pm-narendra-modi-speech-today-highlights

ನವದೆಹಲಿ: ರಾಜ್ಯದಲ್ಲಿ 65 ನೇ ಕರ್ನಾಟಕ ರಾಜ್ಯೋತ್ಸವ ಸಂಭ್ರಮ ಮನೆಮಾಡಿದ್ದು, ದೇಶದ ಪ್ರಧಾನಿ ನರೇಂದ್ರ ಮೋದಿಯವರು ಜನತೆಗೆ ಕನ್ನಡದಲ್ಲಿಯೇ ಶುಭಾಶಯವನ್ನು ಕೋರಿದ್ದಾರೆ.

ಕನ್ನಡ ರಾಜ್ಯೋತ್ಸವದ ಸಂಭ್ರಮದಲ್ಲಿರುವ ನಾಡಿನ ಜನತೆಗೆ ಪ್ರಧಾನಿಗಳು ಟ್ವಿಟ್ ಮಾಡುವ ಮೂಲಕ ಶುಭಾಷಯ ಕೋರಿದ್ದಾರೆ. ನರೇಂದ್ರ ಮೋದಿಯವರು, “ಕರ್ನಾಟಕದ ನನ್ನ ಸಹೋದರ ಮತ್ತು ಸಹೋದರಿಯರಿಗೆ ಕನ್ನಡ ರಾಜ್ಯೋತ್ಸವದ ಶುಭಾಶಯಗಳು. ಕನ್ನಡಿಗರ ಜನ ಶಕ್ತಿ ಮತ್ತು ಕೌಶಲ್ಯದಿಂದ ಕರ್ನಾಟಕ ಪ್ರಗತಿಯ ಉತ್ತುಂಗಕ್ಕೇರುತ್ತಿದೆ. ಕರ್ನಾಟಕದ ಜನತೆಯ ಸಂತಸ ಮತ್ತು ಉತ್ತಮ ಆರೋಗ್ಯಕ್ಕಾಗಿ ನಾನು ಪ್ರಾರ್ಥಿಸುತ್ತೇನೆ.” ಎಂದು ಶುಭಾಶಯ ಕೋರಿದ್ದಾರೆ.

LEAVE A REPLY

Please enter your comment!
Please enter your name here