NTPC Recruitment 2022: ಥರ್ಮಲ್ ಪವರ್ ಕಾರ್ಪೊರೇಷನ್ ​ನಲ್ಲಿ 26 ಎಕ್ಸಿಕ್ಯೂಟಿವ್​ ಹುದ್ದೆಗಳಿಗೆ ಆಹ್ವಾನ

ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ । ntpc-recruitment-2022-apply-for-26-executive-posts

ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ (National Thermal Power Corporation Limited)ನಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿತ ದಿನಾಂಕದೊಳಗೆ ಅರ್ಜಿಯನ್ನು ಸಲ್ಲಿಸಲು ಕೋರಲಾಗಿದೆ.

ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ ನಲ್ಲಿ 26 ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದ್ದು, ಎಲೆಕ್ಟ್ರಿಕಲ್/ಮೆಕ್ಯಾನಿಕಲ್/ ಎಲೆಕ್ಟ್ರಾನಿಕ್ಸ್​ ಎಂಜಿನಿಯರಿಂಗ್​ ಪದವಿ ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಈ ನೇಮಕಾತಿಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳ ಮಾಹಿತಿಗಾಗಿ ಕೆಳಗೆ ಓದಿರಿ.

ವಿದ್ಯಾರ್ಹತೆ

ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ ನಲ್ಲಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಎಕ್ಸಿಕ್ಯೂಟಿವ್ (ಕಂಬೈನ್ಡ್​ ಸೈಕಲ್ ಪವರ್ ಪ್ಲಾಂಟ್)- ಎಲೆಕ್ಟ್ರಿಕಲ್/ ಮೆಕ್ಯಾನಿಕಲ್/ ಎಲೆಕ್ಟ್ರಾನಿಕ್ಸ್​ ಎಂಜಿನಿಯರಿಂಗ್​ನಲ್ಲಿ ಪದವಿ, ಎಕ್ಸಿಕ್ಯೂಟಿವ್ (ರಿ- ವಿಂಡ್ಸ್​)- ಎಂಜಿನಿಯರಿಂಗ್​ನಲ್ಲಿ ಪದವಿ, ಸ್ನಾತಕೋತ್ತರ ಪದವಿಯನ್ನು ಪಡೆದಿರಬೇಕು ಎಂದು ಹೇಳಲಾಗಿದೆ.

ವಯೋಮಿತಿ

ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ ನಲ್ಲಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಯು 35 ವರ್ಷಗಳ ಒಳಗೆ ಇರುವುದು ಮುಖ್ಯವಾಗಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದವರಿಗೆ 5 ವರ್ಷಗಳ ಸಡಿಲಿಕೆ ಇರುತ್ತದೆ. ಅಲ್ಲದೇ  PWD ಅಭ್ಯರ್ಥಿಗಳಿಗೆ 10 ವರ್ಷಗಳು ಮತ್ತು ಒಬಿಸಿ ಅಭ್ಯರ್ಥಿಗಳು 3 ವರ್ಷಗಳ ಸಡಿಲಿಕೆ ಇರುತ್ತದೆ.

ಅರ್ಜಿ ಶುಲ್ಕ

ಹುದ್ದೆಗಳಿಗೆ ಅರ್ಜಿ ಸಲ್ಲಿಸಲು, ಅಧಿಸೂಚನೆಯಲ್ಲಿ ಸಾಮಾನ್ಯ/EWC/ಒಬಿಸಿ ಅಭ್ಯರ್ಥಿಗಳಿಗೆ 300 ರೂಪಾಯಿ, ಎಸ್​ಸಿ/ಎಸ್​ಟಿ/PWD/XSM ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ. ಅರ್ಜಿ ಶುಲ್ಕವನ್ನು ಆನ್ ಲೈನ್ ಮೂಲಕ ಪಾವತಿಸಲು ಸೂಚಿಸಲಾಗಿದೆ.

ವೇತನ

ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ ನಲ್ಲಿ ಆಯ್ಕೆಯಾದ ಉದ್ಯೋಗಿಗಳಿಗೆ ಮಾಸಿಕ 90,000 ವೇತನ ನೀಡಲಾಗುವುದು ಎಂದು ತಿಳಿಸಲಾಗಿದೆ.

ಇದನ್ನೂ ಓದಿರಿ: Indian Navy Recruitment: ಭಾರತೀಯ ನೌಕಾಪಡೆಯಲ್ಲಿದೆ ಉದ್ಯೋಗ

ಆಯ್ಕೆ ವಿಧಾನ

ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ದಾಖಲಾತಿಗಳನ್ನು ಪರಿಶೀಲಿಸಿ ಸರಿಯಾಗಿರುವವರನ್ನು ಮೊದಲ ಹಂತದಲ್ಲಿ ಆಯ್ಕೆ ಮಾಡಲಾಗುತ್ತದೆ. ಇದಾದ ನಂತರ ಲಿಖಿತ ಪರೀಕ್ಷೆ ನಡೆಸಿ, ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆ

ಅಭ್ಯರ್ಥಿಗಳು ಅರ್ಜಿಯನ್ನು ಆನ್ ಲೈನ್ ಮೂಲಕ ವೆಬ್ ಸೈಟ್ https://careers.ntpc.co.in ಗೆ ಭೇಟಿ ನೀಡಿ. ರೆಜಿಸ್ಟರ್ ಆಗಿ ಅರ್ಜಿಯನ್ನು ಸಲ್ಲಿಸಬಹುದು.

ಪ್ರಮುಖ ದಿನಾಂಕಗಳು

ಅರ್ಜಿ ಸಲ್ಲಿಸಲು ಆರಂಭದ ದಿನಾಂಕ: 16-11-2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30-11-2022

ಪ್ರಮುಖ ಲಿಂಕುಗಳು

ಅಧಿಕೃತ ಅಧಿಸೂಚನೆ: ಇಲ್ಲಿ ಕ್ಲಿಕ್ ಮಾಡಿ

ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಿ: ಇಲ್ಲಿ ಕ್ಲಿಕ್ ಮಾಡಿ

ವೆಬಸೈಟ್ : https://careers.ntpc.co.in

LEAVE A REPLY

Please enter your comment!
Please enter your name here