ಮುಂದಿನ ವರ್ಷ ಕನ್ನಡ ಸಾಹಿತ್ಯ ಸಮ್ಮೇಳನ ಸಕ್ಕರೆ ನಾಡು ಮಂಡ್ಯದಲ್ಲಿ !

next-year-kannada-sahitya-sammelan-in-mandya-says-dr-mahesh-joshi

ಹಾವೇರಿ: ಮುಂದಿನ ವರ್ಷ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಸಕ್ಕರೆ ನಾಡು ಮಂಡ್ಯದಲ್ಲಿ ಆಯೋಜಿಸಲು ನಿರ್ಧರಿಸಲಾಗಿದೆ. ಇಂದು ನಡೆದ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿಣಿ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.

86 ನೇಯ ಕನ್ನಡ ಸಾಹಿತ್ಯ ಸಮ್ಮೇಳನ ಹಾವೇರಿಯಲ್ಲಿ ಅದ್ದೂರಿಯಾಗಿ ನೆರವೇರಿದೆ. ಇಂದು ನಡೆದ ಸಮಾರೋಪ ಸಮಾರಂಭದಲ್ಲಿ ಕಾರ್ಯಕಾರಿಣಿ ಸಭೆ ನಡೆಸಲಾಯಿತು. ಈ ಸಭೆಯಲ್ಲಿ 87 ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಮುಂದಿನ ವರ್ಷ ಮಂಡ್ಯದಲ್ಲಿ ನಡೆಸಲು  ನಿರ್ಧರಿಸಲಾಗಿದೆ. ಈ ಕುರಿತಂತೆ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ ಮಹೇಶ್ ಜೋಶಿ ಈ ವಿಷಯ ತಿಳಿಸಿದ್ದಾರೆ.

ಹಾವೇರಿಯಲ್ಲಿ ಕಸಾಪ ಅಧ್ಯಕ್ಷರ ನೇತೃತ್ವದಲ್ಲಿ ಇಂದು ಕಾರ್ಯಕಾರಿಣಿ ಸಮಿತಿ ಸಭೆ ನಡೆದಿದ್ದು, 9 ಜಿಲ್ಲೆಯವರು ತಮ್ಮ ಜಿಲ್ಲೆಯಲ್ಲಿ ಸಮ್ಮೇಳನ ನಡೆಸುವಂತೆ ಮನವಿ ಮಾಡಿದರು. ಈ ಮನವಿಗೆ ಹೆಚ್ಚಿನ ಜನರು ಬೆಂಬಲ ಸೂಚಿಸಿದ ಹಿನ್ನಲೆ ಮಂಡ್ಯ ಜಿಲ್ಲೆಯಲ್ಲಿ 87ನೇ ಕನ್ನಡ ಸಾಹಿತ್ಯ ಸಮ್ಮೇಳನ (87th Kannada Sahitya Sammelana) ನಡೆಸಲು ನಿರ್ಧರಿಸಲಾಯಿತು. ಮತ ಚಲಾವಣೆಯಲ್ಲಿ ಮಂಡ್ಯಕ್ಕೆ 17 ಮತಗಳು ಬಂದಿದ್ದು, ಬಳ್ಳಾರಿಗೆ 16 ಮತಗಳು ಬಂದು ಕೂದಲೆಳೆ ಅಂತರದಲ್ಲಿ ಅವಕಾಶ ತಪ್ಪಿಹೋಯಿತು.

ಇದನ್ನೂ  ಓದಿರಿ: ಜಮ್ಮು & ಕಾಶ್ಮೀರ ಭಾರತದಿಂದ ಬೇರ್ಪಡಿಸಲಾಗದ ಭಾಗ: ಪಾಕ್‌ಗೆ ಎಂಇಎ ತಿರುಗೇಟು

LEAVE A REPLY

Please enter your comment!
Please enter your name here