ಮೋದಿ ಸರ್ಕಾರ ಅಧಿಕಾರದಲ್ಲಿರುವವರೆಗೂ ಒಂದಿಂಚು ಭೂಮಿಯನ್ನು ವಶಪಡಿಸಿಕೊಳ್ಳಲು ಸಾಧ್ಯವಿಲ್ಲ – ಅಮಿತ್ ಶಾ

news-corona-positive-to-home-minister-amit-shah

ನವದೆಹಲಿ: ಪ್ರಧಾನಿ ಮೋದಿ (Narendra Modi) ಸರ್ಕಾರ ಅಧಿಕಾರದಲ್ಲಿ ಇರುವವರೆಗೆ ಯಾರೊಬ್ಬರೂ ಒಂದು ಇಂಚು ಭೂಮಿಯನ್ನು ವಶಪಡಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಹೇಳಿದ್ದಾರೆ.

ಸಂಸತ್ ಭವನದ ಹೊರಗೆ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಅಮಿತ್ ಷಾ, ರಾಜೀವ್ ಗಾಂಧಿ ಫೌಂಡೇಶನ್‌ನ ಎಫ್‌ಸಿಆರ್‌ಎ (ವಿದೇಶಿ ಕೊಡುಗೆ ನಿಯಂತ್ರಣ ಕಾಯ್ದೆ) ರದ್ದತಿ ಕುರಿತು ಪ್ರಶ್ನೆಗಳನ್ನು ತಪ್ಪಿಸಲು ಸಂಸತ್ತಿನಲ್ಲಿ ಕಾಂಗ್ರೆಸ್ ಗಡಿ ವಿಷಯವನ್ನು ಪ್ರಸ್ತಾಪಿಸಿದೆ ಎಂದು ಹೇಳಿದ್ದಾರೆ.

ರಾಜೀವ್ ಗಾಂಧಿ ಫೌಂಡೇಶನ್, ಚೀನಾ ರಾಯಭಾರ ಕಚೇರಿಯಿಂದ ಸುಮಾರು 1.35 ಕೋಟಿ ಹಣವನ್ನು ಪಡೆದಿದೆ, ಇದು ಎಫ್‌ಸಿಆರ್‌ಎ ನಿಯಮಾವಳಿಗಳನ್ನು ಅನುಸರಿಸಿಸದೆ ಪಡೆದ ಹಣವಾಗಿದೆ. ಆದ್ದರಿಂದ ಅದರ ನೋಂದಣಿಯನ್ನು ರದ್ದುಗೊಳಿಸಲಾಗಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿರಿ: ಭಾರತ-ಚೀನಾ ಗಡಿ ಸಂಘರ್ಷ: ಮೂರು ಸೇನಾ ಪಡೆಗಳ ಮುಖ್ಯಸ್ಥರೊಂದಿಗೆ ರಾಜನಾಥ್ ಸಿಂಗ್ ಮಾತುಕತೆ

ನೆಹರೂ ಅವರ ಚೀನಾದ ಮೇಲಿನ ಪ್ರೀತಿಯಿಂದಾಗಿ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತದ ಖಾಯಂ ಸದಸ್ಯತ್ವ ಸ್ಥಾನವನ್ನು ತ್ಯಾಗ ಮಾಡಲಾಯಿತು ಎಂದು ಅಮಿತ್ ಶಾ ಹೇಳಿದರು.

ಇದೇ ವೇಳೆ ಭಾರತೀಯ ಸೈನಿಕರ ಶೌರ್ಯವನ್ನು ಕೊಂಡಾಡಿದ ಅವರು, ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರದಲ್ಲಿ ಇರುವವರೆಗೂ ನಮ್ಮ ಒಂದು ಇಂಚು ಭೂಮಿಯನ್ನು ಯಾರೂ ವಶಪಡಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿರಿ: ಚೀನಾ ಸೈನಿಕರು ಗಡಿ ನುಸುಳುವುದನ್ನು ಭಾರತ ತಡೆದಿದೆ; ನಮ್ಮ ಯೋಧರ ಧೈರ್ಯಕ್ಕೆ ಸಲಾಂ – ರಾಜನಾಥ್‌ ಸಿಂಗ್‌

LEAVE A REPLY

Please enter your comment!
Please enter your name here