Modi In Bangalore: ಬೆಂಗಳೂರಿಗೆ ಬಂದಿಳಿದ ಪ್ರಧಾನಿ ನರೇಂದ್ರ ಮೋದಿ

ಪ್ರಧಾನಿ ನರೇಂದ್ರ ಮೋದಿ । pm-narendra-modi-landed-in-hal-airport-bengaluru

ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಟರ್ಮಿನಲ್ -2, ಕೆಂಪೇಗೌಡ ಪ್ರತಿಮೆ, ಒಂದೇ ಭರತ್ ರೈಲು ಸೇರಿದಂತೆ ಹಲವು ಕಾರ್ಯಕ್ರಮಗಳ ಉದ್ಘಾಟನೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿನ ಹೆಚ್ ಎಎಲ್ ವಿಮಾನ ನಿಲ್ದಾಣಕ್ಕೆ ಇಂದು ಬೆಳಗ್ಗೆ ಬಂದಿಳಿದಿದ್ದಾರೆ.

ಹೆಚ್ ಎಎಲ್ ವಿಮಾನ ನಿಲ್ದಾಣಕ್ಕೆ ವಿಶೇಷ ವಿಮಾನದಲ್ಲಿ ಬಂದಿಳಿಯುತ್ತಿದ್ದಂತೆ ಪ್ರಧಾನಿಗಳನ್ನು ಬರಮಾಡಿಕೊಳ್ಳಲು ರಾಜ್ಯಪಾಲರಾದ ತ್ಯಾವರ್ ಚಂದ್ ಗೆಹ್ಲೊಟ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಸೇರಿದಂತೆ ರಾಜ್ಯ ಸಚಿವ ಸಂಪುಟದ ಸದಸ್ಯರು ಆಗಮಿಸಿದ್ದರು.


ಕನಕದಾಸ ಜಯಂತಿ ಪ್ರಯುಕ್ತ ಹೆಚ್ ಎಎಲ್ ವಿಮಾನ ನಿಲ್ದಾಣದಿಂದ ನೇರವಾಗಿ ವಿಧಾನಸೌಧದ ಶಾಸಕರ ಭವನಕ್ಕೆ ತೆರಳಿ ಕನಕದಾಸ, ವಾಲ್ಮೀಕಿ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿದರು. ಅಲ್ಲಿಂದ ನೇರವಾಗಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣಕ್ಕೆ ತೆರಳಿದರು.

ವಂದೇ ಭಾರತ್​ ಎಕ್ಸ್​ಪ್ರೆಸ್​ಗೆ ಚಾಲನೆ

ಹಲವು ಕಾರ್ಯಕ್ರಮಗಳ ಉದ್ಘಾಟನೆಗೆ ಬೆಂಗಳೂರಿಗೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿಯವರು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದ ಪ್ಲಾಟ್​ಫಾರಂ ಸಂಖ್ಯೆ 7 ರಲ್ಲಿ ವಂದೇ ಭಾರತ್ ಎಕ್ಸ್​ಪ್ರೆಸ್ ರೈಲಿಗೆ ಚಾಲನೆಯನ್ನು ನೀಡಿದ್ದಾರೆ. ಅಲ್ಲದೇ ರಾಜ್ಯ ಸರಕಾರ ಆಯೋಜಿಸಿರುವ ‘ಭಾರತ್ ಗೌರವ್ ಕಾಶಿ ದರ್ಶನ್’ ರೈಲಿಗೂ ಸಹ ಚಲನೆಯನ್ನು ನೀಡಿದ್ದಾರೆ. ಈ ರೈಲು ಕಾಶಿ, ಅಯೋದ್ಯೆ ಸೇರಿದಂತೆ ಹಲವು ಯಾತ್ರಾ ಸ್ಥಳಗಳಿಗೆ ಕೊಂಡೊಯ್ಯಲಿದೆ. ಈ ರೈಲಿನಲ್ಲಿ ಪ್ರಯಾಣಕ್ಕೆ ಒಬ್ಬ ವ್ಯಕ್ತಿಗೆ ಕೇವಲ 20000 ಸಾವಿರ ಶುಲ್ಕವನ್ನು ನಿಗದಿ ಮಾಡಲಾಗಿದೆ. ಇದಕ್ಕೆ ಸರಕಾರ 5 ಸಾವಿರ ರೂಪಾಯಿಗಳನ್ನು ಸಹಾಯಧನದ ರೂಪದಲ್ಲಿ ಒದಗಿಸಲಿದೆ. ಈ ರೈಲಿನ ಮೂಲಕ ಪವಿತ್ರ ಯಾತ್ರೆಯನ್ನು ಒಂದು ವಾರದಲ್ಲಿ ಕೇವಲ 15 ಸಾವಿರ ಮೊತ್ತದಲ್ಲಿ ಪೂರ್ಣಗೊಳಿಸಬಹುದಾಗಿದೆ.

ಇದನ್ನೂ ಓದಿ: ದಕ್ಷಿಣ ಭಾರತದ ಮೊದಲ ‘ಒಂದೇ ಭರತ್’ ಎಕ್ಸ್ ಪ್ರೆಸ್’ ರೈಲಿಗೆ ಮೋದಿ ಚಾಲನೆ !

ವೈರಲ್ ಸುದ್ದಿಗಳು

LEAVE A REPLY

Please enter your comment!
Please enter your name here