neet-2021-exam-date-september-12-education-minister-dharmendra-pradhan-announced

ದೆಹಲಿ: 2021 ರ ನೀಟ್ (ಯುಜಿ) ಪರೀಕ್ಷೆಯನ್ನು ದೇಶದಾದ್ಯಂತ ಸೆಪ್ಟೆಂಬರ್ 12 ರಂದು  ನಡೆಸಲಾಗುವುದು ಎಂದು ಕೇಂದ್ರ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಧರ್ಮೇಂದ್ರ ಪ್ರಧಾನ್ ಅವರು ತಿಳಿಸಿದ್ದಾರೆ.

ಈ ಬಾರಿ ಕೊರೋನಾ ಸೋಂಕಿನ ಭಯ ಜನರನ್ನು ಕಾಡುತ್ತಿದ್ದು, ಪರೀಕ್ಷೆಗಳನ್ನು ನಡೆಸಲು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ. ಇದೀಗ 2021 ರ ನೀಟ್ ಪರೀಕ್ಷೆಯ ದಿನಾಂಕವನ್ನು ಸಹ ಘೋಷಣೆ ಮಾಡಲಾಗಿದೆ. ಸೋಂಕು ತಡೆಗಟ್ಟಲು ಅಂತರವನ್ನು ಹೆಚ್ಚಿಸಬೇಕಿರುವುದರಿಂದ ಈ ಬಾರಿ ಪರೀಕ್ಷಾ ಕೇಂದ್ರಗಳ ಸಂಖ್ಯೆಯನ್ನು ಹೆಚ್ಚಿಸಲಾಗಿದೆ. ಪ್ರತಿಬಾರಿ 155 ನಗರಗಳಲ್ಲಿ ನೀಟ್ ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗುತ್ತಿತ್ತು, ಆದರೆ ಈ ಬಾರಿ 198 ನಗರಗಳಿಗೆ ಹೆಚ್ಚಿಸಲಾಗಿದೆ.

ಇದನ್ನೂ ಓದಿರಿ: ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸುವ ರಾಜ್ಯ ಸರ್ಕಾರದ ನಿರ್ಧಾರವನ್ನು ಎತ್ತಿಹಿಡಿದ ಹೈಕೋರ್ಟ್

ನೀಟ್ (ಯುಜಿ) ಪರೀಕ್ಷೆಯ ಕುರಿತು ಟ್ವಿಟ್ ಮಾಡಿರುವ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು, “ನಾಳೆ (ಜುಲೈ 13)ಸಂಜೆ 5 ಗಂಟೆಯಿಂದಲೇ ಅರ್ಜಿಯನ್ನು ಹಾಕಲು ಅವಕಾಶಮಾಡಿಕೊಡಲಾಗುವುದು ಎಂದು ತಿಳಿಸಿದ್ದಾರೆ. ಪರೀಕ್ಷಾ ಕೇಂದ್ರದಲ್ಲಿ ಕೋವಿಡ್ ಸುರಕ್ಷತೆಗಾಗಿ ಸಂಪೂರ್ಣ ಸೆನಿಟೈಸೇಶನ್ ಮಾಡಲಾಗುವುದು. ಪರೀಕ್ಷಾ ಅಭ್ಯರ್ಥಿಗಳಿಗೆ ಮಾಸ್ಕ್ ವಿತರಿಸಲಾಗುವುದು, ಅಲ್ಲದೇ ಪರೀಕ್ಷಾ ಕೇಂದ್ರಕ್ಕೆ ಪ್ರವೇಶಿಸುವ ಮತ್ತು ಹೊರಹೋಗುವ ಸಮಯದಲ್ಲಿ ಸೆನಿಟೈಸೇಶನ್ ಕಡ್ಡಾಯವಾಗಿ ಮಾಡಲಾಗುತ್ತದೆ” ಎಂದು ಸಚಿವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here