ಮಲ್ಲಿಕಾರ್ಜುನ ಖರ್ಗೆಗೆ ಶುಭಾಶಯ ಕೋರಿದ ಪ್ರಧಾನಿ ಮೋದಿ

ದೇಶದ ಅತ್ಯಂತ ಹಳೆಯ ಪಕ್ಷ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಶುಭಾಶಯ ತಿಳಿಸಿದ್ದಾರೆ.

narendra-modi-deliver-speech-at-un-council

ನವದೆಹಲಿ: ದೇಶದ ಹಳೆಯ ಪಕ್ಷ ಕಾಂಗ್ರೆಸ್ ಗೆ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಶುಭಾಶಯ ತಿಳಿಸಿದ್ದಾರೆ.

ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಅಕ್ಟೋಬರ್ 17 ರಂದು ನಡೆದ ಚುನಾವಣೆಯ ಫಲಿತಾಂಶ ಇಂದು ಪ್ರಕಟವಾಗಿದ್ದು, ಮಲ್ಲಿಕಾರ್ಜುನ್ ಖರ್ಗೆ ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷರಾಗಿ ಹೊಸ ಜವಾಬ್ದಾರಿ ವಹಿಸಿಕೊಳ್ಳುತ್ತಿರುವ ಖರ್ಗೆ ಅವರಿಗೆ ಪ್ರಧಾನಿ ಮೋದಿ ಅವರು ಅಭಿನಂದನೆ ಸಲ್ಲಿಸಿದ್ದಾರೆ. “ಕಾಂಗ್ರೆಸ್ ಅಧ್ಯಕ್ಷರಾಗಿ ಹೊಸ ಜವಾಬ್ದಾರಿ ವಹಿಸಿಕೊಳ್ಳುತ್ತಿರುವ ಮಲ್ಲಿಕಾರ್ಜುನ ಖರ್ಗೆ ಜೀ ಅವರಿಗೆ ನನ್ನ ಶುಭಾಶಯಗಳು. ಮುಂದೆ ನೀವು ಫಲಪ್ರದವಾದ ಅಧಿಕಾರಾವಧಿಯನ್ನು ಪೂರೈಸಿ” ಎಂದು ಮೋದಿ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿರಿ: Defence Expo 2022: ಇಂಡೋ-ಪಾಕ್‌ ಗಡಿಯಲ್ಲಿ ಹೊಸ ವಾಯುನೆಲೆ ನಿರ್ಣಾಯಕ ಎಂದ ಪ್ರಧಾನಿ ಮೋದಿ

LEAVE A REPLY

Please enter your comment!
Please enter your name here