ಮಂಗಳೂರು: ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ ತನಿಖೆಯನ್ನು ಚುರುಕುಗೊಳಿಸಿರುವ ಎನ್ಐಎ ತಂಡವೊಂದು ಮಂಗಳೂರಿನ ಉಳ್ಳಾಲದ ಕೈರಂಗಳ ಗ್ರಾಮದ ನಡುಪದವಿನ ಸಮೀಪದ ಖಾಸಗಿ ಇಂಜಿನಿಯರಿಂಗ್ ಕಾಲೇಜಿನ ಮೇಲೆ ದಾಳಿ ನಡೆಸಿದ್ದು ವಿದ್ಯಾರ್ಥಿಯೋರ್ವನನ್ನು ವಶಕ್ಕೆ ಪಡೆದಿದ್ದಾರೆ.
ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿರುವ ಎನ್ಐಎ, ಶಾರಿಕ್ ನನ್ನು ತೀವ್ರ ವಿಚಾರಣೆಗೆ ಒಳಪಡಿಸಿತ್ತು. ಆತನಿಂದಲೂ ಅನೇಕ ಮಹತ್ವದ ವಿಚಾರಗಳನ್ನು ಸಂಗ್ರಹಿಸಲಾಗಿತ್ತು. ಇದಲ್ಲದೇ ಶಂಕಿತ ಉಗ್ರ ಮಾಝ್ ಮುನೀರ್ ಪಿಎ ಎಂಜಿನಿಯರಿಂಗ್ ಕಾಲೇಜಿನಲ್ಲಿ ಶಿಕ್ಷಣ ಪಡೆದಿದ್ದನು. ಈತನೊಂದಿಗೆ ಪಿಎ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಯೊಬ್ಬ ನಿರಂತರ ಸಂಪರ್ಕದಲ್ಲಿರುವುದನ್ನು ಪತ್ತೆ ಹಚ್ಚಿದ್ದರು.
ಈ ಎಲ್ಲ ಕಾರಣಗಳಿಂದಾಗಿ ಎನ್ಐಎ ತಂಡವೊಂದು ಪಿಎ ಎಂಜಿನಿಯರಿಂಗ್ ಕಾಲೇಜಿಗೆ ಭೇಟಿ ನೀಡಿ ಪರಿಶೀಲನೆಯನ್ನು ನಡೆಸಿತು. ಇದಲ್ಲದೇ ಮಾಝ್ ಮುನೀರ್ ಸಂಪರ್ಕದಲ್ಲಿದ್ದ ವಿದ್ಯಾರ್ಥಿಯನ್ನು ವಿಚಾರಣೆಗಾಗಿ ವಶಕ್ಕೆ ಪಡೆದುಕೊಂಡಿದ್ದಾರೆ. ಅಧಿಕಾರಿಗಳು ಆತನನ್ನು ಹೆಚ್ಚಿನ ವಿಚಾರಣೆಗಾಗಿ ಬೆಂಗಳೂರಿಗೆ ಕರೆತರುತ್ತಿದ್ದಾರೆ.
ಇದನ್ನೂ ಓದಿರಿ: ಬಿಎಂಟಿಸಿ ವಜ್ರ ಬಸ್ ಪ್ರಯಾಣಿಕರಿಗೆ ಶಾಕ್: ದರ ಹೆಚ್ಚಳ