ನವದೆಹಲಿ: ಭಾರತೀಯ ಚಿತ್ರರಂಗದ ಲೆಜೆಂಡರಿ ಗಾಯಕಿ ಲತಾ ಮಂಗೇಶ್ಕರ್ ಅವರಿಗೆ ಇಂದು 92 ನೇ ಹುಟ್ಟುಹಬ್ಬದ ಸಂಭ್ರಮ. ಈ ವಿಶೇಷ ದಿನಕ್ಕೆ ದೇಶದ ಪ್ರಧಾನಿ ನರೇಂದ್ರ ಮೋದಿಯವರು ಟ್ವಿಟ್ಟರ್ ಮೂಲಕ ಶುಭಾಶಯವನ್ನು ಕೋರಿದ್ದಾರೆ.
ತಮ್ಮ ಗಾಯನದ ಮೂಲಕ ಹಲವಾರು ಅಭಿಮಾನಿಗಳನ್ನು ಗಳಿಸಿರುವ ಲೆಜೆಂಡರಿ ಗಾಯಕಿ ಲತಾ ಮಂಗೇಶ್ಕರ್ ಅವರು 92 ನೇಯ ವಸಂತಕ್ಕೆ ಕಾಲಿಟ್ಟಿದ್ದು, ಈ ಸಮಯದಲ್ಲಿ ಮೋದಿಯವರಿಂದ ಶುಭಾಷಯ ದೊರೆತಿದೆ. 1945 ರಲ್ಲಿ ತಮ್ಮ ಚಿತ್ರರಂಗದ ಜರ್ನಿಯನ್ನು ಆರಂಭಿಸಿದ ಇವರು, ಜಗತ್ತಿನಾದ್ಯಂತ ಅಪಾರವಾದ ಅಭಿಮಾನಿಗಳನ್ನು ಹೊಂದಿದ್ದಾರೆ.
ನರೇಂದ್ರ ಮೋದಿಯವರು ತಮ್ಮ ಟ್ವಿಟ್ ನಲ್ಲಿ “ಲತಾ ದೀದಿ ತಮಗೆ ಶುಭಾಶಯಗಳು. ತಮ್ಮ ಸುಶ್ರಾವ್ಯ ದ್ವನಿಯಿಂದಾಗಿ ಜಗತ್ತಿನ ಪ್ರಸಿದ್ಧಿಯನ್ನು ಗಳಿಸಿದ್ದೀರಿ, ಭಾರತೀಯ ಸಂಸ್ಕೃತಿ ಮತ್ತು ಮಾನವೀಯತೆಯಿಂದಾಗಿ ಹೆಸರುವಾಸಿಯಾಗಿದ್ದಾರೆ. ಅವರದು ಸುದೀರ್ಘ ಮತ್ತು ಆರೋಗ್ಯಯುತ ಜೀವನ ಆಗಿರಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ.”
Birthday greetings to respected Lata Didi. Her melodious voice reverberates across the world. She is respected for her humility & passion towards Indian culture. Personally, her blessings are a source of great strength. I pray for Lata Didi’s long & healthy life. @mangeshkarlata
— Narendra Modi (@narendramodi) September 28, 2021