ಪಂಜಾಬ್ ನ್ಯಾಷನಲ್ ಬ್ಯಾಂಕ್‍ಗೆ ಸಾವಿರಾರು ಕೋಟಿ ರೂಪಾಯಿ ವಂಚಿಸಿ ಭಾರತದಿಂದ ಪರಾರಿಯಾಗಿದ್ದ ವಜ್ರದ ವ್ಯಾಪಾರಿ ಮೆಹುಲ್ ಚೋಕ್ಸಿಯನ್ನು ಡೊಮಿನಿಕಾದಲ್ಲಿ ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.
ಆ್ಯಂಟಿಗುವಾ ಮತ್ತು ಬಾರ್ಬುಡಾದಿಂದಲೂ ಮೆಹುಲ್ ಚೋಕ್ಸಿ ನಾಪತ್ತೆಯಾಗಿರುವ ಕುರಿತು ಮಾಹಿತಿಗಳು ಕೇಳಿ ಬಂದಿದ್ದವು. ಕಾರಣ ಚೋಕ್ಸಿ ವಿರುದ್ಧ ಇಂಟರ್‌ಪೋಲ್ ಯೆಲ್ಲೋ ನೋಟಿಸ್ ಜಾರಿಗೊಳಿಸಿತ್ತು. ಈತನ ಪತ್ತೆಗಾಗಿ ಪೊಲೀಸರು ಹುಡುಕಾಟವನ್ನು ಆರಂಭಿಸಿದ್ದರು. ಈಗ ಬೋಟಿನಲ್ಲಿ ಪರಾರಿಯಾಗಲು ಯತ್ನಿಸುತ್ತಿದ್ದ ಚೋಕ್ಸಿಯನ್ನು ಪೊಲೀಸರು ಬಂಧಿಸಿದ್ದಾರೆ ಎಂಬ ಮಾಹಿತಿಗಳು ಬರುತ್ತಿವೆ.
ಪಂಜಾಬ್ ನ್ಯಾಷನಲ್ ಬ್ಯಾಂಕ್‍ಗೆ ಸಾವಿರಾರು ಕೋಟಿ ರೂಪಾಯಿ ವಂಚಿಸಿ, ಆ್ಯಂಟಿಗುವಾದಲ್ಲಿ ತಲೆಮರೆಸಿಕೊಂಡಿರುವ ಹಿನ್ನೆಲೆಯಲ್ಲಿ ಭಾರತಕ್ಕೆ ಒಪ್ಪಿಸಬೇಕು ಎಂಬ ಮನವಿ ಸಲ್ಲಿಸಿದ ಬೆನ್ನಲ್ಲೇ ಚೋಕ್ಸಿ ನಾಪತ್ತೆಯಾಗಲು ಪ್ರಯತ್ನಿಸಿದ್ದ. ಮಂಗಳವಾರ ಬಂದನವಾಗಿದ್ದು, ಇನ್ನು 48 ಗಂಟೆಗಳಲ್ಲಿ ಭಾರತಕ್ಕೆ ಆತನನ್ನು ಹಸ್ತಾಂತರಿಸಲಾಗುತ್ತದೆ ಎಂದು ಆ್ಯಂಟಿಗುವಾ ಪ್ರಧಾನಿ ಗಸ್ಟನ್ ಬ್ರೌನೇ ಹೇಳಿದ್ದಾರೆ.
ಇದನ್ನೂ ಓದಿರಿ: ಯಾಸ್ ಚಂಡಮಾರುತ : ಮೂರು ಲಕ್ಷ ಮನೆಗಳಿಗೆ ಹಾನಿ, ಸಂಕಷ್ಟದಲ್ಲಿ ಸಿಲುಕಿದ ಒಂದು ಕೋಟಿ ಜನ