ಬೆಳಗಾವಿ: ಶೀಘ್ರದಲ್ಲಿ ನಂದಿನಿ ಹಾಲಿನ ದರ ಪರಿಷ್ಕರಣೆ ಮಾಡಿ ಪ್ರತಿ ಲೀಟರ್ ಹಾಲಿಗೆ 3 ರೂಪಾಯಿ ಹೆಚ್ಚಳ ಮಾಡಲಾಗುವುದು ಎಂದು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದ್ದಾರೆ.
ಬೆಳಗಾವಿ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದಿಂದ ಚನ್ನಮ್ಮ ಕಿತ್ತೂರಿನ ಹೂಲಿಕಟ್ಟಿ ಕ್ರಾಸ್ ನಲ್ಲಿ 10 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಹೂಲಿಕಟ್ಟಿ ಶೀಥಲೀಕರಣ ಕೇಂದ್ರಕ್ಕೆ ಭಾನುವಾರ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು. ನಂದಿನಿ ಹಾಲಿನ ಪರಿಷ್ಕರಣೆಯ ಹಣ ಸಂಪೂರ್ಣವಾಗಿ ರೈತರಿಗೆ ಸಂದಾಯವಾಗಲಿದೆ.
ಇದನ್ನೂ ಓದಿರಿ:ಭಾರತದಲ್ಲಿ ಟು ಫಿಂಗರ್ ಟೆಸ್ಟ್ ನಿಷೇಧ; ಸುಪ್ರೀಂ ಕೋರ್ಟ್ ಮಹತ್ವದ ಆದೇಶ
ರಾಜ್ಯದ 16 ಜಿಲ್ಲಾ ಹಾಲು ಒಕ್ಕೂಟಗಳು, ಕೆಎಂಎಫ್ ಹಾಲಿನ ದರ ಪರಿಷ್ಕರಿಸುವಂತೆ ಪ್ರಸ್ತಾಪನೆ ಸಲ್ಲಿಸಿವೆ. ಹೈನುಗಾರ ಹಿತದುಷ್ಟಿಯಿಂದ ಹಾಲಿನ ದರ ಏರಿಕೆ ಮಾಡುವುದು ಅನಿವಾರ್ಯವಾಗಿದೆ. ಹಾಲಿನ ದರ ಪರಿಷ್ಕರಣೆ ಸಂಬಂಧ ಈಗಾಗಲೆ ಸಾಮಾನ್ಯ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಬಾಲಚಂದ್ರ ಜಾರಕಿಹೊಳಿ ಹೇಳಿದ್ದಾರೆ.
ಇದನ್ನೂ ಓದಿರಿ: ನಾಳೆ ನಾಡಿನಾದ್ಯಂತ ರಾಜ್ಸೋತ್ಸವ, ಸಂಜೆ ಪುನೀತ್ ಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ