offering-namaz-in-open-places-wont-be-tolerated-says-haryana-cm-manohar-lal-kattar

ಹರ್ಯಾಣ: ಗುರು ಗ್ರಾಮದಲ್ಲಿ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ, ಸಾರ್ವಜನಿಕ ಸ್ಥಳದಲ್ಲಿ ನಮಾಜ್ ಮಾಡಬಾರದು ಎಂದು ಹರ್ಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಹೇಳಿದ್ದಾರೆ. ನಮಾಜ್ ಸಲ್ಲಿಸಲು ಸಾರ್ವಜನಿಕ ಸ್ಥಳಗಳಲ್ಲಿ ಜಾಗ ಮೀಸಲಿಡುವ ಆದೇಶವನ್ನು ಹಿಂಪಡೆಯಲಾಗಿದೆ ಎಂದು ಅವರು ಹೇಳಿದ್ದಾರೆ.

ಗುರುಗ್ರಾಮದಲ್ಲಿ ಸರಕಾರಿ ಸ್ವಾಮ್ಯದ ಭೂಮಿಯಲ್ಲಿ ನಮಾಜ್ ಸಲ್ಲಿಸುತ್ತಿರುವುದನ್ನು ಹಿಂದೂ ಸಂಘಟನೆಗಳು ಆಕ್ಷೇಪಿಸಿದ್ದವು. ಅಲ್ಲದೇ ಕಾರ್ಯಕರ್ತರು ಘೋಷಣೆಗಳ ಮೂಲಕ ನಮಾಜ್ ಸಲ್ಲಿಸುವುದರ ವಿರುದ್ಧ ಪ್ರತಿಭಟಿಸಿದ್ದರು. ಇದರಿಂದ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಪ್ರತಿಭಟನೆಗೆ ಸಂಬಂಧಿಸಿದಂತೆ ಒಟ್ಟು 30 ಜನ ಪ್ರತಿಭಟನಾಕಾರರನ್ನು ಬಂಧಿಸಲಾಗಿತ್ತು.

ಇದನ್ನೂ ಓದಿರಿ: ಕೃಷಿ ಕಾಯ್ದೆ ವಿರೋಧಿಸಿ ನಡೆದ ಹೋರಾಟದಲ್ಲಿ ರೈತರು ಸಾವನ್ನಪ್ಪಿಲ್ಲ: ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್

ಈ ಕುರಿತಂತೆ ಸುದ್ದಿಗಾರರೊಂದಿಗೆ ಖಟ್ಟರ್ ಮಾತನಾಡಿ, ಈ ಸಮಸ್ಯೆ ಶೀಘ್ರ ಪರಿಹಾರಕ್ಕೆ ಪೊಲೀಸರೊಂದಿಗೆ ಮಾತನಾಡಿದ್ದೇನೆ. ಪೂಜಾ ಸ್ಥಳಗಳಲ್ಲಿ ಪ್ರಾರ್ಥನೆ ಸಲ್ಲಿಸುವುದರಿಂದ ಯಾರಿಗೂ ತೊಂದರೆಯಿಲ್ಲ. ಈ ಉದ್ದೇಶಕ್ಕಾಗಿಯೇ ಅವುಗಳನ್ನು ನಿರ್ಮಾಣ ಮಾಡಲಾಗಿದೆ. ಆದರೆ ಸಾರ್ವಜನಿಕ ಸ್ಥಳದಲ್ಲಿ ಅವುಗಳನ್ನು ಮಾಡುವುದನ್ನು ಸಹಿಸಲು ಸಾಧ್ಯವಿಲ್ಲ ಎಂದು ಕಡಕ್ಕಾಗಿಯೇ ಉತ್ತರಿಸಿದ್ದಾರೆ.

LEAVE A REPLY

Please enter your comment!
Please enter your name here