ಮೇಕೆದಾಟು ಯೋಜನೆಗೆ ತಮಿಳುನಾಡು ವಿರೋಧ ಖಂಡಿಸಿ ಪ್ರತಿಭಟನೆ

protest-against-tamilnadu-govt-for-opposing-mekedatu-project

ಚಾಮರಾಜನಗರ (ಜು.18): ಮೇಕೆದಾಟು ಯೋಜನೆಗೆ ತಮಿಳುನಾಡು ಸರ್ಕಾರ ವಿರೋಧ ಮಾಡುತ್ತಿರುವುದನ್ನು ಖಂಡಿಸಿ ಕರ್ನಾಟಕ ಸೇನಾ ಪಡೆ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದರು.

ನಗರದ ಶ್ರೀಚಾಮತಾಜೇಶ್ವರ ಉದ್ಯಾನದ ಆವರಣದಲ್ಲಿ ಸೇನೆಯ ಅಧ್ಯಕ್ಷ ಚಾ.ರಂ.ಶ್ರೀನಿವಾಸಗೌಡ ಅವರ ನೇತೃತ್ವದಲ್ಲಿ ಜಮಾಯಿಸಿದ್ದ ಪ್ರತಿಭಟನಾಕಾರರು ಕಟ್ಟಬೇಕು ಕಟ್ಟಬೇಕು ಮೇಕೆದಾಟು ಕಟ್ಟಬೇಕು. ತಮಿಳುನಾಡು ಸರ್ಕಾರ, ಕರ್ನಾಟಕ ಸರ್ಕಾರ ಹಾಗೂ ರಾಜ್ಯದ  ಎಲ್ಲಾ ಸಂಸದರು ವಿರುದ್ದ ಘೋಷಣೆ ಕೂಗಿ ಅಕ್ರೋಶ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಪ್ರತಿಭಟನೆ ನೇತೃತ್ವ ವಹಿಸಿದ್ದ ಸೇನೆಯ ಅಧ್ಯಕ್ಷ ಚಾ.ರಂ.ಶ್ರೀನಿವಾಸಗೌಡ ಮಾತನಾಡಿ, “ಕರ್ನಾಟಕದ ನೆಲೆದಲ್ಲಿ ನಿರ್ಮಿಸುವ ಮೇಕೆದಾಟು ಆಣೆಕಟ್ಟೆ ಯೋಜನೆಗೆ ತಮಿಳುನಾಡು ಸರ್ಕಾರ ವಿರೋಧ ಮಾಡುತ್ತಿದ್ದು ತಮಿಳುನಾಡಿನ 13 ಪಕ್ಷಗಳು  ಸರ್ವಪಕ್ಷ ನಿಯೋಗ ಹೋಗಿ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿವೆ. ಯಾವುದೇ ಕಾರಣಕ್ಕೂ ಮೇಕೆದಾಟು ಯೋಜನೆಗೆ ಅವಕಾಶ ನೀಡಬಾರದು,  ನಾವು ಯಾವುದೇ ಕಾರಣಕ್ಕೂ ಮೇಕೆದಾಟು ಕಟ್ಟಲು ಬಿಡುವುದಿಲ್ಲ ಎಂದು ಹೇಳಿದೆ. ಈ ರೀತಿಯ ವರ್ತನೆಯಿಂದ ತಮಿಳುನಾಡಿಗೆ ನಾಚಿಕೆ ಆಗಬೇಕು.  ಕರ್ನಾಟಕದ ನೆಲದಲ್ಲಿ ಮೇಕೆದಾಟು ಯೋಜನೆ ಕಟ್ಟುತ್ತಿದ್ದೇವೆ. ಇದನ್ನು ತಡೆಯಲು ನೀವು ಯಾರು ?” ಎಂದು ತಮಿಳುನಾಡು ಸರ್ಕಾರವನ್ನು ಪ್ರಶ್ನಿಸಿದರು.

ಇದನ್ನೂ ಓದಿರಿ: SSLC ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಶುಭ ಕೋರಿದ ಸಿಎಂ

ಇಷ್ಟೆಲ್ಲಾ ಬೆಳವಣಿಗೆ ಆಗಿದ್ದರೂ ಕೂಡ ನಮ್ಮ ರಾಜ್ಯದ 25 ಸಂಸದರು ಇದರ ಬಗ್ಗೆ ಧ್ವನಿ ಎತ್ತಿಲ್ಲ. ಇವರಿಗೆ ರಾಜ್ಯದ ಬಗ್ಗೆ ಕಾಳಜಿ ಇಲ್ಲ. ಈ ವಿಷಯದಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ. ರಾಜ್ಯ ಸರ್ಕಾರ ತಕ್ಣಣವೇ ಮೇಕೆದಾಟು ಯೋಜನೆ ಕಾಮಗಾರಿ ಆರಂಭಿಸಬೇಕು. ಇಲ್ಲದಿದ್ದರೆ ರಾಜ್ಯಾದ್ಯಂತ ಕನ್ನಡಪರ ಸಂಘಟನೆಗಳು ಉಗ್ರ ಪ್ರತಿಭಟನೆ ಮಾಡುವುದಾಗಿ ಚಾ.ರ.‌ಶ್ರೀನಿವಾಸಗೌಡ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ಇದನ್ನೂ ಓದಿರಿ: ಅನ್ ಲಾಕ್ 4.O: ನಾಳೆಯಿಂದಲೇ ಥಿಯೇಟರ್ ಓಪನ್, ನೈಟ್​ ಕರ್ಫ್ಯೂ 1 ಗಂಟೆ ಸಡಿಲ

ಪ್ರತಿಭಟನೆಯಲ್ಲಿ ನಿಜ ಧ್ವನಿ ಗೋವಿಂದರಾಜು, ಕರ್ನಾಟಕ ಕನ್ನಡ ರಕ್ಷಣಾ ವೇದಿಕೆಯ ಅಧ್ಯಕ್ಷ ಚಾ.ಗು.ನಾಗರಾಜ್, ಮೈಸೂರು ಮತ್ತು ಚಾಮರಾಜನಗರ  ಜಿಲ್ಲಾ ಒಕ್ಕಲಿಗರ ಸಂಘದ ಸಹ ಕಾರ್ಯದರ್ಶಿ ಪಿ.ಎಚ್.ರಾಜು, ಗು.ಪುರುಪೋತ್ತಮ್,  ತಾಂಡವಮೂರ್ತಿ, ನಂಜುಂಡ, ವೀರಭದ್ರ ಇತರರು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here