ನವದೆಹಲಿ: ಕಳೆದ ವಾರ ಅರುಣಾಚಲ ಪ್ರದೇಶದ ಭಾರತ-ಚೀನಾ ಗಡಿಯಲ್ಲಿ ನಡೆದ ಗಡಿ ಘರ್ಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚರ್ಚಿಸಲು ಮೂರು ಸೇನಾ ಪಡೆಗಳ ಮುಖ್ಯಸ್ಥರ ಜೊತೆಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮಾತುಕತೆ ನಡೆಸಲಿದ್ದಾರೆ.
ಗಡಿ ಸಂಘರ್ಷದ ಕುರಿತಂತೆ ರಾಜನಾಥ್ ಸಿಂಗ್ ಸೇನಾ ಪಡೆಗಳ ಮುಖ್ಯಸ್ಥರ ಜೊತೆ ಮಾತುಕತೆ ನಡೆಸಿದ್ದಾರೆ. ಈ ಸಭೆಯಲ್ಲಿ ವಿದೇಶಾಂಗ ಸಚಿವ ಡಾ ಎಸ್ ಜೈಶಂಕರ್ ಮತ್ತು ರಕ್ಷಣಾ ಸಿಬ್ಬಂದಿ ಮುಖ್ಯಸ್ಥ ಲೆಫ್ಟಿನೆಂಟ್ ಜನರಲ್ ಅನಿಲ್ ಚೌಹಾಣ್ (ನಿವೃತ್ತ) ಕೂಡ ಸಭೆಯಲ್ಲಿ ಪಾಲ್ಗೊಂಡಿದ್ದರು.
ಇಂದು ಸಂಸತ್ತ್ ಕಲಾಪ ಆರಂಭವಾಗುತ್ತಿದ್ದಂತೆ ವಿರೋಧ ಪಕ್ಷಗಳು ಗಡಿ ಗಲಾಟೆ ಕುರಿತಂತೆ ಚರ್ಚೆಗೆ ಅವಕಾಶ ನೀಡಬೇಕೆಂದು ಪಟ್ಟು ಹಿಡಿದವು. ಇದಕ್ಕೆ ಪ್ರತಿಕ್ರಿಸಿದ ಸರಕಾರ ರಾಜನಾಥ್ ಸಿಂಗ್ ಘಟನೆಯ ಕುರಿತಂತೆ ಸಂಪೂರ್ಣ ಮಾಹಿತಿ ನೀಡುತ್ತಾರೆ ಎಂದು ಹೇಳಿದರು.
ಘಟನೆಯ ಕುರಿತು ಮೂರೂ ಸೇನಾ ಮುಖ್ಯಸ್ಥರ ಜೊತೆಯಲ್ಲಿ ಚರ್ಚೆ ನಡೆಸಿದ ರಾಜನಾಥ್ ಸಿಂಗ್ ಸದನದಲ್ಲಿ ಇಂದು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿರಿ: ಮೋದಿ ಸರ್ಕಾರ ಅಧಿಕಾರದಲ್ಲಿರುವವರೆಗೂ ಒಂದಿಂಚು ಭೂಮಿಯನ್ನು ವಶಪಡಿಸಿಕೊಳ್ಳಲು ಸಾಧ್ಯವಿಲ್ಲ – ಅಮಿತ್ ಶಾ
ಡಿಸೆಂಬರ್ 9 ರಂದು ತಡರಾತ್ರಿ ನಿತ್ಯದಂತೆ ಗಸ್ತು ತಿರುಗುತ್ತ ಚೀನಾ ಸೇನೆ ಭಾರತದ ಗಡಿಯೊಳಗೆ ಪ್ರವೇಶ ಮಾಡಿದೆ. ಇದಕ್ಕೆ ಭಾರತೀಯ ಸೇನಾಪಡೆ ತೀವ್ರ ಆಕ್ಷೇಪಿಸಿದೆ. ಈ ವೇಳೆ ಭಾರತ, ಚೀನಾ ಸೇನಾ ಯೋಧರ ನಡುವೆ ತಳ್ಳಾಟ, ನೂಕಾಟ ನಡೆದಿದ್ದು, ಪರಸ್ಪರ ಕೈಕೈ ಮಿಲಾಯಿಸಿದ್ದಾರೆ. ಬಳಿಕ ಭಾರತೀಯ ಯೋಧರು ತಕ್ಕ ತಿರುಗೇಟು ಕೊಟ್ಟಿದ್ದರಿಂದ ಚೀನಾ ಸೇನೆ ಗಡಿಯಿಂದ ಕಾಲ್ಕಿತ್ತಿದೆ. ಈ ಮೂಲಕ ಭಾರತ ಸೇನೆ, ಚೀನಾ ಸೇನೆಯನ್ನು ಹಿಮ್ಮೆಟ್ಟಿಸುವಲ್ಲಿ ಯಶಸ್ವಿಯಾಗಿದೆ.
ಈ ಘಟನೆಯಲ್ಲಿ ಯಾವುದೇ ಸಾವು ಮತ್ತು ತೀವ್ರ ತರವಾದ ನೋವು ಸಂಭವಿಸಿಲ್ಲ ಎಂದು ರಾಜನಾಥ್ ಸಿಂಗ್ ತಿಳಿಸಿದ್ದಾರೆ. ಗಡಿಯಲ್ಲಿ ಅತಿಕ್ರಮ ಪ್ರವೇಶ ಸಂದರ್ಭದಲ್ಲಿ ಸಣ್ಣ ಪ್ರಮಾಣದ ಘರ್ಷಣೆ ಉಂಟಾಗಿತ್ತು. ಅಲ್ಲದೇ ಈ ಘಟನೆಯಲ್ಲಿ ಚೀನಾ ಸೈನಿಕರನ್ನು ಹಿಂದಕ್ಕೆ ಕಳುಹಿಸುವಲ್ಲಿ ಭಾರತೀಯ ಸೇನೆ ಯಶಸ್ವಿಯಾಗಿದೆ ಎಂದು ಹೇಳಿದ್ದಾರೆ.
ಇದನ್ನೂ ಓದಿರಿ: Indian Post Office Recruitment 2022: ಅಂಚೆ ಇಲಾಖೆಯಲ್ಲಿ ಖಾಲಿಯಿರುವ 7 ಹುದ್ದೆಗಳ ಭರ್ತಿಗೆ ಅರ್ಜಿ ಅಹ್ವಾನ