ಕಲಬುರಗಿ: ಪ್ರಧಾನಿ ನರೇಂದ್ರ ಮೋದಿಯವರು ಕಲ್ಯಾಣ ಕರ್ನಾಟಕದ ಕಲಬುರಗಿ ಜಿಲ್ಲೆಗೆ ಬಂದಿಳಿದಿದ್ದಾರೆ. ದೆಹಲಿಯಿಂದ ವಿಶೇಷ ವಿಮಾನದಲ್ಲಿ ಬಂದಿಳಿದ ಅವರನ್ನು ರಾಜ್ಯಪಾಲ ತಾವರ್ ಚಂದ್ ಗೆಹ್ಲೊಟ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯ ಬಿಜೆಪಿ ನಾಯಕರು, ಕೇಂದ್ರ ಸಚಿವರು ಬರಮಾಡಿಕೊಂಡಿದ್ದಾರೆ.
ಪ್ರಧಾನಿಗಳು ಇಲ್ಲಿಂದ ನೇರವಾಗಿ ಯಾದಗಿರಿ ಜಿಲ್ಲೆ ಹುಣಸಗಿ ತಲೂಕು ಕೊಡೆಕಲ್ ಹೆಲಿಪ್ಯಾಡ್‌ಗೆ ಹೆಲಿಕಾಪ್ಟರ್ ಮೂಲಕ ತೆರಳಲಿದ್ದಾರೆ. ನಾರಾಯಣಪುರ ಎಡದಂಡೆ ಕಾಲುವೆ ವಿಸ್ತರಣೆ ಮತ್ತು ನವೀಕರಣ ಹಾಗೂ ಆಧುನೀಕರಣದ ಕಾಮಗಾರಿಯನ್ನು ಲೋಕಾರ್ಪಣೆ ಮಾಡಲಿದ್ದಾರೆ.
ಮಧ್ಯಾಹ್ನ 1 ಗಂಟೆಗೆ ಜಲ್ ಜೀವನ್ ಮಿಷನ್ ಅಡಿಯಲ್ಲಿ ಯಾದಗಿರಿ ಬಹುಗ್ರಾಮ ಕುಡಿಯುವ ನೀರು ಸರಬರಾಜು ಯೋಜನೆ ಮತ್ತು ಸರತ್ ಚೆನ್ನೈ ಎಕ್ಸ್‌ಪ್ರೆಸ್ ವೇ ಪ್ಯಾಕೇಜ್ 3ನೇ ಕಾಮಗಾರಿಗಳ ಶಂಕುಸ್ಥಾಪನಾ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಅಲ್ಲಿಂದ ನೇರವಾಗಿ ಕಲಬುರಗಿ ಜಿಲ್ಲೆ ಸೇಡಂ ತಾಲೂಕು ಮಳಖೇಡದಲ್ಲಿ ಆಯೋಜಿಸಲಾಗಿರುವ ಹಕ್ಕು ಪತ್ರ ವಿತರಣೆ ಹಾಗೂ ವಿವಿಧ ಕಾರ್ಯಕ್ರಮಗಳ ಶಿಲನ್ಯಾಸ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.
ಇದನ್ನೂ ಓದಿರಿ: ಪಾಕಿಸ್ತಾನ ಮೂಲದ ಎಲ್ ಇಟಿ ಉಪ ನಾಯಕ ಅಬ್ದುಲ್ ರೆಹಮಾನ್ ಮಕ್ಕಿ ಜಾಗತಿಕ ಭಯೋತ್ಪಾದಕ