ಅಹಮದಾಬಾದ್: ಅನಾರೋಗ್ಯಕ್ಕೆ ಒಳಗಾಗಿದ್ದ ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್ ಅವರಿಗೆ ಕಳೆದೆರಡು ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೆ ನಿಧರಾಗಿದ್ದಾರೆ.
ಈ ಕುರಿತಂತೆ ಟ್ವಿಟ್ ಮಾಡಿರುವ ನರೇಂದ್ರ ಮೋದಿಯವರು, ‘ತಾಯಿಯಲ್ಲಿ ಯಾವಾಗಲೂ ತಿಮೂರ್ತಿಗಳನ್ನು ಕಂಡಿದ್ದೇನೆ. ಅವರ ಬದುಕು ತಪೋ ಸದೃಶ, ನಿಸ್ವಾರ್ಥ ಕರ್ಮಯೋಗಿಯ ಬಾಳ್ವೆ. ಮೌಲ್ಯಗಳಿಗೆ ಬದ್ಧವಾಗಿದ್ದ ತುಂಬು ಜೀವನವಾಗಿತ್ತು’ ಎಂದು ಹೇಳಿದ್ದಾರೆ.
शानदार शताब्दी का ईश्वर चरणों में विराम… मां में मैंने हमेशा उस त्रिमूर्ति की अनुभूति की है, जिसमें एक तपस्वी की यात्रा, निष्काम कर्मयोगी का प्रतीक और मूल्यों के प्रति प्रतिबद्ध जीवन समाहित रहा है। pic.twitter.com/yE5xwRogJi
— Narendra Modi (@narendramodi) December 30, 2022
ಹಿರಿಯ ಜೀವವಾಗಿರುವ ಪ್ರಧಾನಿ ಮೋದಿ ಅವರ ತಾಯಿ ಹೀರಾಬೆನ್, ಇದೇ ವರ್ಷದ ಜೂನ್ ತಿಂಗಳಲ್ಲಿ ನೂರು ವಸಂತಗಳನ್ನು ಪೂರೈಸಿದ್ದರು. ಅಂದು ಸಹ ಮೋದಿ ಖುದ್ದು ಅಮ್ಮನನ್ನು ಭೇಟಿ ಮಾಡಿ, ಅವರ ಪಾದಗಳನ್ನು ತೊಳೆದು ಆಶೀರ್ವಾದ ಪಡೆದಿದ್ದರು. ಅಲ್ಲದೇ, ಇತ್ತೀಚೆಗಷ್ಟೇ ಮುಗಿದ ಗುಜರಾತ್ ವಿಧಾನಸಭೆ ಚುನಾವಣೆಗೂ ಒಂದು ದಿನ ಮೊದಲು ಪ್ರಧಾನಿ ಮೋದಿ ಅವರು ಹೀರಾಬೆನ್ ಅವರನ್ನು ಭೇಟಿ ಮಾಡಿದ್ದರು. ವಿಧಾನಸಭಾ ಚುನಾವಣೆಯಲ್ಲಿ ಹೀರಾಬೆನ್ ಅವರು ಗಾಲಿಕುರ್ಚಿಯ ಮೇಲೆ ಬಂದು ಮತ ಚಲಾಯಿಸಿದ್ದರು.
ಇದನ್ನೂ ಓದಿರಿ: ಪ್ರಧಾನಿ ನರೇಂದ್ರ ಮೋದಿಯವರ ತಾಯಿ ಹೀರಾಬೆನ್ ಪಂಚಭೂತಗಳಲ್ಲಿ ಲೀನ