ಹಾಲಿನ ದರ ಹೆಚ್ಚಳ । nandini-milk-price-hike-kmf-to-increase-nandini-milk-price-by-3-rupees-says-balachandra-jarkiholi

ಬೆಂಗಳೂರು: ಬಹಳ ದಿನಗಳಿಂದ ನೆನೆಗುದಿಗೆ ಬಿದ್ದಿರುವ ನಂದಿನಿ ಹಾಲಿನ ದರ (Nandini Milk Price) ಹೆಚ್ಚಳ ಕುರಿತಂತೆ ಇಂದು ರಾಜ್ಯ ಸರ್ಕಾರ ಅಂತಿಮ ತೀರ್ಮಾನ ತೆಗೆದುಕೊಳ್ಳುವ ಸಾಧ್ಯತೆಯಿದೆ. ಇಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರು ಉನ್ನತಮಟ್ಟದ ಸಭೆ ಕರೆದು ಚರ್ಚೆ ನಡೆಸಲಿದ್ದಾರೆ.

ಇಂದು ಸಂಜೆ 5 ಕ್ಕೆ ಕೆಎಂಎಫ್ ಅಧ್ಯಕ್ಷ ಬಾಲ ಚಂದ್ರ ಜಾರಕಿಹೊಳಿ, ಪಶುಸಂಗೋಪನೆ ಸಚಿವರು ಸೇರಿದಂತೆ ಹಲವು ಪ್ರಮುಖರು ಸಿಎಂ ಜತೆ ಈ ಸಂಬಂಧ ಚರ್ಚೆ ನಡೆಸಲಿದ್ದಾರೆ. ಆ ನಂತರವಷ್ಟೇ ಹಾಲಿನ ದರ ಹೆಚ್ಚಳ ಕುರಿತಂತೆ ಒಂದು ತೀರ್ಮಾನಕ್ಕೆ ಬರುವುದಾಗಿ ಸರಕಾರ ತಿಳಿಸಿದೆ.

ಇದನ್ನೂ ಓದಿರಿ: ಶ್ರದ್ಧಾ ಹತ್ಯೆ ಪ್ರಕರಣ: ಮೆಹ್ರೌಲಿ ಅರಣ್ಯದಲ್ಲಿ ಶ್ರದ್ಧಾಳ ತಲೆಬುರುಡೆ, ದವಡೆಯ ಭಾಗ ಪತ್ತೆ

ಇದಕ್ಕೂ ಮೊದಲು ಕೆಎಂಎಫ್ ಪ್ರತಿ ಲೀಟರ್ ಹಾಲಿನ ದರ 3 ರೂ. ಮತ್ತು ಪ್ರತಿ ಕೆಜಿ ಮೊಸರಿನ ಬೆಳೆಯನ್ನು 3 ರೂ. ಹೆಚ್ಚಿಸಿ ಆದೇಶ ಹೊರಡಿಸಿತ್ತು. ಇದಕ್ಕೆ ಮುಖ್ಯಮಂತ್ರಿಗಳು ತಡೆ ನೀಡಿ, ಸಭೆ ನಡೆಸಿ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ಹೇಳಿದ್ದರು. ರೈತರು ಅಕಾಲಿಕ ಮಳೆ, ರೋಗಗಳು ಮತ್ತು ಪಶು ಆಹಾರದ ಬೆಲೆಯಲ್ಲಿನ ಹೆಚ್ಚಳದಿಂದಾಗಿ ತೊಂದರೆಯಲ್ಲಿದ್ದಾರೆ. ಹಾಗಾಗಿ 3 ರೂ. ಹೆಚ್ಚಳ ಮಾಡಿ, ಏರಿಕೆಯಾದ ದರವನ್ನು ಸಂಪೂರ್ಣವಾಗಿ ರೈತರಿಗೆ ನೀಡಲಾಗುತ್ತದೆ ಎಂದು ಕೆಎಂಎಫ್ ತನ್ನ ಆದೇಶದಲ್ಲಿ ಹೇಳಿತ್ತು.

ಇದನ್ನೂ ಓದಿರಿ: ಅವಳಿ ಮಕ್ಕಳಿಗೆ ಅಮ್ಮನಾದ ಮುಖೇಶ್ ಅಂಬಾನಿ ಪುತ್ರಿ ಇಶಾ ಅಂಬಾನಿ

ತಾಜಾ ಸುದ್ದಿಗಳಿಗಾಗಿ ನಮ್ಮನ್ನು ಸಾಮಾಜಿಕ ತಾಣಗಳಲ್ಲಿ ಫಾಲೋ ಮಾಡಿ
ವಾಟ್ಸಪ್ಟೆಲಿಗ್ರಾಮ್ಕೂ ಆಫ್ಫೇಸ್ ಬುಕ್ ಫೇಜ್

ಪ್ರತಿಷ್ಠಿತ ನ್ಯೂಸ್ ಆಫ್ ಗಳಲ್ಲಿ ನಮ್ಮನ್ನು ಫಾಲೋ ಮಾಡಿ
ಡೈಲಿಹಂಟ್ಗೂಗಲ್ ನ್ಯೂಸ್ 

LEAVE A REPLY

Please enter your comment!
Please enter your name here