ಪ್ರಧಾನಿ ಮೋದಿ ಸಹೋದರ ಪ್ರಯಾಣಿಸುತ್ತಿದ್ದ ಕಾರು ಅಪಘಾತ

pm-modis-brother-prahlad-modi-injured-in-road-accident

ಮೈಸೂರು: ಮೈಸೂರು ತಾಲೂಕಿನ ಕಡಕೊಳ ಬಳಿ ಪ್ರಧಾನಿ ನರೇಂದ್ರ ಮೋದಿ ಅವರ ಸಹೋದರ ಪ್ರಹ್ಲಾದ್ ಮೋದಿ ಅವರು ಪ್ರಯಾಣಿಸುತ್ತಿದ್ದ ಕಾರು ಮಂಗಳವಾರ ಅಪಘಾತಕ್ಕೀಡಾಗಿದ್ದು, ಪ್ರಹ್ಲಾದ್ ಮೋದಿ, ಅವರ ಪುತ್ರ ಹಾಗೂ ಸೊಸೆ ಗಂಭೀರವಾಗಿ ಗಾಯಗೊಂಡಿದ್ದಾರೆ.

ಪ್ರಹ್ಲಾದ್ ಮೋದಿ ಅವರು ಇಂದು ಬೆಳಗ್ಗೆ ಬೆಂಗಳೂರಿನಿಂದ ಬಂಡೀಪುರಕ್ಕೆ ಮರ್ಸಿಡಿಸ್ ಬೆಂಜ್ ಕಾರಿನಲ್ಲಿ ಖಾಸಗಿ ಪ್ರವಾಸಕ್ಕೆ ತೆರಳುತ್ತಿದ್ದ ವೇಳೆ ಕಡಕೋಳ ಕೈಗಾರಿಕಾ ಪ್ರದೇಶದ ಬಳಿ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ.

ಕಾರಿನಲ್ಲಿ ಪ್ರಹ್ಲಾದ್ ಮೋದಿ, ಅವರ ಮಗ, ಸೊಸೆ, ಮೊಮ್ಮಗ ಮತ್ತು ಚಾಲಕ ಇದ್ದರು. ಗಾಯಗೊಂಡಿರುವ ಅವರನ್ನು ಕೂಡಲೇ ಮೈಸೂರಿನ ಎಂಜಿ ರಸ್ತೆಯಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇದನ್ನೂ ಓದಿರಿ: ಶಾಂತಿ ಸೂತ್ರಕ್ಕೆ ಭಾರತದ ಬೆಂಬಲ ಅಗತ್ಯ; ಮೋದಿ ಜೊತೆ ಝೆಲೆನ್ಸ್ಕಿ ಸಂಭಾಷಣೆ

LEAVE A REPLY

Please enter your comment!
Please enter your name here