Narendra Modi

ಹರಿಯಾಣ: ಪ್ರಧಾನಿ ನರೇಂದ್ರ ಮೋದಿಯವರು ವಿವಿಧ ರಾಜ್ಯಗಳ ಗೃಹ ಸಚಿವರ ಸಮಾವೇಶವನ್ನು ಉದ್ದೇಶಿಸಿ ಮಾತನಾಡುತ್ತ, ಪೊಲೀಸರಿಗಾಗಿ ‘ಒಂದು ರಾಷ್ಟ್ರ ಒಂದು ಸಮವಸ್ತ್ರ’ದ ಕಲ್ಪನೆಯನ್ನು ಪ್ರಸ್ತಾಪಿಸಿದ್ದಾರೆ.

ಹರಿಯಾಣದಲ್ಲಿ ನಡೆಯುತ್ತಿರುವ ವಿವಿಧ ರಾಜ್ಯಗಳ ಗೃಹ ಸಚಿವರ ಸಮಾವೇಶದಲ್ಲಿ ಮಾತನಾಡುತ್ತ, ಕಾನೂನು ಸುವ್ಯವಸ್ಥೆ ಮತ್ತು ಭದ್ರತೆಯ ಸವಾಲುಗಳನ್ನು ಎದುರಿಸಲು ಎಲ್ಲರೂ ಸಂಘಟಿತರಾಗುವುದು ಅಗತ್ಯವಾಗಿದೆ. ಅಲ್ಲದೇ ಹಳೆಯ ಕಾನೂನುಗಳನ್ನು ತಿದ್ದುಪಡಿ ಮಾಡಿ, ಪ್ರಸ್ತುತ ಸಂದರ್ಭಕ್ಕೆ ತಕ್ಕಂತೆ ಕಾನೂನುಗಳನ್ನು ಬದಲಾಯಿಸುವುದು ಅವಶ್ಯವಾಗಿದೆ ಎಂದು ರಾಜ್ಯ ಸರಕಾರಗಳಿಗೆ ಒತ್ತಾಯಿಸಿದರು.

ಅಲ್ಲಿ ಮಾತನಾಡುತ್ತ, ಪೋಲೀಸರ ಕುರಿತಾಗಿ ಒಳ್ಳೆಯ ಅಭಿಪ್ರಾಯ ಇಟ್ಟುಕೊಳ್ಳುವಂತೆ ಇರಬೇಕು, ಅಲ್ಲದೇ ಸಮಸ್ಯೆಗಳು ಶೀಘ್ರವೇ ಪರಿಹಾರವಾಗುವಂತಾಗಬೇಕು. ಈ ನಿಟ್ಟಿನಲ್ಲಿ ಪೊಲೀಸರು ಮತ್ತು ಗುಪ್ತಚರ ಸಂಸ್ಥೆಗಳು ಪರಸ್ಪರ ಸಹಕಾರ ಹೊಂದಿರಬೇಕು ಎಂದು ಹೇಳಿದರು.

ಇದನ್ನೂ ಓದಿರಿ:“ನಿಮ್ಮನ್ನೆಲ್ಲ ನೋಡುವ ಕಾತುರದಲ್ಲಿ” ಪುನೀತ್ ರಾಜಕುಮಾರ್ ಟ್ವಿಟ್ಟರ್ ಖಾತೆಯಿಂದ ಹೊಸ ಪೋಸ್ಟ್ !

ಇದೇ ಸಮಯದಲ್ಲಿ ಮಾತನಾಡುತ್ತ, ‘ಒಂದು ರಾಷ್ಟ್ರ ಒಂದು ಸಮವಸ್ತ್ರ’ ಕೇವಲ ಕಲ್ಪನೆ ಮಾತ್ರ. ನಾನು ಅದನ್ನು ನಿಮ್ಮ ಮೇಲೆ ಹೇರಲು ಪ್ರಯತ್ನಿಸುತ್ತಿಲ್ಲ. ಈ ಕುರಿತಾಗಿ ರಾಜ್ಯ ಸರಕಾರಗಳು ಯೋಚಿಸುವ ಅವಶ್ಯಕತೆಯಿದೆ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಳಿಗಾಗಿ ನಮ್ಮನ್ನು ಸಾಮಾಜಿಕ ತಾಣಗಳಲ್ಲಿ ಫಾಲೋ ಮಾಡಿ
ವಾಟ್ಸಪ್ಟೆಲಿಗ್ರಾಮ್ಕೂ ಆಫ್ಫೇಸ್ ಬುಕ್ ಫೇಜ್

ಪ್ರತಿಷ್ಠಿತ ನ್ಯೂಸ್ ಆಫ್ ಗಳಲ್ಲಿ ನಮ್ಮನ್ನು ಫಾಲೋ ಮಾಡಿ
ಡೈಲಿಹಂಟ್ಗೂಗಲ್ ನ್ಯೂಸ್ 

LEAVE A REPLY

Please enter your comment!
Please enter your name here