ಕೊರೋನಾ ಹೊಸ ರೂಪಾಂತರ ಒಮಿಕ್ರಾನ್ 20 ದೇಶಗಳಲ್ಲಿ ಕಾಣಿಸಿಕೊಂಡಿರುವ ಬಗ್ಗೆ ಇದುವರೆಗೆ ವರದಿಯಾಗಿದೆ. ಈ ವೈರಸ್ ಅತೀ ವೇಗವಾಗಿ ಹರಡುತ್ತಿದ್ದು, ಎಚ್ಚರಿಕೆ ತೆಗೆದುಕೊಳ್ಳುವ ಮೊದಲೇ ಆರ್ಭಟ ಶುರುಮಾಡಿಕೊಂಡಿದೆ.
ಒಮಿಕ್ರಾನ್ ರೂಪಾಂತರಿಯು ಕೊರೊನಾದ ಈ ಹಿಂದಿನ ಪ್ರಭೇದಗಳಿಗಿಂತಲೂ ಹೆಚ್ಚು ಅಪಾಯಕಾರಿ. ಮತ್ತಷ್ಟು ಪರೀಕ್ಷಾ ಫಲಿತಾಂಶಗಳು ಇಲ್ಲದೆ ಈ ಬಗ್ಗೆ ಏನೂ ಹೇಳಲು ಸಾಧ್ಯವಿಲ್ಲ ಎಂದು ವಿಜ್ಞಾನಿಗಳು ಹೇಳುತ್ತಿದ್ದಾರೆ. 60 ವರ್ಷ ಮೇಲ್ಪಟ್ಟ, ಲಸಿಕೆ ಹಾಕಿಸಿಕೊಳ್ಳದವರಿಗೆ ಒಮಿಕ್ರಾನ್ ಆತಂಕ ಹೆಚ್ಚು ಎಂದು ಹೇಳಲಾಗಿದೆ.
ಐರೋಪ್ಯ ದೇಶಗಳಲ್ಲಿ ಪ್ರತಿ ವಾರ 20 ಲಕ್ಷಕ್ಕೂ ಹೆಚ್ಚು ಹೊಸ ಸೋಂಕು ಪ್ರಕರಣಗಳು ವರದಿಯಾಗುತ್ತಿವೆ. ನೆದರ್ ಲೆಂಡ್, ಬೆಲ್ಜಿಯಂ, ಹಂಗೇರಿ, ಜೆಕ್ ರಿಪಬ್ಲಿಕ್, ಸ್ಲೋವಾಕಿಯಾ, ಡೆನ್ಮಾರ್ಕ್ ಮತ್ತು ನಾರ್ವೆ ದೇಶಗಳಲ್ಲಿ ಕಳೆದ ವಾರದಿಂದ ಸೋಂಕಿತರ ಪ್ರಮಾಣ ದಾಖಲೆ ಬರೆಯುತ್ತಿದೆ. ಇದಲ್ಲದೇ ದಕ್ಷಿಣ ಆಫ್ರಿಕಾದಲ್ಲಿ ದಿನದಿಂದ ದಿನಕ್ಕೆ ಪರಿಸ್ಥಿತಿ ಹದಗೆಡುತ್ತಿದ್ದು, ದಿನವೊಂದಕ್ಕೆ 300 ಸಾವಿರ ಪ್ರಕರಣಗಳು ಪತ್ತೆಯಾಗುತ್ತಿವೆ.