ಬ್ರೆಜಿಲ್​ನಲ್ಲಿ ಭುಗಿಲೆದ್ದ ಪ್ರತಿಭಟನೆ: ಪ್ರಜಾಪ್ರಭುತ್ವ ಸಂಪ್ರದಾಯಗಳನ್ನು ಎಲ್ಲರೂ ಗೌರವಿಸಿ-ಮೋದಿ

pm-modi-deeply-concerned-about-brazil-riots

ನವದೆಹಲಿ: ಬ್ರೆಜಿಲ್ ನಲ್ಲಿ ಮಾಜಿ ಅಧ್ಯಕ್ಷ ಜೈರ್​ ಬೋಲ್ಸನಾರೋ ಬೆಂಬಲಿಗಳು ನಡೆಸುತ್ತಿರುವ ಪ್ರತಿಭಟನೆಗಳು ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಭಾರತದ ಪ್ರಧಾನಿ ನರೇಂದ್ರ ಮೋದಿಯವರು ಕಳವಳ ವ್ಯಕ್ತಪಡಿಸಿದ್ದಾರೆ. ಈ ಕುರಿತು ಟ್ವಿಟ್ ಮಾಡಿರುವ ಅವರು “ಪ್ರಜಾಪ್ರಭುತ್ವ ಸಂಪ್ರದಾಯಗಳನ್ನು ಎಲ್ಲರೂ ಗೌರವಿಸಬೇಕು” ಎಂದು ಹೇಳಿದ್ದಾರೆ.

ಬ್ರೆಜಿಲ್‌ನ ಬಲಪಂಥೀಯ ಮಾಜಿ ಅಧ್ಯಕ್ಷ ಜೈರ್ ಬೋಲ್ಸನಾರೊ ಅವರ ನೂರಾರು ಬೆಂಬಲಿಗರು ರಾಷ್ಟ್ರೀಯ ಕಾಂಗ್ರೆಸ್, ಅಧ್ಯಕ್ಷೀಯ ಅರಮನೆ ಮತ್ತು ಸುಪ್ರೀಂ ಕೋರ್ಟ್‌ನ ಮೇಲೆ ದಾಳಿ ನಡೆದಿದ್ದು, ಈ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ ಪ್ರತಿಕ್ರಿಯೆ ನೀಡಿದ್ದಾರೆ.

ಬ್ರೆಜಿಲ್​​ನ ಈ ಬೆಳವಣಿಗೆ ಬಗ್ಗೆ ಕಳವಳ ವ್ಯಕ್ತಪಡಿಸಿ ಟ್ವೀಟ್​ ಮಾಡಿರುವ ಪ್ರಧಾನಿ ಮೋದಿ ‘ಬ್ರೆಜಿಲ್​​ನ ಬ್ರೆಸಿಲಿಯಾದಲ್ಲಿರುವ ಸರ್ಕಾರಿ ಸಂಸ್ಥೆಗಳಲ್ಲಿ ವಿಧ್ವಂಸಕ ಕೃತ್ಯ ನಡೆಸಿದ್ದು ಕಳವಳ ಮೂಡಿಸಿತು. ನಿಜಕ್ಕೂ ಇದು ಅಪಾಯಕಾರಿ ಬೆಳವಣಿಗೆ. ಪ್ರಜಾಪ್ರಭುತ್ವದ ಸಂಪ್ರದಾಯಗಳನ್ನು ಎಲ್ಲರೂ ಗೌರವಿಸಬೇಕು. ಈ ವಿಚಾರದಲ್ಲಿ ಬ್ರೆಜಿಲ್​ ಸರ್ಕಾರಕ್ಕೆ ನಮ್ಮ ಬೆಂಬಲ ಸೂಚಿಸುತ್ತೇವೆ’ ಎಂದು ಹೇಳಿದ್ದಾರೆ.

ಇದನ್ನೂ ಓದಿರಿ: ಮೊದಲ ಬಾರಿಗೆ ಯುಎಸ್‌ ಸಿವಿಲ್ ಕೋರ್ಟ್‌ ನ್ಯಾಯಾಧೀಶೆಯಾಗಿ ಭಾರತೀಯ ಮೂಲದ ಸಿಖ್ ಮಹಿಳೆ ಆಯ್ಕೆ

LEAVE A REPLY

Please enter your comment!
Please enter your name here