national-news_union-minister-ram-vilas-paswan-passes-away

ನವದೆಹಲಿ: ಲೋಕ ಜನಶಕ್ತಿ ಪಾರ್ಟಿಯ ಸಂಸ್ಥಾಪಕ, ಕೇಂದ್ರ ಗ್ರಾಹಕ ವ್ಯವಹಾರಗಳ ಖಾತೆಯ ಸಚಿವ ರಾಮ್‌ ವಿಲಾಸ್‌ ಪಾಸ್ವಾನ್‌ (74) ಅವರು ಇಂದು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಲೋಕ ಜನಶಕ್ತಿ ಪಾರ್ಟಿಯಿಂದ 8 ಬಾರಿ ಜಯಗಳಿಸಿದ್ದ ಇವರು, ಪ್ರಸಕ್ತ ಏನ್ ಡಿ ಎ ಸರಕಾರಕ್ಕೆ ಬೆಂಬಲ ನೀಡಿ ಸರಕಾರದಲ್ಲಿ ಕೇಂದ್ರ ಗ್ರಾಹಕ ವ್ಯವಹಾರಗಳ ಖಾತೆಯ ಸಚಿವರಾಗಿಯೂ ಕಾರ್ಯ ನಿರ್ವಹಿಸುತ್ತಿದ್ದರು. ಇತ್ತೀಚಿಗೆ ಹೃದಯ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದ ಇವರು ಇದೀಗ ಮೃತಪಟ್ಟಿದ್ದಾರೆ. ಈ ಕುರಿತು ಅವರ ಪುತ್ರ ಚಿರಾಗ್ ಪಾಸ್ವಾನ್ ಅವರು ಟ್ವಿಟ್ ಮಾಡಿ ಮಾಹಿತಿ ಹಂಚಿಕೊಂಡಿದ್ದಾರೆ.

ಕಳೆದ ಐದು ದಶಕಗಳಿಂದ ಬಿಹಾರದಲ್ಲಿ ವಿಶೇಷ ಬದಲಾವಣೆಗಳನ್ನು ತಂದು, ದಲಿತರ ಪ್ರಮುಖ ನಾಯಕರಲ್ಲಿ ಒಬ್ಬರಾಗಿ ಗುರುತಿಸಿಕೊಂಡಿದ್ದರು. ಸಜ್ಜನ ಮತ್ತು ಜನಪರ ರಾಜಕಾರಣಿಯನ್ನು ಕಳೆದುಕೊಂಡು ಅವರ ಅಪಾರ ಅಭಿಮಾನಿಗಳು ಮತ್ತು ಕುಟುಂಬಸ್ಥರು ತುಂಬಲಾರದ ನಷ್ಟವನ್ನು ಅನುಭವಿಸಿದ್ದಾರೆ.

ತಾಜಾ ಸುದ್ದಿಗಳಿಗಾಗಿ ನಮ್ಮನ್ನು ಸಾಮಾಜಿಕ ತಾಣಗಳಲ್ಲಿ ಫಾಲೋ ಮಾಡಿ
ವಾಟ್ಸಪ್ಟೆಲಿಗ್ರಾಮ್ಕೂ ಆಫ್ಫೇಸ್ ಬುಕ್ ಫೇಜ್

ಪ್ರತಿಷ್ಠಿತ ನ್ಯೂಸ್ ಆಫ್ ಗಳಲ್ಲಿ ನಮ್ಮನ್ನು ಫಾಲೋ ಮಾಡಿ
ಡೈಲಿಹಂಟ್ಗೂಗಲ್ ನ್ಯೂಸ್ 

LEAVE A REPLY

Please enter your comment!
Please enter your name here