ಬೆಂಗಳೂರು: ಕರ್ನಾಟಕ ಹಾಲು ಮಹಾಮಂಡಳದ ಉತ್ಪನ್ನ ನಂದಿನಿಯನ್ನು ಗುಜರಾತ್ ನ ಅಮೂಲ್ ಜೊತೆಗೆ ವಿಲೀನ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟ ಪಡಿಸಿದ್ದಾರೆ.
ನಗರದಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ‘ನಂದಿನಿ ವಿಲೀನವಾಗಲಿದೆ ಎಂದು ಯಾರೂ ಊಹೆ ಮಾಡಿ ಟೀಕೆ ಮಾಡಬಾರದು. ನಂದಿನಿ ತನ್ನ ಸ್ವಂತ ಅಸ್ಥಿತ್ವ ಉಳಿಸಿಕೊಳ್ಳಲಿದೆ. ಅಮುಲ್ ನೊಂದಿಗೆ ವಿಲೀನ ಮಾಡುತ್ತಾರೆ ಎನ್ನುವುದು ತಪ್ಪು ಕಲ್ಪನೆ. ಕೇಂದ್ರ ಗೃಹ ಮತ್ತು ಸಹಕಾರ ಸಚಿವರು ಮಾತನಾಡಿರುವುದು ಸ್ಪಷ್ಟವಾಗಿದೆ.
ನಂದಿನಿ ಮತ್ತು ಅಮುಲ್ ತಾಂತ್ರಿಕ ವಾಗಿ, ಮಾರುಕಟ್ಟೆಯಲ್ಲಿ ಸಹಕಾರ ಮಾಡಬೇಕು. ಇವೆರಡೂ ದೊಡ್ಡ ಸಂಸ್ಥೆಗಳು. ಪೂರಕವಾಗಿ ಕೆಲಸ ಮಾಡಬೇಕು. ಅದರರ್ಥ ವಿಲೀನಗೊಳಿಸುವುದು ಎಂದಲ್ಲ. ನಂದಿನಿ ಅಸ್ತಿತ್ವ ನೂರಾರು ವರ್ಷ ಶಾಶ್ವತವಾಗಿ ಇರಲಿದೆ ಎಂದರು.
ಇದನ್ನೂ ಓದಿರಿ:ಅಬ್ಬಾಬ್ಬಾ… ನ್ಯೂ ಇಯರ್ ಗೆ ಸ್ವಿಗ್ಗಿಗೆ ಬಂದ ಬಿರಿಯಾನಿ ಆರ್ಡರ್ ಎಷ್ಟು ಗೊತ್ತಾ?