ಬೆಂಗಳೂರು: ನಮ್ಮ ಮೆಟ್ರೋ 2 ನೇ ಹಂತದ ಕಾಮಗಾರಿಯನ್ನು 2024 ರೊಳಗೆ ಪೂರ್ಣಗೊಳಿಸುವಂತ ಗುರಿಯನ್ನು ಹೊಂದಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಬಸವರಾಜ ಬೊಮ್ಮಾಯಿ ಸುದ್ದಿಗಾರರೊಂದಿಗೆ ಮಾತನಾಡುತ್ತ, ವೇಗವಾಗಿ ಫ್ಲೈಓವರ್ ಕಾಮಗಾರಿಗಳನ್ನು ಮಾಡಲಾಗುತ್ತಿದೆ. ಮೆಟ್ರೋ 2 ನೇ ಹಂತವನ್ನು 2024 ರೊಳಗೆ ಮುಗಿಸಲು ತಿಳಿಸಲಾಗಿದೆ. ಮೆಟ್ರೋ 3 ನೇ ಹಂತಕ್ಕೆ 26 ಸಾವಿರ ಕೋಟಿ ರೂ. ಯೋಜನೆ ಕೇಂದ್ರದ ಅನುಮೋದನೆ ದೊರೆತ ತಕ್ಷಣ, ಕಾಮಗಾರಿ ಪ್ರಾರಂಭಿಸಲಾಗುವುದು ಹೇಳಿದರು.
ಸಬ್ ಅರ್ಬನ್ ರೈಲು ಯೋಜನೆ 15 ಸಾವಿರ ಕೋಟಿ ರೂ. ವೆಚ್ಚದಲ್ಲಿ ಕೈಗೊಳ್ಳಲಾಗುತ್ತಿದ್ದು, ಪ್ರಧಾನಿಯವರು ಯೋಜನೆಗೆ ಅಡಿಗಲ್ಲು ಹಾಕಿದ್ದಾರೆ. ಸ್ಯಾಟಿಲೈಟ್ ಟೌನ್ ರಿಂಗ್ ರೋಡ್, ಬೆಂಗಳೂರು ಹೊರ ವಲಯದ ರಸ್ತೆಗಳ ಕೆಲಸ ಪ್ರಾರಂಭವಾಗಿದೆ. ಫೆರಿಫೆರಲ್ ರಿಂಗ್ ರಸ್ತೆಗೆ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಿ ಕೆಲಸ ಕೈಗೊಳ್ಳಲಾಗುವುದು. ಕಾವೇರಿ 5 ನೇ ಹಂತದ ಕಾಮಗಾರಿಯನ್ನು ಪೂರ್ಣಗೊಳಿಸಲಾಗುತ್ತಿದೆ. ಬಹಳ ವರ್ಷದಿಂದ ನೆನೆಗುದಿಗೆ ಬಿದ್ದಿರುವ ಯೋಜನೆಗಳಿಗೆ ಚಾಲನೆ ನೀಡಲಾಗಿದೆ.
ಇದನ್ನೂ ಓದಿರಿ: ರಾಜ್ಯದಲ್ಲಿ ಬಾಲ್ಯವಿವಾಹ ತಡೆಗೆ ಇನ್ನು ಮುಂದೆ ಮಹತ್ವದ ಕ್ರಮ !