ತಂತ್ರಜ್ಞಾನ ಕಂಪನಿಗಳು ಡಿಜಿಟಲ್ ಸುದ್ದಿ ಪೋರ್ಟಲ್‌ಗಳಿಗೆ ಆದಾಯ ಹಂಚಬೇಕು-ರಾಜೀವ್ ಚಂದ್ರಶೇಖರ್

tech-companies-should-share-revenue-with-digital-news-publishers-information-and-broadcasting-minister

ನವದೆಹಲಿ: ಗೂಗಲ್, ಫೇಸ್ ಬುಕ್ ನಂತಹ ಅಂತಾರಾಷ್ಟ್ರೀಯ ಮತ್ತು ರಾಷ್ಟ್ರೀಯ ತಂತ್ರಜ್ಞಾನ ಕ್ಷೇತ್ರದ ಕಂಪನಿಗಳು, ಡಿಜಿಟಲ್‌ ಮಾಧ್ಯಮದ ಸುದ್ದಿಗಳನ್ನು ಮತ್ತು ಸುದ್ದಿ ಲಿಂಕ್‌ಗಳನ್ನು ವೀಕ್ಷಕರಿಗೆ ಒದಗಿಸುವ ಮೂಲಕ ಪಡೆಯುವ ಲಾಭದಲ್ಲಿ ಇಂತಿಷ್ಟು ಪಾಲನ್ನು ನಿಗದಿತ ಮಾಧ್ಯಮ ಸಂಸ್ಥೆಗೆ ನೀಡಬೇಕು ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್ ಅವರು ಒತ್ತಾಯಿಸಿದ್ದಾರೆ.

ಡಿಜಿಟಲ್‌ ನ್ಯೂಸ್‌ ಪಬ್ಲಿಷರ್ಸ್‌ ಅಸೋಸಿಯೇಷನ್‌ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಸಮ್ಮೇಳನದಲ್ಲಿ ಮಾತನಾಡಿದ ಸಚಿವ ರಾಜೀವ್‌ ಚಂದ್ರಶೇಖರ್, ‘ಮೂಲ ವಿಷಯ ಮತ್ತು ವಸ್ತು ಸೃಷ್ಟಿಸುವ ಪ್ರಕಾಶಕರಿಗೆ ಆದಾಯದಲ್ಲಿ ನ್ಯಾಯಯೋಚಿತ ಪಾಲು ದೊರೆಯಬೇಕು. ಸುದ್ದಿ ಉದ್ಯಮದ ಬೆಳವಣಿಗೆಯ ದೃಷ್ಟಿಯಿಂದ ಇದು ತುಂಬಾ ಅವಶ್ಯವಾಗಿದೆ. ಕೊರೋನಾ ಸಂಕಷ್ಟ ನಂತರದ ಕಾಲಘಟ್ಟದಲ್ಲಿ ಡಿಜಿಟಲ್‌ ಸುದ್ದಿ ಉದ್ಯಮವಷ್ಟೇ ಅಲ್ಲದೆ ಮುದ್ರಣ ಮಾಧ್ಯಮಗಳೂ ಅರ್ಥಿಕ ಸಮಸ್ಯೆಯನ್ನು ಎದುರಿಸಿವೆ. ಮುದ್ರಣ ಮಾಧ್ಯಮಗಳ ಮೇಲೆ ಕೆಟ್ಟ ಪರಿಣಾಮ ಉಂಟಾದರೆ ಪತ್ರಿಕೋದ್ಯಮದ ಭವಿಷ್ಯ ಮಸುಕಾಗುವುದಂತೂ ಸ್ಪಷ್ಟ’ ಎಂದು ಅವರು ಅಭಿಪ್ರಾಯ ಪಟ್ಟಿದ್ದಾರೆ.

ಇದನ್ನೂ ಓದಿರಿ: 50,000 ಕ್ಕೂ ಅಧಿಕ ಮಂದಿಗೆ ಹಕ್ಕುಪತ್ರ ನೀಡಿ ದಾಖಲೆ ನಿರ್ಮಿಸಿದ ಪ್ರಧಾನಿ ಮೋದಿ

ಆಸ್ಪ್ರೇಲಿಯಾ, ಕೆನಡಾ, ಫ್ರಾನ್ಸ್‌ ಮತ್ತು ಐರೋಪ್ಯ ಒಕ್ಕೂಟಗಳಲ್ಲಿ ಈ ಕುರಿತಂತೆ ಸ್ಪಷ್ಟ ಕಾನೂನು ಜಾರಿಗೆ ತರಲಾಗಿದೆ. ಸುದ್ದಿಯ ಮಾಹಿತಿ ರಚನೆಕಾರರು ಮತ್ತು ಸಂಗ್ರಹಕಾರರ ನಡುವೆ ಆದಾಯ ಹಂಚಿಕೆಗೆ ಸ್ಪಷ್ಟ ನೀತಿ ವಿದೇಶಗಳಲ್ಲಿದೆ. ಅದು ಭಾರತದಲ್ಲಿ ಶೀಘ್ರವೇ ಜಾರಿಗೆ ಬರಬೇಕು ಎಂದು ಸಚಿವ ರಾಜೀವ್‌ ಚಂದ್ರಶೇಖ ತಿಳಿಸಿದ್ದಾರೆ.

ಯಂಕ, ನಾಣಿಯದ್ದು ತಿರುಕನ ಕನಸು: ಸಿದ್ದು, ಡಿಕೆಶಿ ಬಗ್ಗೆ ಯಡಿಯೂರಪ್ಪ ವ್ಯಂಗ್ಯ

bs-yediyurappa-talks-about-siddaramaiah-dk-shivakumar-cm-race

ಸಿಂದಗಿ: ಅಲ್ಲೊಬ್ಬ ಇಲ್ಲೊಬ್ಬ ಯಂಕ, ನಾಣಿಯ ಹಾಗೆ ನಾನೇ ಮುಂದಿನ ಮುಖ್ಯಮಂತ್ರಿ ಎಂದು ಕನಸು ಕಾಣುತ್ತಿದ್ದಾರೆ. ಅದು ತಿರುಕನ ಕನಸಾಗಿಯೇ ಉಳಿಯಲಿದೆ ಎಂದು ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಕುರಿತು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ವ್ಯಂಗ್ಯವಾಡಿದ್ದಾರೆ. 

ವಿಜಯ ಸಂಕಲ್ಪ ಯಾತ್ರೆಯಲ್ಲಿ ಭಾಗಿಯಾಗಿ ಮಾತನಾಡುತ್ತ, ಕಾಂಗ್ರೆಸ್ ನಾಯಕರ ವಿರುದ್ಧ ಮಾತಿನ ದಾಳಿ ಮಾಡಿದರು. ಅಧಿಕಾರದಲ್ಲಿದ್ದಾಗ ಅಭಿವೃದ್ಧಿ ಮಾಡದೇ ನಾಟಕ ಮಾಡಿಕೊಂಡು ಕಾಂಗ್ರೆಸ್ ಜನರಿಗೆ ಮೋಸಮಾಡಿಕೊಂಡು ಬಂದಿದೆ. ನರೇಂದ್ರ ಮೋದಿಯವರ ಅಭಿವೃದ್ಧಿ ಕಾರ್ಯವನ್ನು ನೋಡಲಾಗದೇ ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ. ಕಾಂಗ್ರೆಸ್ ಪಕ್ಷ ಎಲ್ಲಿದೆ? ಯಾವ ರಾಜ್ಯದಲ್ಲಿದೆ ? ಕಾಂಗ್ರೆಸ್ ಪಕ್ಷದ ನಾಯಕರು ಯಾರು ? ಎಂದು ಪ್ರಶ್ನೆ ಮಾಡಿದ್ದಾರೆ. 

ಬಿಜೆಪಿ 140 ಸ್ಥಾನವನ್ನು ಗೆಲ್ಲುವ ಮೂಲಕ ರಾಜ್ಯದಲ್ಲಿ ಮತ್ತೊಮ್ಮೆ ಅಧಿಕಾರಕ್ಕೆ ತರುತ್ತೇವೆ. ದೇಶದಲ್ಲಿ ಬಿಜೆಪಿ ಗಾಳಿ ಬಿಸುತ್ತಿವೆ. ಪಾಕಿಸ್ತಾನದ ಪ್ರಧಾನಿಯೇ ಭಾರತವನ್ನು ಹೊಗಳುತ್ತಿದ್ದಾರೆ. ಅಂದಮೇಲೆ ನೀವೇ ಯೋಚನೆ ಮಾಡಿ ದೇಶದ ಅಭಿವೃದ್ಧಿ ಹೇಗೆ ಆಗುತ್ತಿದೆ ಎಂದು. ನಾನು ಜನರಲ್ಲಿ ಮತ್ತೊಮ್ಮೆ ಕೈಮುಗಿದು ಕೇಳಿಕೊಳ್ಳುತ್ತೇನೆ, ಬಿಜೆಪಿಯನ್ನು ಬೆಂಬಲಿಸಿ ಮತ್ತೊಮ್ಮೆ ಅಧಿಕಾರಕ್ಕೆ ತರಬೇಕೆಂದು ಕೇಳಿಕೊಂಡರು. 

ಇದನ್ನೂ ಓದಿರಿ: 50,000 ಕ್ಕೂ ಅಧಿಕ ಮಂದಿಗೆ ಹಕ್ಕುಪತ್ರ ನೀಡಿ ದಾಖಲೆ ನಿರ್ಮಿಸಿದ ಪ್ರಧಾನಿ ಮೋದಿ

50,000 ಕ್ಕೂ ಅಧಿಕ ಮಂದಿಗೆ ಹಕ್ಕುಪತ್ರ ನೀಡಿ ದಾಖಲೆ ನಿರ್ಮಿಸಿದ ಪ್ರಧಾನಿ ಮೋದಿ 

pm-modi-event-enters-record-book-with-over-50000-title-deeds-in-a-day

ಕಲಬುರಗಿ: ಪ್ರಧಾನಿ ನರೇಂದ್ರ ಮೋದಿಯವರು ಗುರುವಾರ ಕಲಬುರಗಿ ಜಿಲ್ಲೆಯಲ್ಲಿನ ಹಲವು ಅಭಿವೃದ್ಧಿ ಕಾರ್ಯ ಮತ್ತು ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಈ ವೇಳೆ ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು ಮತ್ತು ವಿಜಯಪುರ ಜಿಲ್ಲೆಗಳ ಬಂಜಾರ ಸಮುದಾಯಗಳ 51,900 ಮಂದಿಗೆ ಹಕ್ಕು ಪತ್ರಗಳನ್ನು ವಿತರಿಸಿ ಗಿನ್ನಿಸ್ ದಾಖಲೆ ನಿರ್ಮಿಸಿದ್ದಾರೆ.

ರಾಜ್ಯ ಸರ್ಕಾರ ಹಕ್ಕುಪತ್ರಗಳ ಫಲಾನುಭವಿಗಳನ್ನು ಗುರುತಿಸಿ ಹಕ್ಕು ಪತ್ರಗಳನ್ನು ನೀಡುವ ಕಾರ್ಯವನ್ನು ಆರು ತಿಂಗಳ ಹಿಂದೆ ಆರಂಭಿಸಿತ್ತು. ಹಕ್ಕು ಪತ್ರ ದಾಖಲಾತಿಯನ್ನು ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಉಚಿತವಾಗಿ ದಾಖಲಾತಿ ಮಾಡಲಾಗುತ್ತದೆ. ತಾಂಡಾ ಕುಟುಂಬದವರು ವಾಸಿಸುತ್ತಿರುವ ಸ್ಥಳಗಳನ್ನು ಕಂದಾಯ ಗ್ರಾಮಗಳೆಂದು ಗುರುತಿಸಲಾಗಿದ್ದು ಈ ಮೂಲಕ ಗ್ರಾಮದ ಜನರು ಸರ್ಕಾರದ ಪ್ರಯೋಜನ ಪಡೆದುಕೊಳ್ಳಬಹುದು ಎಂದರು.

ಇದನ್ನೂ ಓದಿರಿ: ಡಬಲ್ ಇಂಜಿನ್ ಸರ್ಕಾರದಿಂದ ಕರ್ನಾಟಕದಲ್ಲಿ ವಿಕಾಸ್ ಪರ್ವ: ಪ್ರಧಾನಿ ನರೇಂದ್ರ ಮೋದಿ

ಡಬಲ್ ಇಂಜಿನ್ ಸರ್ಕಾರದಿಂದ ಕರ್ನಾಟಕದಲ್ಲಿ ವಿಕಾಸ್ ಪರ್ವ: ಪ್ರಧಾನಿ ನರೇಂದ್ರ ಮೋದಿ

Modi In Kalaburagi District today

ಕಲಬುರಗಿ: ಯಾದಗಿರಿ ಜಿಲ್ಲೆ ಹುಣಸಗಿ ತಾಲೂಕಿನ  ಕೊಡೆಕಲ್ ಗ್ರಾಮಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದಾರೆ. ಇಲ್ಲಿ  ನಾರಾಯಣಪುರ ಎಡದಂಡೆ ಕಾಲುವೆ ನವೀಕರಣ, ವಿಸ್ತರಣೆ ಹಾಗೂ ಆಧುನೀಕರಣ, ಬಹು ಗ್ರಾಮ ಕುಡಿಯುವ ನೀರಿನ ಯೋಜನೆ  ಸೇರಿದಂತೆ ಹಲವು ಅಭಿವೃದ್ಧಿ ಕಾರ್ಯಕ್ರಮಗಳಿಗೆ ಪ್ರಧಾನಿಗಳು ಚಾಲನೆ ನೀಡಿದ್ದಾರೆ.

ಕೊಡೆಕಲ್ ನಲ್ಲಿ ನಡೆದ ಸಮಾರಂಭದಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಕನ್ನಡದಲ್ಲೇ ತಮ್ಮ ಭಾಷಣ ಪ್ರಾರಂಭಿಸಿದರು. ಕರ್ನಾಟಕದ ಸಹೋದರ, ಸಹೋದರಿಯರಿಗೆ ವಂದನೆಗಳು, ಯಾದಗಿರಿಗೆ ದೊಡ್ಡ ಇತಿಹಾಸವಿದೆ ಎಂದು ಹೇಳುತ್ತಾ ರಾಜಾ ವೆಂಕಟ್ಟಪ್ಪರನ್ನು ಪ್ರಧಾನಿ ಮೋದಿ ಸ್ಮರಿಸಿದ್ದಾರೆ.

ಯಾದಗಿರಿಯ ಕೊಡೆಕಲ್ ನಲ್ಲಿ ಬಹುಪಯೋಗಿ ನೀರಾವರಿ ಯೋಜನೆಗೆ ಚಾಲನೆ ನೀಡಿದ್ದೇವೆ.  ಯೋಜನೆಯಿಂದ ಲಕ್ಷಾಂತರ ರೈತರಿಗೆ ಸಹಾಯಕವಾಗಿದೆ. ಮುಂದಿನ 25 ವರ್ಷಗಳ ಸಂಕಲ್ಪ ಇಟ್ಟುಕೊಂಡು ವಿವಿಧ ಯೋಜನೆಗಳನ್ನು ಹಮ್ಮಿಕೊಳ್ಳಲಗುತ್ತಿದೆ. ಕರ್ನಾಟಕದಲ್ಲಿ ಇದೀಗ ವಿಕಾಸ ಪರ್ವ ಸೃಷ್ಟಿಯಾಗಿದೆ.

ಯಾದಗಿರಿ ಜಿಲ್ಲೆ ಹಿಂದುಳಿಯಲು ಹಿಂದಿನ ಸರ್ಕಾರಗಳೇ ಕಾರಣ. ಈಗಿನ ಸರ್ಕಾರದಿಂದ ಕರ್ನಾಟಕದ ಮತ್ತಷ್ಟು ಅಭಿವೃದ್ಧಿಯಾಗಲಿದೆ. ವೋಟ್ ಬ್ಯಾಕಿಂಗ್ ಕಾರಣದಿಂದ ಯಾದಗಿರಿ ಹಿಂದುಳಿದಿದೆ ಎಂದು ಹೇಳಿದರು.

ಇದನ್ನೂ ಓದಿರಿ: ಕಲಬುರಗಿಗೆ ಬಂದಿಳಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ

ಕಲಬುರಗಿಗೆ ಬಂದಿಳಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ

pm-narendra-modi-arrived-at-kalaburagi-governor-cm-and-others-welcomed

ಕಲಬುರಗಿ: ಪ್ರಧಾನಿ ನರೇಂದ್ರ ಮೋದಿಯವರು ಕಲ್ಯಾಣ ಕರ್ನಾಟಕದ ಕಲಬುರಗಿ ಜಿಲ್ಲೆಗೆ ಬಂದಿಳಿದಿದ್ದಾರೆ. ದೆಹಲಿಯಿಂದ ವಿಶೇಷ ವಿಮಾನದಲ್ಲಿ ಬಂದಿಳಿದ ಅವರನ್ನು ರಾಜ್ಯಪಾಲ ತಾವರ್ ಚಂದ್ ಗೆಹ್ಲೊಟ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯ ಬಿಜೆಪಿ ನಾಯಕರು, ಕೇಂದ್ರ ಸಚಿವರು ಬರಮಾಡಿಕೊಂಡಿದ್ದಾರೆ.

ಪ್ರಧಾನಿಗಳು ಇಲ್ಲಿಂದ ನೇರವಾಗಿ ಯಾದಗಿರಿ ಜಿಲ್ಲೆ ಹುಣಸಗಿ ತಲೂಕು ಕೊಡೆಕಲ್‌ ಹೆಲಿಪ್ಯಾಡ್‌ಗೆ ಹೆಲಿಕಾಪ್ಟರ್ ಮೂಲಕ ತೆರಳಲಿದ್ದಾರೆ. ನಾರಾಯಣಪುರ ಎಡದಂಡೆ ಕಾಲುವೆ ವಿಸ್ತರಣೆ ಮತ್ತು ನವೀಕರಣ ಹಾಗೂ ಆಧುನೀಕರಣದ ಕಾಮಗಾರಿಯನ್ನು ಲೋಕಾರ್ಪಣೆ ಮಾಡಲಿದ್ದಾರೆ. 

ಮಧ್ಯಾಹ್ನ 1 ಗಂಟೆಗೆ ಜಲ್‌ ಜೀವನ್‌ ಮಿಷನ್‌ ಅಡಿಯಲ್ಲಿ ಯಾದಗಿರಿ ಬಹುಗ್ರಾಮ ಕುಡಿಯುವ ನೀರು ಸರಬರಾಜು ಯೋಜನೆ ಮತ್ತು ಸರತ್‌ ಚೆನ್ನೈ ಎಕ್ಸ್‌ಪ್ರೆಸ್‌ ವೇ ಪ್ಯಾಕೇಜ್‌ 3ನೇ ಕಾಮಗಾರಿಗಳ ಶಂಕುಸ್ಥಾಪನಾ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಅಲ್ಲಿಂದ ನೇರವಾಗಿ ಕಲಬುರಗಿ ಜಿಲ್ಲೆ ಸೇಡಂ ತಾಲೂಕು ಮಳಖೇಡದಲ್ಲಿ ಆಯೋಜಿಸಲಾಗಿರುವ ಹಕ್ಕು ಪತ್ರ ವಿತರಣೆ ಹಾಗೂ ವಿವಿಧ ಕಾರ್ಯಕ್ರಮಗಳ ಶಿಲನ್ಯಾಸ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. 

ಇದನ್ನೂ ಓದಿರಿ: ಪಾಕಿಸ್ತಾನ ಮೂಲದ ಎಲ್ ಇಟಿ ಉಪ ನಾಯಕ ಅಬ್ದುಲ್ ರೆಹಮಾನ್ ಮಕ್ಕಿ ಜಾಗತಿಕ ಭಯೋತ್ಪಾದಕ

ಪಾಕಿಸ್ತಾನ ಮೂಲದ ಎಲ್ ಇಟಿ ಉಪ ನಾಯಕ ಅಬ್ದುಲ್ ರೆಹಮಾನ್ ಮಕ್ಕಿ ಜಾಗತಿಕ ಭಯೋತ್ಪಾದಕ

pakistan-based-lets-deputy-leader-abdul-rehman-makki-designated-a-global-terrorist-by-un

ಪಾಕಿಸ್ತಾನ ಮೂಲದ ಉಗ್ರಗಾಮಿ ಸಂಘಟನೆ ಲಷ್ಕರ್ ಇ ತೊಯ್ಬಾದ ಉಪ ನಾಯಕ ಅಬ್ದುಲ್ ರೆಹಮಾನ್ ಮಕ್ಕಿಯನ್ನು ವಿಶ್ವಸಂಸ್ಥೆ ಜಾಗತಿಕ ಭಯೋತ್ಪಾದಕ ಎಂದು ಘೋಷಿಸಿದೆ. ಆತನ ಆಸ್ತಿ-ಪಾಸ್ತಿ, ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆಯುವಂತೆ ಆದೇಶವನ್ನು ನೀಡಿದೆ.

ಭಾರತ ಮತ್ತು ಅಮೇರಿಕ ಆತನನ್ನು ಜಾಗತಿಕ ಭಯೋತ್ಪಾದಕ ಎಂದು ಗುರುತಿಸುವಂತೆ ಪ್ರಸ್ತಾವನೆಯನ್ನು ಸಲ್ಲಿಸಿದ್ದವು.  ಈ ಪ್ರಸ್ತಾವನೆಗೆ ಮೊದಲಿಗೆ ಸಹಿ ಹಾಕಿದ್ದ  ಚೀನಾ ನಂತರ ಪ್ರಸ್ತಾವನೆಯಿಂದ ಹಿಂದಕ್ಕೆ ಸರಿಯಿತು. ಈತ ಲಷ್ಕರ್ ಇ ತೊಯ್ಬಾದ ಸಂಘಟನೆಯ ಭಯೋತ್ಪಾದಕ ಕುಕೃತ್ಯಗಳಿಗೆ ಹಣ ಸಂಗ್ರಹಿಸುವುದು ಮತ್ತು ಯುವಕರನ್ನು ಕುಕೃತ್ಯಕ್ಕೆ ನೇಮಕ ಮಾಡಿಕೊಳ್ಳುವುದು ಮಾಡುತ್ತಿದ್ದ ಎಂದು ವಿಶ್ವಸಂಸ್ಥೆ ಹೇಳಿದೆ.

ಪಾಕಿಸ್ತಾನ ಸ್ನೇಹಿತ ಚೀನಾ, ಪಾಕಿಸ್ತಾನ ಮೂಲದ ಭಯೋತ್ಪಾದಕರನ್ನು ಪಟ್ಟಿ ಮಾಡಲು ಭಾರತ ಮತ್ತು ಅದರ ಮಿತ್ರರಾಷ್ಟ್ರಗಳ ಬಿಡ್‌ಗಳನ್ನು ಪದೇ ಪದೇ ತಡೆಹಿಡಿಯುತ್ತಿದೆ. ಕಳೆದ ವರ್ಷ ಜೂನ್‌ನಲ್ಲಿ, 1267 ಅಲ್-ಖೈದಾ ಅಡಿಯಲ್ಲಿ JUD/LeT ಮುಖ್ಯಸ್ಥ ಹಫೀಜ್ ಮುಹಮ್ಮದ್ ಸಯೀದ್‌ನ ಸಂಬಂಧಿ ಮಕ್ಕಿಯನ್ನು ಪಟ್ಟಿ ಮಾಡಲು ಭಾರತ ಮತ್ತು ಯುಎಸ್ ಜಂಟಿ ಪ್ರಸ್ತಾವನೆಯನ್ನು ಕೊನೆಯ ಕ್ಷಣದಲ್ಲಿ ಚೀನಾ ತಡೆಹಿಡಿದಿತ್ತು.

ಇದನ್ನೂ ಓದಿರಿ: ಯಡಿಯೂರಪ್ಪ ಜತೆ ಪ್ರಧಾನಿ ಮೋದಿ ಮಹತ್ವದ ಮಾತುಕತೆ: ಗರಿಗೆದರಿದ ಕುತೂಹಲ

ಯಡಿಯೂರಪ್ಪ ಜತೆ ಪ್ರಧಾನಿ ಮೋದಿ ಮಹತ್ವದ ಮಾತುಕತೆ: ಗರಿಗೆದರಿದ ಕುತೂಹಲ

pm-modi-held-high-level-meeting-with-bsy

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ನಡೆಯುತ್ತಿರುವ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಕರ್ನಾಟಕದ ಹಿರಿಯ ಬಿಜೆಪಿ ನಾಯಕ ಯಡಿಯೂರಪ್ಪ ಜತೆ ಪ್ರಧಾನಿ ನರೇಂದ್ರ ಮೋದಿ ಮಹತ್ವದ ಮಾತುಕತೆ ನಡೆಸಿದ್ದಾರೆ. ಈ ಬೆಳವಣಿಗೆಯು ಅನೇಕರ ಕುತೂಹಲಕ್ಕೆ ಕಾರಣವಾಗಿದ್ದು, ಕರ್ನಾಟಕದಲ್ಲಿ ಬಿಜೆಪಿ ತಂತ್ರಗಾರಿಕೆಯ ಬಗ್ಗೆ ಚರ್ಚೆಗಳು ಆರಂಭವಾಗಿವೆ.

ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಕರ್ನಾಟಕದ ಹಿರಿಯ ಬಿಜೆಪಿ ನಾಯಕ ಬಿ ಎಸ್ ಯಡಿಯೂರಪ್ಪ ಜತೆ ಪ್ರಧಾನಿ ನರೇಂದ್ರ ಮೋದಿಯವರು ಸುಮಾರು 15 ನಿಮಿಷಗಳ ಕಾಲ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ. ಈ ಮಾತುಕತೆಯು ಕುತೂಹಲಕ್ಕೆ ಕಾರಣವಾಗಿದೆ. ಚುನಾವಣೆ ಸಂಬಂಧ ಚರ್ಚೆಗಳು ನಡೆದಿರಬಹುದು ಎಂಬ ಮಾತುಗಳು ಕೇಳಿಬರುತ್ತಿದ್ದು, ಬಿಜೆಪಿ ಹೊಸ ತಂತ್ರಗಾರಿಕೆಯ ಜೊತೆಗೆ ಬರುವ ನಿರೀಕ್ಷೆಗಳಿವೆ.

ಬಿ ಎಸ್ ಯಡಿಯೂರಪ್ಪ ಕರ್ನಾಟಕದ ಪ್ರಭಲ ಜಾತಿಯ ನಾಯಕರಾಗಿದ್ದು, ಅದನ್ನೂ ಮೀರಿ ಬೆಳೆದಿರುವ ಒಬ್ಬ ಹಿರಿಯರಾಗಿದ್ದಾರೆ. ಈ ಕಾರಣಕ್ಕಾಗಿಯೇ ಬಿಜೆಪಿ ಅವರಿಗೆ ವಿಶೇಷ ಜವಾಬ್ದಾರಿಗಳನ್ನು ನೀಡಿದೆ. ನರೇಂದ್ರ ಮೋದಿಯವರು ಪ್ರತ್ಯೇಕವಾಗಿ ಭೇಟಿಯಾಗಿ ಮಾತನಾಡಿರುವುದು ಹಲವು ಚರ್ಚೆಗಳಿಗೆ ಎಡೆಮಾಡಿಕೊಟ್ಟಿದೆ.

ಇದನ್ನೂ ಓದಿರಿ: ನಾ ನಾಯಕಿ ಕಾರ್ಯಕ್ರಮದಲ್ಲಿ ಮಹಿಳೆಯರಿಗೆ ಬಂಪರ್ ಘೋಷಣೆ; ಪ್ರತಿ ತಿಂಗಳು ₹2,000

ನಾ ನಾಯಕಿ ಕಾರ್ಯಕ್ರಮದಲ್ಲಿ ಮಹಿಳೆಯರಿಗೆ ಬಂಪರ್ ಘೋಷಣೆ; ಪ್ರತಿ ತಿಂಗಳು ₹2,000

priyanka-gandhi-vadra-speech-in-na-nayaki-convention

ಬೆಂಗಳೂರು: ವಿಧಾನಸಭಾ ಚುನಾವಣೆಯನ್ನು ದೃಷ್ಟಿಯಲ್ಲಿ ಇಟ್ಟುಕೊಂಡು ಕಾಂಗ್ರೆಸ್ ‘ನಾ ನಾಯಕಿ’ ಕಾರ್ಯಕ್ರಮವನ್ನು ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜನೆ ಮಾಡಿದೆ. ಈ ಕಾರ್ಯಕ್ರಮದಲ್ಲಿ ‘ಗೃಹ ಲಕ್ಷ್ಮಿ’ ಯೋಜನೆಯನ್ನು ಜಾರಿಗೊಳಿಸಿ ರಾಜ್ಯದ ಮಹಿಳೆಯರಿಗೆ ಮಾಸಿಕ ₹ 2000 ನೀಡಲಾಗುವುದು ಎಂದು ಕಾಂಗ್ರೆಸ್ ಘೋಷಣೆ ಮಾಡಿದೆ.

ಇಂದು ಆಯೋಜಿಸಲಾಗಿದ್ದ ನಾ ನಾಯಕಿ ಕಾರ್ಯಕ್ರಮಕ್ಕೆ ಪ್ರಿಯಾಂಕಾ ವಾದ್ರಾ ಆಗಮಿಸಿದ್ದರು. ಇದೇ ಸಮಯದಲ್ಲಿ ಕಾಂಗ್ರೆಸ್ ತಾವು ಅಧಿಕಾರಕ್ಕೆ ಬಂದರೆ ಗೃಹ ಲಕ್ಷ್ಮಿ ಯೋಜನೆಯನ್ನು ಜಾರಿಗೆ ತರುವ ಕುರಿತು ಘೋಷಣೆ ಮಾಡಿದೆ. ಈ ಯೋಜನೆಯಂತೆ ಪ್ರತಿ ಗ್ರಹಿಣಿಯರಿಗೆ ಮಾಸಿಕ 2000 ತಲುಪಿಸಲಿದೆ. ಬೆಲೆ ಏರಿಕೆಯ ಸಂಕಷ್ಟದಿಂದ ಜನಸಾಮಾನ್ಯರು ತತ್ತರಿಸಿದ್ದಾರೆ. ಹೀಗಾಗಿ ಇಡೀ ಕುಟುಂಬದ ನಿರ್ವಹಣೆಯಲ್ಲಿ ಪ್ರಮುಖ ಪಾತ್ರ ವಹಿಸುವ ಮಹಿಳೆಯರಿಗಾಗಿ ಈ ಕೊಡುಗೆ ನೀಡುತ್ತಿದ್ದೇವೆ ಎಂದು ಡಿಕೆ ಶಿವಕುಮಾರ್ ಹೇಳಿದರು.

ಇನ್ನು ಪ್ರಿಯಾಂಕಾ ವಾದ್ರಾ ಸಮಾವೇಶದಲ್ಲಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. ಕರ್ನಾಟಕ ಸರ್ಕಾರದ ವಿರುದ್ಧ 40 ಪರ್ಸೆಂಟ್​​ ಕಮಿಷನ್​ ಆರೋಪವಿದೆ. ಪಿಎಸ್​ಐ ನೇಮಕಾತಿ ಹಗರಣ ಸೇರಿ ಹಲವು ಭ್ರಷ್ಟಾಚಾರ ಆರೋಪಗಳಿವೆ. ಬಿಜೆಪಿ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ. ಪ್ರತಿಯೊಂದು ಇಲಾಖೆಯಲ್ಲೂ ಭ್ರಷ್ಟಾಚಾರ ಆರೋಪ ಕೇಳಿಬಂದಿದೆ.

ಬೆಲೆ ಏರಿಕೆಯಿಂದ ಸಾಮಾನ್ಯ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ರೈತರು, ಬಡವರ ಸಮಸ್ಯೆಗಳಿಗೆ ಕೇಂದ್ರ, ರಾಜ್ಯ ಸರ್ಕಾರ ಸ್ಪಂದಿಸಿಲ್ಲ. ಅನಗತ್ಯ ವಿವಾದಗಳನ್ನು ಸೃಷ್ಟಿಸಿ ಜನರನ್ನು ದಾರಿ ತಪ್ಪಿಸಲಾಗುತ್ತಿದೆ. ಶ್ರೀಮಂತರ ಪರ ಕೇಂದ್ರ ಸರ್ಕಾರ ಕೆಲಸ ಮಾಡುತ್ತಿದೆ ಎಂದು ಪ್ರಿಯಾಂಕಾ ಗಾಂಧಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿರಿ: Nepal Plane Crash: ನೇಪಾಳ ವಿಮಾನ ದುರಂತದ ಕೊನೇ ಕ್ಷಣದ ವಿಡಿಯೋ ಫೋನ್​ನಲ್ಲಿ ಸೆರೆ!

Nepal Plane Crash: ನೇಪಾಳ ವಿಮಾನ ದುರಂತದ ಕೊನೇ ಕ್ಷಣದ ವಿಡಿಯೋ ಫೋನ್​ನಲ್ಲಿ ಸೆರೆ!

nepal-plane-crash-video-by-indian-passenger-moments-before-death

ಕಠ್ಮಂಡು: ನಿನ್ನೆ ನೇಪಾಳದಲ್ಲಿ ಪತನಗೊಂಡ ಯೇತಿ ಏರ್ಲೈನ್ಸ್ ಕಂಪನಿಯ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಭಾರತೀಯ ಎನ್ನಲಾದ ಒಬ್ಬಾತನ ಮೊಬೈಲ್ ದೊರೆತಿದ್ದು, ವಿಮಾನ ಪತನಕ್ಕೂ ಮುನ್ನ ಚಿತ್ರಿಸಲಾದ ವಿಡಿಯೋ ಎಂದು ಸಿಕ್ಕಾಪಟ್ಟೆ ಹರಿದಾಡುತ್ತಿದೆ.

ಸದ್ಯ ವೈರಲ್ ಆಗಿರುವ ಈ ವಿಡಿಯೋದಲ್ಲಿ ವಿಮಾನ ಪತನಕ್ಕೂ ಮುನ್ನ ಚಿತ್ರೀಕರಣ ನಡೆಸಲಾಗಿದ್ದು, ಇದ್ದಕ್ಕಿದ್ದಂತೆ ಪತನಗೊಂಡು ಬೆಂಕಿ ಕಾಣಿಸಿಕೊಳ್ಳುತ್ತಿರುವುದನ್ನು ನೋಡಬಹುದಾಗಿದೆ. ಈ ವಿಡಿಯೋ ಅಪಘಾತವಾದ ಸ್ಥಳದಲ್ಲಿ ದೊರೆತ ಮೊಬೈಲ್ ಒಂದರಲ್ಲಿ ರೆಕಾರ್ಡ್ ಆಗಿದ್ದು ಎಂದು ಶೇರ್ ಮಾಡಲಾಗುತ್ತಿದೆ.

ಇದನ್ನೂ ಓದಿರಿ: ನಾ ನಾಯಕಿ ಕಾರ್ಯಕ್ರಮದಲ್ಲಿ ಮಹಿಳೆಯರಿಗೆ ಬಂಪರ್ ಘೋಷಣೆ; ಪ್ರತಿ ತಿಂಗಳು ₹2,000

ಈ ಅಪಘಾತದಲ್ಲಿ 72 ಜನರು ಸಾವನ್ನಪಿರುವ ಕುರಿತು ಮಾಹಿತಿ ದೊರೆತಿದ್ದು, ಇದೀಗ ಬೆಳಕಿಗೆ ಬಂದಿರುವ ವೀಡಿಯೋವನ್ನು ಅಪಘಾತಕ್ಕೂ ಕೆಲವು ಸೆಕೆಂಡುಗಳ ಮೊದಲು ಸೆರೆ ಹಿಡಿಯಲಾಗಿದೆ ಎಂದು ಹೇಳಲಾಗುತ್ತಿದೆ. ಇದರ ಸತ್ಯಾಸತ್ಯತೆ ಇನ್ನೇನು ಹೊರಬರಬೇಕಿದೆ.

ರಾಜ್ಯಕ್ಕೆ ಇಂದು ಪ್ರಿಯಾಂಕಾ: ‘ನಾ ನಾಯಕಿ’ ಸಮಾವೇಶದಲ್ಲಿ ಬಾಗಿ

priyanka-gandhi-in-bengaluru-today

ಬೆಂಗಳೂರು: ರಾಜ್ಯಕ್ಕೆ ಇಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ವಾದ್ರಾ ‘ನಾ ನಾಯಕಿ’ ಸಮಾವೇಶದಲ್ಲಿ ಭಾಗಿಯಾಗಲು ಆಗಮಿಸುತ್ತಿದ್ದಾರೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ಬ್ರಹತ್ ಸಮಾವೇಶ ಆಯೋಜಿಸಲಾಗಿದ್ದು, 12 ಗಂಟೆಗೆ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ.

ಏಪ್ರಿಲ್-ಮೇ ನಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಮಹಿಳಾ ಮತದಾರರನ್ನು ಸೆಳೆಯುವ ಉದ್ದೇಶದಿಂದ ಮಹಿಳೆಯರಿಗಾಗಿ ಪ್ರತ್ಯೇಕ ಪ್ರಣಾಳಿಕೆ ಬಿಡುಗಡೆ ಮಾಡಲು ಕಾಂಗ್ರೆಸ್ ತಯಾರಿ ಮಾಡಿಕೊಂಡಿದೆ. ಈ ಉದ್ದೇಶದ ಭಾಗವಾಗಿ ಇಂದು ಅರಮನೆ ಮೈದಾನದಲ್ಲಿ ‘ನಾ ನಾಯಕಿ’ ಕಾರ್ಯಕ್ರಮ ಆಯೋಜನೆ ಮಾಡಿದೆ.

ಇಂದಿನ ಸಮಾವೇಶದಲ್ಲಿ ಗ್ರಾಮ ಪಂಚಾಯಿತಿ, ಸಹಕಾರ ಸಂಘಗಳಲ್ಲಿ ಸ್ಪರ್ಧಿಸಿದ ಮಹಿಳಾ ನಾಯಕಿಯರು ಈ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಕಾರ್ಯಕ್ರಮಕ್ಕೆ ಸುಮಾರು 1 ಲಕ್ಷ ಮಹಿಳಾ ಕಾರ್ಯಕರ್ತೆಯರನ್ನು ಸೇರಿಸುವ ಯೋಜನೆಯನ್ನು ಕಾಂಗ್ರೆಸ್ ಹಾಕಿಕೊಂಡಿದೆ.

ಕಾರ್ಯಕ್ರಮಕ್ಕೆ ಆಗಮಿಸುತ್ತಿರುವ ಪ್ರಿಯಾಂಕಾ ಅವರ ಬೃಹತ್ ಕಟೌಟ್​​ಗಳನ್ನು ನಿಲ್ಲಿಸಿ ಎಲ್ಲೆಡೆ ಸ್ವಾಗತ ಕೋರಲಾಗುತ್ತಿದೆ. ಇಂದಿನ ಕಾರ್ಯಕ್ರಮದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷ ಡಿಕೆಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ, ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪಾ ಅಮರನಾಥ್ ಸೇರಿದಂತೆ ಹಲವು ನಾಯಕರು ಭಾಗವಹಿಸಲಿದ್ದಾರೆ.

ಇದನ್ನೂ ಓದಿರಿ: ಮಕರ ಸಂಕ್ರಾಂತಿಗೆ ನಟಿ ಅಮೂಲ್ಯ ಹಂಚಿಕೊಂಡ ಮುದ್ದಾದ ಫ್ಯಾಮಿಲಿ ಫೋಟೋಗಳು