ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ನಡೆಯುತ್ತಿರುವ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಕರ್ನಾಟಕದ ಹಿರಿಯ ಬಿಜೆಪಿ ನಾಯಕ ಯಡಿಯೂರಪ್ಪ ಜತೆ ಪ್ರಧಾನಿ ನರೇಂದ್ರ ಮೋದಿ ಮಹತ್ವದ ಮಾತುಕತೆ ನಡೆಸಿದ್ದಾರೆ. ಈ ಬೆಳವಣಿಗೆಯು ಅನೇಕರ ಕುತೂಹಲಕ್ಕೆ ಕಾರಣವಾಗಿದ್ದು, ಕರ್ನಾಟಕದಲ್ಲಿ ಬಿಜೆಪಿ ತಂತ್ರಗಾರಿಕೆಯ ಬಗ್ಗೆ ಚರ್ಚೆಗಳು ಆರಂಭವಾಗಿವೆ.
ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಕರ್ನಾಟಕದ ಹಿರಿಯ ಬಿಜೆಪಿ ನಾಯಕ ಬಿ ಎಸ್ ಯಡಿಯೂರಪ್ಪ ಜತೆ ಪ್ರಧಾನಿ ನರೇಂದ್ರ ಮೋದಿಯವರು ಸುಮಾರು 15 ನಿಮಿಷಗಳ ಕಾಲ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ. ಈ ಮಾತುಕತೆಯು ಕುತೂಹಲಕ್ಕೆ ಕಾರಣವಾಗಿದೆ. ಚುನಾವಣೆ ಸಂಬಂಧ ಚರ್ಚೆಗಳು ನಡೆದಿರಬಹುದು ಎಂಬ ಮಾತುಗಳು ಕೇಳಿಬರುತ್ತಿದ್ದು, ಬಿಜೆಪಿ ಹೊಸ ತಂತ್ರಗಾರಿಕೆಯ ಜೊತೆಗೆ ಬರುವ ನಿರೀಕ್ಷೆಗಳಿವೆ.
ಬಿ ಎಸ್ ಯಡಿಯೂರಪ್ಪ ಕರ್ನಾಟಕದ ಪ್ರಭಲ ಜಾತಿಯ ನಾಯಕರಾಗಿದ್ದು, ಅದನ್ನೂ ಮೀರಿ ಬೆಳೆದಿರುವ ಒಬ್ಬ ಹಿರಿಯರಾಗಿದ್ದಾರೆ. ಈ ಕಾರಣಕ್ಕಾಗಿಯೇ ಬಿಜೆಪಿ ಅವರಿಗೆ ವಿಶೇಷ ಜವಾಬ್ದಾರಿಗಳನ್ನು ನೀಡಿದೆ. ನರೇಂದ್ರ ಮೋದಿಯವರು ಪ್ರತ್ಯೇಕವಾಗಿ ಭೇಟಿಯಾಗಿ ಮಾತನಾಡಿರುವುದು ಹಲವು ಚರ್ಚೆಗಳಿಗೆ ಎಡೆಮಾಡಿಕೊಟ್ಟಿದೆ.
ಇದನ್ನೂ ಓದಿರಿ: ನಾ ನಾಯಕಿ ಕಾರ್ಯಕ್ರಮದಲ್ಲಿ ಮಹಿಳೆಯರಿಗೆ ಬಂಪರ್ ಘೋಷಣೆ; ಪ್ರತಿ ತಿಂಗಳು ₹2,000