one-more-covid-19-death-in-karnataka

ಕರ್ನಾಟಕದಲ್ಲಿ ಕೊರೊನಾ ಹರಡುವಿಕೆ ಮತ್ತು ಸಾವಿನ ಸಂಖ್ಯೆಗಳಲ್ಲಿ ಏರಿಕೆಯನ್ನು ಕಾಣುತ್ತಿದ್ದು, ಇಂದು (ಗುರುವಾರ) ಕೋವಿಡ್-19ಗೆ ಮಂಗಳೂರಿನ ಮಹಿಳೆಯೊಬ್ಬರು ಬಲಿಯಾಗಿದ್ದಾರೆ.

ಮಂಗಳೂರಿನ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಗಾಗಿದ್ದ 67 ವರ್ಷದ ವೃದ್ದೆಯೋಬ್ಬರು ಇಂದು ಮೃತಪಟ್ಟಿದ್ದಾರೆ. ಇದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೂರನೇಯ ಸಾವಿನ ಪ್ರಕರಣವಾಗಿದೆ.

ಇದನ್ನೂ ಓದಿರಿ: SSLC ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಸಿಹಿ ಸುದ್ದಿ..!

ಇಂದು ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿಯೂ ಹೆಚ್ಚಳವಾಗಿದ್ದು, ಒಂದೇ ದಿನ 30 ಕೇಸುಗಳು ದಾಖಲಾಗಿವೆ. ಈ ಮೂಲಕ ಕರ್ನಾಟಕದ ಕೋವಿಡ್-19 ಪಾಸಿಟಿವ್ ಕೇಸುಗಳು ಒಟ್ಟು 565 ಕ್ಕೆ ಏರಿಕೆಯಾದಂತಾಗಿದೆ. ಈ ಪ್ರಕರಣಗಳಲ್ಲಿ ಇಲ್ಲಿಯವರೆಗೆ 229 ಮಂದಿ ಗುಣಮುಖರಾಗಿದ್ದು ಮನೆಗೆ ತೆರಳಿದ್ದಾರೆ. 22 ಜನರು ಇಲ್ಲಿಯವರೆಗೆ ಮೃತಪಟ್ಟಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ.

LEAVE A REPLY

Please enter your comment!
Please enter your name here