂಸ್ ಆಫ್ ಗಳಲ್ಲಿ ನಮ್ಮನ್ನು ಫಾಲೋ ಮಾಡಿ
ಡೈಲಿಹಂಟ್ಗೂಗಲ್ ನ್ಯೂಸ್ 

LEAVE A REPLY

Please enter your comment!
Please enter your name here