ಬೆಂಗಳೂರು: ರಾಜ್ಯದಲ್ಲಿ ಕರೋನಾ ಎರಡನೆಯ ಅಲೆಯು ಜೋರಾಗುತ್ತಿರುವ ಹಿನ್ನೆಲೆಯಲ್ಲಿ ಇಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ, ನರೇಂದ್ರ ಮೋದಿಯವರ ಸಭೆಯಲ್ಲಿ ಬಾಗಿಯಾದ ಬಳಿಕ ರಾಜ್ಯದ ಎಂಟು ಜಿಲ್ಲೆಗಳಲ್ಲಿ ನೈಟ್ ಕರ್ಫ್ಯೂ ಜಾರಿಮಾಡಿ ಆದೇಶ ಹೊರಡಿಸಿದ್ದಾರೆ.
ರಾಜ್ಯದ ಈ ಎಂಟು ಜಿಲ್ಲೆಗಳಲ್ಲಿ ಸೋಂಕು ವೇಗವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಪ್ರಾಯೋಗಿಕವಾಗಿ ಏಪ್ರಿಲ್ 10 ರಿಂದ ಏಪ್ರಿಲ್ 20 ರ ವರೆಗೆ ನೈಟ್ ಕರ್ಫ್ಯೂ ಜಾರಿಗೊಳಿಸಲಾಗುವುದು. ನಾವು ಈಗ ಲಾಕ್ ಡೌನ್ ಮಾಡುತ್ತಿಲ್ಲ, ಜನರಿಗೆ ಕೋವಿಡ್ ನಿಯಮ ಪಾಲಿಸುವಂತೆ ಮನವಿ ಮಾಡುತ್ತೇವೆ. ಪರಿಸ್ಥಿತಿ ಕೈಮೀರಿದರೆ ಮಾಡಬೇಕಾಗುತ್ತದೆ ಎಂದು ಯಡಿಯೂರಪ್ಪ ಹೇಳಿದರು.
ನೈಟ್ ಕರ್ಫ್ಯೂ ಸಮಯದಲ್ಲಿ ಎಲ್ಲ ಅಗತ್ಯ ಸೇವೆಗಳು ಲಭ್ಯವಿರಲಿದೆ. ಆದರೆ ಜನರು ಬೇಕಾಬಿಟ್ಟಿ ಓಡಾಡಲು ಅವಕಾಶವಿರುವುದಿಲ್ಲ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಂಡು ಎಚ್ಚರಿಕೆಯನ್ನು ವಹಿಸಬೇಕಾಗಿರುತ್ತದೆ. ಪ್ರಾಯೋಗಿಕವಾಗಿ ರಾಜ್ಯದ ಬೆಂಗಳೂರು ನಗರ, ಮೈಸೂರು ನಗರ, ಉಡುಪಿ ನಗರ, ತುಮಕೂರು ನಗರ, ಕಲಬುರಗಿ, ಬೀದರ್, ಮಣಿಪಾಲ್ ನಗರಗಳಲ್ಲಿ ಶನಿವಾರದ (ಏಪ್ರಿಲ್ 10) ರಾತ್ರಿಯಿಂದ ಕರ್ಫ್ಯೂ ಜಾರಿ ಮಾಡಲಾಗುವುದು ಎಂದಿದ್ದಾರೆ.