ಬೆಂಗಳೂರು: ಕೊರೋನಾ ಹಿನ್ನೆಲೆಯಲ್ಲಿ ಈ ಬಾರಿಯ ದೀಪಾವಳಿ ಹಬ್ಬದ ಸಮಯದಲ್ಲಿ ಪಟಾಕಿಯನ್ನು ನಿಷೇಧಿಸಲು ಚಿಂತನೆ ನಡೆಸಲಾಗುತ್ತಿದೆ ಎಂದು ಹೇಳಿದ್ದ ಮುಖ್ಯಮಂತ್ರಿಗಳು ಇದೀಗ ಯೂಟರ್ನ್ ಹೊಡೆದಿದ್ದಾರೆ. ಕಡಿಮೆ ಶಬ್ದ ಮಾಡುವ ಮತ್ತು ಕಡಿಮೆ ಪರಿಸರ ಮಾಲಿನ್ಯ ಮಾಡುವ ಹಸಿರು ಪಟಾಕಿಗಳನ್ನು ಮಾತ್ರ ಬಳಸುವಂತೆ ಮಾಧ್ಯಮ ಪ್ರಕಟಣೆ ಹೊರಡಿಸಿದೆ.
ಕೊರೋನಾ ಸಮಯದಲ್ಲಿ ಪರಿಸರ ಮಾಲಿನ್ಯದಿಂದ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮಗಳು ಉಂಟಾಗುತ್ತವೆ. ಇದಲ್ಲದೆ ಎರಡನೇ ಅಲೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಶಬ್ದ ಮಾಲಿನ್ಯ ಮತ್ತು ಪರಿಸರ ಮಾಲಿನ್ಯ ತಡೆಗಟ್ಟಲು ರಾಜ್ಯ ಸರ್ಕಾರ ಪಟಾಕಿ ಬ್ಯಾನ್ ಮಾಡಲು ಆದೇಶ ಹೊರಡಿಸಿದೆ. ಈ ಕಾರಣದಿಂದಾಗಿ ದೀಪಾವಳಿಯ ಸಮಯದಲ್ಲಿ ಪಟಾಕಿಗಳ ಮಾರಾಟ ಮತ್ತು ಸಿಡಿಸುವುದು ಅಪರಾಧವಾಗಿದೆ. ಈ ಕುರಿತಂತೆ ಸರಕಾರ ಒಂದೆರಡು ದಿನದಲ್ಲಿ ಅಧಿಕೃತ ಆದೇಶ ಪ್ರತಿಯನ್ನು ಜಿಲ್ಲಾಡಳಿತಕ್ಕೆ ತಲುಪಿಸಲಿದೆ.
ಇದನ್ನೂ ಓದಿರಿ: ಸರಕಾರಿ ನೌಕರರಿಗೆ ಸಿಹಿಸುದ್ದಿ ನೀಡಿದ ರಾಜ್ಯ ಸರಕಾರ
ಸರಕಾರದ ಈ ಕ್ರಮವನ್ನು ಹೃದ್ರೋಗ ತಜ್ಞ ಡಾ. ಮಂಜುನಾಥ್ ಅವರು ಸ್ವಾಗತಿಸಿದ್ದಾರೆ. ಉಸಿರಾಟದ ಸಮಸ್ಯೆಯಿಂದ ಬಳಲುತ್ತಿರುವವರಿಗೆ ಪಟಾಕಿಯಿಂದ ಉಂಟಾಗುವ ಪರಿಸರ ಮಾಲಿನ್ಯದಿಂದ ತೊಂದರೆ ಉಂಟಾಗುತ್ತದೆ. ಅಲ್ಲದೇ ಈಗ ಚಳಿಗಾಲವೂ ಪ್ರಾರಂಭವಾಗಿದ್ದು, ಕೊರೋನಾ ಸೋಂಕು ಹರಡುವ ಸಂಭವ ಹೆಚ್ಚಾಗಿರುವುದರಿಂದ ಸರಕಾರದ ಕ್ರಮವನ್ನು ಉತ್ತಮ ನಿರ್ಧಾರವಾಗಿದೆ ಎಂದು ಹೇಳಿದ್ದಾರೆ.