ಕೇದಾರನಾಥ, ಬದರಿನಾಥ ದೇವಾಲಯದಲ್ಲಿ ‘ಪೂಜೆ’ ನಡೆಸಿದ ಪ್ರಧಾನಿ ಮೋದಿ, ರೋಪ್‌ವೇ ಯೋಜನೆಗೆ ಶಂಕುಸ್ಥಾಪನೆ

pm-modi-to-visit-kedarnath-temple-today

ಡೆಹ್ರಾಡೂನ್: ಉತ್ತರಾಖಂಡ್ ಪ್ರವಾಸದಲ್ಲಿರುವ ನರೇಂದ್ರ ಮೋದಿಯವರು ಶುಕ್ರವಾರ ಕೇದಾರನಾಥನ ಸನ್ನಿಧಾನಕ್ಕೆ ಭೇಟಿ ನೀಡಿದ್ದಾರೆ. ವಿಶೇಷ ಪೂಜೆಯನ್ನು ಸಲ್ಲಿಸಿದ ಬಳಿಕ ಹೇಮಕುಂಡ್ ಸಾಹಿಬ್ ರೋಪ್‌ವೇ ಮತ್ತು ಕೆಲವೊಂದು ರಸ್ತೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

ನರೇಂದ್ರ ಮೋದಿಯವರು ಅಲ್ಲಿನ ಬೆಟ್ಟದ ಜನರ ಸಾಂಪ್ರದಾಯಿಕ ಉಡುಪನ್ನು ಧರಿಸಿ ಕೇದಾರನಾಥ ದೇವಾಲಯಕ್ಕೆ ಆಗಮಿಸಿದರು. ಅಲ್ಲದೇ ಭಕ್ತಿಯಿಂದ ಕೇದಾರನಾಥನಿಗೆ ಪೂಜೆಯನ್ನು ಸಲ್ಲಿಸಿದರು. ಇದೇ ಸಮಯದಲ್ಲಿ ಪೂಜೆ ನೆರವೇರಿಸಿದ ಪುರೋಹಿತರು ಪ್ರಧಾನಿಯವರಿಗೆ ದೇಶವನ್ನು ಮುನ್ನಡೆಯಲು ಶಕ್ತಿ ನೀಡಲಿ ಎಂದು ಪ್ರಾರ್ಥಿಸಿದರು.

pm-narendra-modi-performs-puja-at-kedarnath-temple

ಗೌರಿಕುಂಡ್‌ನಿಂದ ಕೇದಾರನಾಥ ರೋಪ್‌ವೇ ಯೋಜನೆ

ಕೇದಾರನಾಥದಲ್ಲಿ ರೋಪ್‌ವೇ ಸುಮಾರು 9.7 ಕಿಮೀ ಉದ್ದವಿರುತ್ತದೆ ಮತ್ತು ಗೌರಿಕುಂಡ್ ಅನ್ನು ಕೇದಾರನಾಥಕ್ಕೆ ಸಂಪರ್ಕಿಸುತ್ತದೆ, ಎರಡು ಸ್ಥಳಗಳ ನಡುವಿನ ಪ್ರಯಾಣದ ಸಮಯವನ್ನು ಪ್ರಸ್ತುತ 6-7 ಗಂಟೆಗಳಿಂದ ಕೇವಲ 30 ನಿಮಿಷಗಳಿಗೆ ಕಡಿಮೆ ಮಾಡುತ್ತದೆ.

ಹೇಮಕುಂಡ್ ರೋಪ್‌ವೇ ಗೋವಿಂದಘಾಟ್‌ನಿಂದ ಹೇಮಕುಂಡ್ ಸಾಹಿಬ್‌ಗೆ ಸಂಪರ್ಕ ಕಲ್ಪಿಸುತ್ತದೆ. ಇದು ಸುಮಾರು 12.4 ಕಿಮೀ ಉದ್ದವಿರುತ್ತದೆ ಮತ್ತು ಪ್ರಯಾಣದ ಸಮಯವನ್ನು ಒಂದು ದಿನಕ್ಕಿಂತ ಹೆಚ್ಚು ಸಮಯದಿಂದ ಕೇವಲ 45 ನಿಮಿಷಗಳಿಗೆ ಕಡಿಮೆ ಮಾಡುತ್ತದೆ. ವ್ಯಾಲಿ ಆಫ್ ಫ್ಲವರ್ಸ್ ನ್ಯಾಷನಲ್ ಪಾರ್ಕ್‌ಗೆ ಗೇಟ್‌ವೇ ಆಗಿರುವ ಘಂಗಾರಿಯಾವನ್ನು ಈ ರೋಪ್‌ವೇ ಸಂಪರ್ಕಿಸುತ್ತದೆ ಎಂದು ನರೇಂದ್ರ ಮೋದಿಯವರು ಹೇಳಿದ್ದಾರೆ.

ಸುಮಾರು 2,430 ಕೋಟಿ ರೂಪಾಯಿಗಳ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಿರುವ ಈ ರೋಪ್‌ವೇಗಳು ಪರಿಸರ ಸ್ನೇಹಿ ಸಾರಿಗೆ ವಿಧಾನವಾಗಿದ್ದು, ಇದು ಸುರಕ್ಷಿತ ಮತ್ತು ಸ್ಥಿರವಾದ ಸಾರಿಗೆ ವಿಧಾನವನ್ನು ಒದಗಿಸುತ್ತದೆ. ಈ ಪ್ರಮುಖ ಮೂಲಸೌಕರ್ಯ ಅಭಿವೃದ್ಧಿಯು ಧಾರ್ಮಿಕ ಪ್ರವಾಸೋದ್ಯಮಕ್ಕೆ ಉತ್ತೇಜನವನ್ನು ನೀಡುತ್ತದೆ, ಇದು ಪ್ರದೇಶದ ಆರ್ಥಿಕ ಅಭಿವೃದ್ಧಿಗೆ ಪೂರಕತೆಯನ್ನು ನೀಡುತ್ತದೆ ಮತ್ತು ಬಹು ಉದ್ಯೋಗಾವಕಾಶಗಳ ಸೃಷ್ಟಿಗೆ ಕಾರಣವಾಗಲಿದೆ.

ಇದನ್ನೂ ಓದಿರಿ: ಅರುಣಾಚಲ ಪ್ರದೇಶದಲ್ಲಿ ಸೇನಾ ಹೆಲಿಕಾಪ್ಟರ್ ಪತನ; ಶೋಧ ಕಾರ್ಯಾಚರಣೆಗಳು ನಡೆಯುತ್ತಿವೆ

LEAVE A REPLY

Please enter your comment!
Please enter your name here