ಬೆಂಗಳೂರು: ರಾಜ್ಯಕ್ಕೆ ಇಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ವಾದ್ರಾ ‘ನಾ ನಾಯಕಿ’ ಸಮಾವೇಶದಲ್ಲಿ ಭಾಗಿಯಾಗಲು ಆಗಮಿಸುತ್ತಿದ್ದಾರೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ಬ್ರಹತ್ ಸಮಾವೇಶ ಆಯೋಜಿಸಲಾಗಿದ್ದು, 12 ಗಂಟೆಗೆ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ.
ಏಪ್ರಿಲ್-ಮೇ ನಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಮಹಿಳಾ ಮತದಾರರನ್ನು ಸೆಳೆಯುವ ಉದ್ದೇಶದಿಂದ ಮಹಿಳೆಯರಿಗಾಗಿ ಪ್ರತ್ಯೇಕ ಪ್ರಣಾಳಿಕೆ ಬಿಡುಗಡೆ ಮಾಡಲು ಕಾಂಗ್ರೆಸ್ ತಯಾರಿ ಮಾಡಿಕೊಂಡಿದೆ. ಈ ಉದ್ದೇಶದ ಭಾಗವಾಗಿ ಇಂದು ಅರಮನೆ ಮೈದಾನದಲ್ಲಿ ‘ನಾ ನಾಯಕಿ’ ಕಾರ್ಯಕ್ರಮ ಆಯೋಜನೆ ಮಾಡಿದೆ.
ಇಂದಿನ ಸಮಾವೇಶದಲ್ಲಿ ಗ್ರಾಮ ಪಂಚಾಯಿತಿ, ಸಹಕಾರ ಸಂಘಗಳಲ್ಲಿ ಸ್ಪರ್ಧಿಸಿದ ಮಹಿಳಾ ನಾಯಕಿಯರು ಈ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಕಾರ್ಯಕ್ರಮಕ್ಕೆ ಸುಮಾರು 1 ಲಕ್ಷ ಮಹಿಳಾ ಕಾರ್ಯಕರ್ತೆಯರನ್ನು ಸೇರಿಸುವ ಯೋಜನೆಯನ್ನು ಕಾಂಗ್ರೆಸ್ ಹಾಕಿಕೊಂಡಿದೆ.
ಕಾರ್ಯಕ್ರಮಕ್ಕೆ ಆಗಮಿಸುತ್ತಿರುವ ಪ್ರಿಯಾಂಕಾ ಅವರ ಬೃಹತ್ ಕಟೌಟ್ಗಳನ್ನು ನಿಲ್ಲಿಸಿ ಎಲ್ಲೆಡೆ ಸ್ವಾಗತ ಕೋರಲಾಗುತ್ತಿದೆ. ಇಂದಿನ ಕಾರ್ಯಕ್ರಮದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷ ಡಿಕೆಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ, ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪಾ ಅಮರನಾಥ್ ಸೇರಿದಂತೆ ಹಲವು ನಾಯಕರು ಭಾಗವಹಿಸಲಿದ್ದಾರೆ.
ಇದನ್ನೂ ಓದಿರಿ: ಮಕರ ಸಂಕ್ರಾಂತಿಗೆ ನಟಿ ಅಮೂಲ್ಯ ಹಂಚಿಕೊಂಡ ಮುದ್ದಾದ ಫ್ಯಾಮಿಲಿ ಫೋಟೋಗಳು