President Ram Nath Kovind to address the nation on eve of 74th Independence Day today

ನವದೆಹಲಿ: ದೇಶದಲ್ಲಿ 74 ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ ಕಳೆಕಟ್ಟುತ್ತಿದ್ದು, ಈ ಹಿನ್ನೆಲೆಯಲ್ಲಿ ಇಂದು (ಶುಕ್ರವಾರ) ರಾಷ್ಟ್ರಪತಿ ರಾಮನಾಥ್ ಕೋವಿಂದ್ ದೇಶವನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ.

ದೇಶವು 74 ವರ್ಷಗಳ ಸ್ವತಂತ್ರ ಸಂಭ್ರಮವನ್ನು ಆಚರಿಸುವ ಈ ಸುಸಂದರ್ಭದಲ್ಲಿ ಸಂಜೆ 7 ಗಂಟೆಯ ಸುಮಾರಿಗೆ ರಾಷ್ಟ್ರಪತಿ ಭವನದಿಂದ ರಾಮನಾಥ್ ಕೋವಿಂದ್ ಅವರು ಮಾತನಾಡಲಿದ್ದಾರೆ ಎಂದು ಅಧಿಕೃತ ಮಾಹಿತಿ ತಿಳಿದು ಬಂದಿದೆ.

ದೇಶದ ಜನತೆಯನ್ನು ಉದ್ದೇಶಿಸಿ ಮಾತನಾಡುವ ಸಮಯದಲ್ಲಿ, ಪ್ರಸ್ತುತ ಸಮಯದಲ್ಲಿ ದೇಶ ಅನುಭವಿಸುತ್ತಿರುವ ಕೊರೊನಾ ವೈರಸ್, ಇಂಡೋ-ಚೀನಾ ಸಂಘರ್ಷ, ಶಿಕ್ಷಣ ವ್ಯವಸ್ಥೆ ಸೇರಿದಂತೆ ಪ್ರಮುಖ ವಿಷಯಗಳ ಕುರಿತು ಮಾತನಾಡುವ ಸಾಧ್ಯತೆಗಳಿವೆ ಎಂದು ಹೇಳಲಾಗಿದೆ. ರಾಷ್ಟ್ರಪತಿಯವರ ಭಾಷಣವನ್ನು ಆಲ್ ಇಂಡಿಯಾ ರೇಡಿಯೋ, ದೂರದರ್ಶನ ಸೇರಿದಂತೆ ದೃಶ್ಯ ಮಾಧ್ಯಮಗಳಲ್ಲಿ ಪ್ರಸಾರವಾಗಲಿವೆ.

ಇದನ್ನೂ ಓದಿರಿ: ಪ್ರಣಬ್ ಮುಖರ್ಜಿ ಆರೋಗ್ಯ ಇನ್ನಷ್ಟು ಗಂಭೀರ; ಕೃತಕ ಉಸಿರಾಟದ ವ್ಯವಸ್ಥೆಯಲ್ಲಿ ಮಾಜಿ ರಾಷ್ಟ್ರಪತಿ

ತಾಜಾ ಸುದ್ದಿಗಳಿಗಾಗಿ ನಮ್ಮನ್ನು ಸಾಮಾಜಿಕ ತಾಣಗಳಲ್ಲಿ ಫಾಲೋ ಮಾಡಿ
ವಾಟ್ಸಪ್ಟೆಲಿಗ್ರಾಮ್ಕೂ ಆಫ್ಫೇಸ್ ಬುಕ್ ಫೇಜ್

ಪ್ರತಿಷ್ಠಿತ ನ್ಯೂಸ್ ಆಫ್ ಗಳಲ್ಲಿ ನಮ್ಮನ್ನು ಫಾಲೋ ಮಾಡಿ
ಡೈಲಿಹಂಟ್ಗೂಗಲ್ ನ್ಯೂಸ್ 

LEAVE A REPLY

Please enter your comment!
Please enter your name here