ಪ್ರವೀಣ್ ನೆಟ್ಟಾರು । nia-raid-continues-at-various-places-in-pfi-leaders-home-at-karnataka

ಮಂಗಳೂರು: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ರಾಷ್ಟ್ರೀಯ ತನಿಖಾ ದಳ (NIA) ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ಹಲವು ಸ್ಥಳಗಳಲ್ಲಿ ಶೋಧ ನಡೆಸಿ ಮೂವರನ್ನು ಬಂಧಿಸಿದೆ.

ಬಿಜೆಪಿ ಯುವಮೋರ್ಚಾದ ಜಿಲ್ಲಾ ಕಾರ್ಯದರ್ಶಿಯಾಗಿದ್ದ ಪ್ರವೀಣ್ ನೆಟ್ಟಾರು ಅವರನ್ನು ಪಿ ಫ್ ಐ (ಪಾಪ್ಯೂಲರ್ ಫ್ರಂಟ್ ಆಫ್ ಇಂಡಿಯಾ) ನ ಸದಸ್ಯರು ಜೂನ್ 26 ರಂದು ಹತ್ಯೆ ಮಾಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಚು ರೂಪಿಸಿದ್ದ ಆರೋಪಿಗಳಾದ ಕೆ ಮಹಮ್ಮದ್ ಇಕ್ಬಾಲ್, ಕೆ ಇಸ್ಮಾಯಿಲ್ ಶಾಫಿ ಮತ್ತು ಇಬ್ರಾಹಿಂ ಶಾ ಎನ್ನುವವರನ್ನು ಬಂಧಿಸಲಾಗಿದೆ.

ಇಂದು ಎನ್‌ಐಎ ಅಧಿಕಾರಿಗಳು ದಕ್ಷಿಣ ಕನ್ನಡ, ಹುಬ್ಬಳ್ಳಿ ಮತ್ತು ಮೈಸೂರು ಜಿಲ್ಲೆಗಳಲ್ಲಿ ಶೋಧ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ. ಅಲ್ಲದೇ ಶಂಕಿತರ ಮನೆಗಳಿಂದ ಮಹತ್ವದ ದಾಖಲೆಗಳು ಮತ್ತು ಡಿಜಿಟಲ್ ಸಾಧನಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ 10 ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದ್ದು, ತಲೆಮರೆಸಿಕೊಂಡಿರುವ ಆರೋಪಿಗಳ ಪತ್ತೆಗೆ ಬಹುಮಾನ ಘೋಷಿಸಿದ್ದು, ಬಂಧಿಸುವ ಪ್ರಯತ್ನ ಮುಂದುವರೆದಿದೆ.

ಇದನ್ನೂ ಓದಿರಿ: ತುಳಸಿ ವಿವಾಹ: ಆಚರಣೆಯ ವಿಧಾನ, ಮಹತ್ವ ಮತ್ತು ಆರೋಗ್ಯ ಪ್ರಯೋಜನ

ತಾಜಾ ಸುದ್ದಿಗಳಿಗಾಗಿ ನಮ್ಮನ್ನು ಸಾಮಾಜಿಕ ತಾಣಗಳಲ್ಲಿ ಫಾಲೋ ಮಾಡಿ
ವಾಟ್ಸಪ್ಟೆಲಿಗ್ರಾಮ್ಕೂ ಆಫ್ಫೇಸ್ ಬುಕ್ ಫೇಜ್

ಪ್ರತಿಷ್ಠಿತ ನ್ಯೂಸ್ ಆಫ್ ಗಳಲ್ಲಿ ನಮ್ಮನ್ನು ಫಾಲೋ ಮಾಡಿ
ಡೈಲಿಹಂಟ್ಗೂಗಲ್ ನ್ಯೂಸ್ 

LEAVE A REPLY

Please enter your comment!
Please enter your name here