ಅಮೃತಸರ: ಮಾದಕ ವಸ್ತುಗಳೊಂದಿಗೆ ಭಾರತ ಗಡಿ ಪ್ರವೇಶಿಸಲು ಯತ್ನಿಸುತ್ತಿದ್ದ ಪಾಕಿಸ್ತಾನದ ದ್ರೋಣನ್ನು ಬಿಎಸ್ ಎಫ್ ಮಹಿಳಾ ಪಡೆ ಹೊಡೆದುರುಳಿಸಿದೆ.
ಸೋಮವಾರ ರಾತ್ರಿ ಅಮೃತಸರ ನಗರದ ಉತ್ತರಕ್ಕೆ 40 ಕಿಮೀ ದೂರದಲ್ಲಿರುವ ಚಹರ್‌ಪುರ ಗ್ರಾಮದ ಬಳಿ ಪಾಕ್ ಡ್ರೋನ್ ಭಾರತದ ಭೂಪ್ರದೇಶ ಪ್ರವೇಶಿಸುತ್ತಿರುವುದನ್ನು ಗಮನಿಸಿದ ಗಡಿ ಭದ್ರತಾ ಪಡೆ ಮಹಿಳಾ ಸಿಬ್ಬಂದಿ ಅದರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬಿಎಸ್ಎಫ್ ನ 73 ಬೆಟಾಲಿಯನ್‌ನ ಇಬ್ಬರು ಮಹಿಳಾ ಕಾನ್‌ಸ್ಟೆಬಲ್‌ಗಳು ಡ್ರೋನ್ ಮೇಲೆ 25 ಸುತ್ತು ಗುಂಡು ಹಾರಿಸಿ ರಾತ್ರಿ 11.05 ಕ್ಕೆ ಹೊಡೆದುರುಳಿಸಿದರು. ಶೋಧ ಕಾರ್ಯಾಚರಣೆಯ ಸಮಯದಲ್ಲಿ ಬಿಎಸ್ಎಫ್ ಭಾಗಶಃ ಹಾನಿಗೊಳಗಾದ ಹೆಕ್ಸಾಕಾಪ್ಟರ್ ಅನ್ನು ವಶಪಡಿಸಿಕೊಂಡಿದೆ ಎಂದು ಅವರು ಹೇಳಿದ್ದಾರೆ.
ಇದನ್ನೂ ಓದಿರಿ: ಅದಿತಿ ಪ್ರಭುದೇವ-ಯಶಸ್ವಿ ಅದ್ದೂರಿ ಮದುವೆ ಫೋಟೋ ಗ್ಯಾಲರಿ