ಇಂದಿನಿಂದ ಸಂಸತ್ತಿನ ಚಳಿಗಾಲದ ಅಧಿವೇಶನ ಆರಂಭ; 16 ಹೊಸ ಮಸೂದೆ ಮಂಡನೆಗೆ ಸಿದ್ಧತೆ

parliament-winter-session-begins-today

ನವದೆಹಲಿ: ಸಂಸತ್ತಿನ ಚಳಿಗಾಲದ ಅಧಿವೇಶನ ಇಂದಿನಿಂದ ಆರಂಭವಾಗಲಿದ್ದು, 17 ದಿನಗಳ ಕಾಲ ನಡೆಯಲಿದೆ. ಈ ಬಾರಿಯ ಅಧಿವೇಶನದಲ್ಲಿ ಹಳೆಯ 25 ಮಸೂದೆಗಳಿಗೆ ಒಪ್ಪಿಗೆ ಪಡೆಯುವುದರೊಂದಿಗೆ ಹೊಸದಾಗಿ 16 ಮಸೂದೆಗಳನ್ನು ಮಂಡಿಸಲು ಕೇಂದ್ರ ಸರಕಾರ ನಿರ್ಧರಿಸಿದೆ ಎಂದು ಹೇಳಲಾಗಿತ್ತಿದೆ.

ಈ ಕುರಿತಂತೆ ಮಂಗಳವಾರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ನೇತೃತ್ವದಲ್ಲಿ ಸರ್ವಪಕ್ಷ ಸಭೆ ನಡೆಸಲಾಗಿದೆ. ವಿಪಕ್ಷಗಳು ಚೀನಾ ಗಡಿ ತಗಾದೆ, ಬೆಲೆ ಏರಿಕೆ ಸೇರಿದಂತೆ ಹಲವು ವಿಷಯಗಳ ಚರ್ಚೆಗೆ ಅವಕಾಶ ನೀಡಬೇಕೆಂದು ಬೇಡಿಕೆ ಇಟ್ಟಿವೆ.

ಈ ನಡುವೆ ಕೇಂದ್ರ ಸರಕಾರ ಬಹು ರಾಜ್ಯ ಸಹಕಾರಿ ಸಂಘಗಳ (ತಿದ್ದುಪಡಿ) ಮಸೂದೆ, ಅರಣ್ಯ ಸಂರಕ್ಷಣೆ ತಿದ್ದುಪಡಿ ಮಸೂದೆ, ಟ್ರೇಡ್ ಮಾರ್ಕ್ಸ್ ತಿದ್ದುಪಡಿ ಮಸೂದೆ, ರಾಷ್ಟ್ರೀಯ ನರ್ಸಿಂಗ್ ಮತ್ತು ಮಿಡ್ವೈಫರಿ ಕಮಿಷನ್ ಮಸೂದೆ ಸೇರಿದಂತೆ 15 ಕ್ಕೂ ಹೆಚ್ಚಿನ ಮಸೂದೆಗಳನ್ನು ಮಂಡಿಸಲು ಕೇಂದ್ರ ಸರಕಾರ ತಯಾರಿ ನಡೆಸಿಕೊಂಡಿದೆ.

ಇದನ್ನೂ ಓದಿರಿ: Gujarat Exit Poll Result: ಗುಜರಾತ್‌ನಲ್ಲಿ ಸತತ 7ನೇ ಬಾರಿ ಬಿಜೆಪಿಗೆ ಅಧಿಕಾರ

LEAVE A REPLY

Please enter your comment!
Please enter your name here