ಚಿಕ್ಕಬಳ್ಳಾಪುರ: ಜುಲೈ ಅಂತ್ಯದ ವೇಳೆಗೆ ಪಿ.ಯು.ಸಿ. ಪರೀಕ್ಷೆಗಳ ಪಲಿತಾಂಶ ಮತ್ತು ಅಗಸ್ಟ್ ಮೊದಲ ವಾರದಲ್ಲಿ ಎಸ್.ಎಸ್.ಎಲ್.ಸಿ. ಪರೀಕ್ಷೆಗಳ ಪಲಿತಾಂಶ ಪ್ರಕಟಗೊಳ್ಳಲಿದೆ ಎಂದು ರಾಜ್ಯ ಪ್ರಾಥಮಿಕ ಹಾಗೂ ಪ್ರೌಡ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ತಿಳಿಸಿದ್ದಾರೆ.
ಚಿಕ್ಕಬಳ್ಳಾಪುರದಲ್ಲಿ ಎಸ್.ಎಸ್.ಎಲ್.ಸಿ. ಪರೀಕ್ಷಾ ಕೇಂದ್ರಗಳಿಗೆ ಬೇಟಿ ನೀಡಿ ಪರಿಶೀಲಿಸಿ, ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಎಸ್.ಎಸ್.ಎಲ್.ಸಿ. ಪರೀಕ್ಷೆಗಳು ಸುಸೂತ್ರವಾಗಿ ನಡೆಯುತ್ತಿವೆ. ಕಳೆದ ವರ್ಷ ಮತ್ತು ಈ ವರ್ಷದ ಮಕ್ಕಳ ಪರೀಕ್ಷಾ ಹಾಜರಾತಿಯನ್ನು ಗಮನಿಸಿದರೆ ಹೆಚ್ಚಿನ ವ್ಯತ್ಯಾಸಗಳು ಆಗಿಲ್ಲ. ಇದೆ ಸಮಯದಲ್ಲಿ ಪರೀಕ್ಷಾ ಕೊಠಡಿಗಳು ಸುರಕ್ಷಾ ಕೇಂದ್ರಗಳಾಗಿ ಕಾರ್ಯ ನಿರ್ವಹಿಸಿವೆ ಎಂದು ಹೇಳಿದ್ದಾರೆ.
ಕೇಂದ್ರದ ಮಾರ್ಗಸೂಚಿಗಳನ್ನು ಗಮನದಲ್ಲಿ ಇಟ್ಟುಕೊಂಡು ರಾಜ್ಯದಲ್ಲಿ ಆನ್ ಲೈನ್ ಶಿಕ್ಷಣ ಪದ್ಧತಿಯನ್ನು ಶಿಕ್ಷಣವನ್ನು ಜಾರಿಗೆ ತರಲಾಗುವುದು. ರಾಜ್ಯದ ಹಿನ್ನೆಲೆಗೆ ಹೊಂದುವಂತೆ ತಜ್ಞರ ಅಭಿಪ್ರಾಯ ತೆಗೆದುಕೊಂಡು ಜಾರಿಗೆ ತರಲು ಕ್ರಮಕೈಗೊಳ್ಳಲಾಗುವುದು ಎಂದು ತಿಳಿಸಿದರು.