ರಾಮನಗರ: ವೇಶ್ಯಾವಾಟಿಕೆ, ಅಕ್ರಮ ವರ್ಗಾವಣೆ ದಂದೆ ಆರೋಪಕ್ಕೆ ಸಂಬಂಧಿಸಿದಂತೆ ಸ್ಯಾಂಟ್ರೋ ರವಿ ಹುಡುಕುತ್ತಿರುವ ವಿಶೇಷ ಪೊಲೀಸ್ ತಂಡ ಇಂದು ಕಾರು ಚಾಲಕನನ್ನು ವಶಕ್ಕೆ ಪಡೆದಿದ್ದಾರೆ.
ರಾಮನಗರದಲ್ಲಿ ಎಸ್ ಪಿ ಸಂತೋಷ್ ಬಾಬು ನೇತೃತ್ವದ ತಂಡದಿಂದ ಸ್ಯಾಂಟ್ರೋ ರವಿ ಕಾರು ಚಾಲಕ ಗಿರೀಶ್ ನನ್ನು ವಶಕ್ಕೆ ಪಡೆಯಲಾಗಿದೆ. ರಾಮನಗರದಲ್ಲಿ ಸ್ಯಾಂಟ್ರೋ ರವಿ 2 ದಿನಗಳ ಕಾಲ ತಲೆಮರೆಸಿಕೊಂಡಿದ್ದ ಎನ್ನುವ ಮಾಹಿತಿ ಸಿಕ್ಕ ಹಿನ್ನೆಲೆಯಲ್ಲಿ ಮೈಸೂರಿನಿಂದ ಬಂದಿದ್ದ ಪೊಲೀಸರು ರಾಮನಗರ ಪೊಲೀಸರ ಸಹಾಯದಿಂದ ರವಿ ಕಾರು ಚಾಲಕ ಗಿರೀಶ್ ನನ್ನು ವಶಕ್ಕೆ ಪಡೆದಿದ್ದಾರೆ.
ಇದನ್ನೂ ಓದಿರಿ: ಪ್ರಧಾನಿ ನರೇಂದ್ರ ಮೋದಿ ಆಗಮನ ಹಿನ್ನೆಲೆ ಹುಬ್ಬಳ್ಳಿಗೆ ತೆರಳಿದ ಸಿಎಂ ಬೊಮ್ಮಾಯಿ