pm-kisan-12th-installment-to-be-released-on-oct-17

ನವದೆಹಲಿ: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ಪ್ರಧಾನ ಮಂತ್ರಿ ಕೃಷಿ ಸಮ್ಮಾನ್‌ ನಿಧಿಯ (PM Kisan) 12ನೇ ಕಂತಿನ ಹಣವನ್ನು ಸೋಮವಾರ ಪ್ರಧಾನಿ ನರೇಂದ್ರ ಮೋದಿಯವರು ಬಿಡುಗಡೆ ಮಾಡಲಿದ್ದಾರೆ. ಆಗಸ್ಟ್ ನಲ್ಲಿ ಬಿಡುಗಡೆಯಾಗಬೇಕಿದ್ದ 12ನೇ ಕಂತಿನ ಹಣ 2,000 ರೂ ಇದೀಗ (ಅ.17) ರೈತರ ಖಾತೆಗೆ ನೇರವಾಗಿ ಸಂದಾಯವಾಗಲಿದೆ.

ಸೋಮವಾರದಿಂದ ಎರಡು ದಿನಗಳ ಕಾಲ ʼಪಿಎಂ ಕಿಸಾನ್‌ ಸಮ್ಮಾನ್‌ ಸಮ್ಮೇಳನ-2022ʼ ನಡೆಯಲಿದ್ದು, ಇದನ್ನು ಉದ್ಘಾಟಿಸಲಿರುವ ಪ್ರಧಾನಿ ನರೇಂದ್ರ ಮೋದಿ ಕಿಸಾನ್‌ ಸಮ್ಮಾನ್‌ ಹಣ ವರ್ಗಾವಣೆಗೆ ಚಾಲನೆ ನೀಡಲಿದ್ದಾರೆ. ಅಲ್ಲದೆ ಇದೇ ಸಂರ್ಭದಲ್ಲಿ ರಸಗೊಬ್ಬರ ತಯಾರಿಕಾ ಸಂಸ್ಥೆಗಳ ಸಹಯೋಗದಲ್ಲಿ ಆರಂಭಿಸುತ್ತಿರುವ 600 ಪಿಎಂ ಕಿಸಾನ್‌ ಸಮೃದ್ಧಿ ಕೇಂದ್ರಗಳನ್ನೂ ಉದ್ಘಾಟಿಸಲಿದ್ದಾರೆ. ಇದೆ ಸಮಯದಲ್ಲಿ ಮೋದಿಯವರು ರೈತರೊಂದಿಗೆ ಸಂವಾದವನಡೆಸಲಿದ್ದಾರೆ ಎಂದು ತಿಳಿದುಬಂದಿದೆ.

ಇದು ಕೃಷಿ ಸಮ್ಮಾನ್‌ ನಿಧಿಯ 12ನೇ ಕಂತಿನ ಹಣವಾಗಿದ್ದು, ಕಳೆದ ಆಗಸ್ಟ್‌ನಲ್ಲಿಯೇ ಈ ಕಂತನ್ನು ಬಿಡುಗಡೆ ಮಾಡಬೇಕಿತ್ತು. ಆದರೆ ಕೇಂದ್ರ ಸರ್ಕಾರ ಮುಂದೂಡುತ್ತಾ ಬಂದಿತ್ತು. ದೇಶದ ಸುಮಾರು 8 ಕೋಟಿ ರೈತರು ಇದರ ಲಾಭ ಪಡೆಯಲಿದ್ದಾರೆ. ಈ ನಿಧಿಯನ್ನು ಪಡೆಯಬೇಕಾದರೆ ರೈತರು ಇ-ಕೆವೈಸಿ ಮಾಡಿಸಿರಬೇಕಾದದು ಕಡ್ಡಾಯ ಎಂದು ಈಗಾಗಲೇ ಪ್ರಕಟಿಸಲಾಗಿದೆ. ಇ-ಕೆವೈಸಿ ಮಾಡಿಸಿರುವ ರೈತರ ಖಾತೆಗಳಿಗೆ ಮಾತ್ರ ಈ ಬಾರಿ ಹಣ ಸಂದಾಯವಾಗಲಿದೆ.

ಪ್ರಧಾನ ಮಂತ್ರಿ ಕೃಷಿ ಸಮ್ಮಾನ್‌ ಯೋಜನೆಗೆ ಕೆ ವೈ ಸಿ ಕುರಿತು ಸಂಪೂರ್ಣ ಮಾಹಿತಿಗೆ ಈ ಲೇಖನ ಓದಿರಿ: ಪಿಎಂ ಕಿಸಾನ್ ಯೋಜನೆಯ ಫಲಾನುಭವಿಗಳು ಇ-ಕೆವೈಸಿ ಮಾಡುವುದು ಹೇಗೆ ?

ಕೆವೈಸಿ ಮಾಡುವುದು ಏಕೆ ಕಡ್ಡಾಯವಾಗಿದೆ ?

ಯೋಜನೆಯ ನಿಯಮಗಳ ಪ್ರಕಾರ ತೆರಿಗೆ ಪಾವತಿಸುವವರು, ಸರ್ಕಾರಿ ಮತ್ತು ಅರೆ ಸರ್ಕಾರಿ ನೌಕರಿಯಲ್ಲಿರುವ ಸದಸ್ಯರನ್ನು ಹೊಂದಿರುವ ರೈತ ಕುಟುಂಬ ಈ ಯೋಜನೆಯ ಲಾಭ ಪಡೆಯುವಂತಿಲ್ಲ. ಅಲ್ಲದೆ, ಈಗಾಗಲೇ ಈ ಯೋಜನೆ ಪ್ರಾರಂಭವಾಗಿ ಮೂರು ವರ್ಷಗಳಾಗಿದ್ದು, ಅನೇಕ ರೈತರು ಮೃತಪಟ್ಟಿದ್ದಾರೆ, ಇಲ್ಲವೇ ಜಮೀನು ಮಾರಾಟ ಮಾಡಿದ್ದಾರೆ. ಈ ಬಗ್ಗೆಯೂ ಸರಿಯಾದ ಮಾಹಿತಿ ಸಂಗ್ರಹಿಸಿಕೊಂಡು ಅರ್ಹ ರೈತರಿಗೆ ಮಾತ್ರ ಸಹಾಯಧನ ನೀಡಲು ಕೇಂದ್ರ ಸರ್ಕಾರವು ಇ-ಕೆವೈಸಿ ಮಾಡಿಸುವುದನ್ನು ಕಡ್ಡಾಯಗೊಳಿಸಿದೆ.

ಇದನ್ನೂ ಓದಿರಿ: 75 ಜಿಲ್ಲೆಗಳಲ್ಲಿ 75 ಡಿಜಿಟಲ್ ಬ್ಯಾಂಕಿಂಗ್ ಘಟಕ ಉದ್ಘಾಟಿಸಲಿರುವ ಪ್ರಧಾನಿ ಮೋದಿ

ತಾಜಾ ಸುದ್ದಿಗಳಿಗಾಗಿ ನಮ್ಮನ್ನು ಸಾಮಾಜಿಕ ತಾಣಗಳಲ್ಲಿ ಫಾಲೋ ಮಾಡಿ
ವಾಟ್ಸಪ್ಟೆಲಿಗ್ರಾಮ್ಕೂ ಆಫ್ಫೇಸ್ ಬುಕ್ ಫೇಜ್

ಪ್ರತಿಷ್ಠಿತ ನ್ಯೂಸ್ ಆಫ್ ಗಳಲ್ಲಿ ನಮ್ಮನ್ನು ಫಾಲೋ ಮಾಡಿ
ಡೈಲಿಹಂಟ್ಗೂಗಲ್ ನ್ಯೂಸ್ 

LEAVE A REPLY

Please enter your comment!
Please enter your name here