ಹುಬ್ಬಳ್ಳಿ: ಸ್ವಾಮಿ ವಿವೇಕಾನಂದರ ಜನ್ಮದಿನದ ಪ್ರಯುಕ್ತ ಹುಬ್ಬಳ್ಳಿಯಲ್ಲಿ ಆಯೋಜಿಸಲಾಗಿರುವ ರಾಷ್ಟ್ರೀಯ ಯುವಜನೋತ್ಸವ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗಿಯಾಗಲಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು 3.30 ಕ್ಕೆ ಹುಬ್ಬಳ್ಳಿಯ ವಿಮಾನನಿಲ್ದಾಣಕ್ಕೆ ಬಂದಿಳಿಯಲಿದ್ದಾರೆ.
ಹುಬ್ಬಳ್ಳಿ-ಧಾರವಾಡ ಅವಳಿ ನಗರದಲ್ಲಿ ಇದೇ ಮೊದಲ ಭಾರಿಗೆ ರಾಷ್ಟ್ರೀಯ ಯುವಜನೋತ್ಸವ ಕಾರ್ಯಕ್ರಮ ಆಯೋಜಿಸಲಾಗಿದೆ. 5 ದಿನ ನಡೆಯಲಿರುವ ಈ ವಿಶೇಷ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ ಚಲನೆ ನೀಡಲಾಯಿದ್ದಾರೆ. ಹುಬ್ಬಳ್ಳಿಯ ವಿಮಾನನಿಲ್ದಾಣಕ್ಕೆ ಆಗಮಿಸುವ ಪ್ರಧಾನಿಗಳು ಅಲ್ಲಿಂದ ನೆಹರು ಮೈದಾನಕ್ಕೆ ಬರುವ 7 ವರೆ ಕಿ.ಮೀ. ರೋಡ್ ಶೋ ನಲ್ಲಿ ಪ್ರಧಾನಿಗಳು ಭಾಗಿಯಾಗಲಿದ್ದಾರೆ ಎಂದು ಹೇಳಲಾಗಿದೆ.
ಇದನ್ನೂ ಓದಿರಿ: ಆಂಧ್ರದಲ್ಲಿ ಪ್ರಧಾನಿ ಮೋದಿ ಉದ್ಘಾಟಿಸಲಿದ್ದ ‘ವಂದೇ ಭಾರತ್ ರೈಲಿ’ನ ಮೇಲೆ ಕಲ್ಲು ತೂರಾಟ
ನಗರದಲ್ಲಿ ನಡೆಯಲಿರುವ ಕಾರ್ಯಕ್ರಮಕ್ಕೆ ಭರ್ಜರಿ ಸಿದ್ಧತೆ ಮಾಡಲಾಗಿದೆ. ಅವಳಿ ನಗರ ಸಂಪೂರ್ಣ ವಿದ್ಯುತ್ ನಗರದಿಂದ ಸಿಂಗರಿಸಲಾಗಿದ್ದು, ಮದುವಣಗಿತ್ತಿಯಂತೆ ಶೃಂಗಾರಗೊಂಡಿದೆ. ಸಂಜೆ 4 ಗಂಟೆಗೆ ಯುವಜನೋತ್ಸವ ಕಾರ್ಯಕ್ರಮ ಉದ್ಘಾಟನೆಗೊಳ್ಳಲಿದ್ದು, 25 ಸಾವಿರಕ್ಕೂ ಹೆಚ್ಚಿನ ಯುವಕರು ಭಾಗಿಯಾಗಲು ಅನುವಾಗುವಂತೆ ಸ್ಥಳಾವಕಾಶ ಮಾಡಲಾಗಿದೆ.
ಇನ್ನು ಈ ಕುರಿತಂತೆ ಟ್ವಿಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, “ಸ್ವಾಮಿ ವಿವೇಕಾನಂದರ ಜಯಂತಿಯಂದು ನಾನು ಹುಬ್ಬಳ್ಳಿಯಲ್ಲಿ 26 ನೇಯ ರಾಷ್ಟ್ರೀಯ ಯುವಜನೋತ್ಸವ ಉದ್ಘಾಟಿಸಲು ಕರ್ನಾಟಕಕ್ಕೆ ಬರುತ್ತೇನೆ. ಸ್ವಾಮಿ ವಿವೇಕಾನಂದರ ಆದರ್ಶಗಳು ನಮ್ಮ ಯುವಕರಿಗೆ ಮಾರ್ಗದರ್ಶನ ನೀಡುತ್ತಿರಲಿ. ಹಾಗೆಯೇ ರಾಷ್ಟ್ರ ನಿರ್ಮಾಣದ ನಿಟ್ಟಿನಲ್ಲಿ ಕೆಲಸ ಮಾಡಲು ಪ್ರೇರಣೆ ನೀಡಲಿ” ಎಂದು ಹೇಳಿದ್ದಾರೆ.
ಇದನ್ನೂ ಓದಿರಿ: ಪ್ರಧಾನಿಗೆ ಉಡುಗೊರೆ ನೀಡಲು ಬೇಲೂರು ಶಿಲಾಬಾಲಿಕೆ ವಿಗ್ರಹ ತಯಾರಿಸಿದ ಯುವ ಕಲಾವಿದ