rahul-gandhis-twitter-account-restored

ನವದೆಹಲಿ: ತಾತ್ಕಾಲಿಕವಾಗಿ ಸ್ಥಗಿತಗೊಂಡಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಟ್ವಿಟರ್ ಖಾತೆಯನ್ನು ಮತ್ತೆ ಸಕ್ರಿಯಗೊಳಿಸಲಾಗಿದೆ. ಟ್ವಿಟರ್ ನ ಮಾರ್ಗಸೂಚಿಯನ್ನು ಉಲ್ಲಂಘಿಸಿದ ಆರೋಪದ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಅವರ ಖಾತೆಯನ್ನು ಅಮಾನತು ಮಾಡಲಾಗಿತ್ತು.

ವಾಯುವ್ಯ ದಿಲ್ಲಿಯಲ್ಲಿ ಅತ್ಯಾಚಾರಕ್ಕೆ ಗುರಿಯಾಗಿದ್ದ ಬಾಲಕಿಯ ಸಂತ್ರಸ್ತ ಕುಟುಂಬದ ಚಿತ್ರಗಳನ್ನು ರಾಹುಲ್ ಗಾಂಧಿ ಟ್ವಿಟರ್ ನಲ್ಲಿ ಶೇರ್ ಮಾಡಿಕೊಂಡಿದ್ದರು. ಇದು ಕಾನೂನು ಉಲ್ಲಂಘನೆಯಾದ ಕಾರಣ ಖಾತೆ ಅಮಾನತು ಮಾಡಲಾಗಿತ್ತು.

ಬಳಿಕ ಇದಕ್ಕೆ ಪ್ರತಿಕ್ರಿಯೆ ನೀಡಿದ್ದ ಟ್ವಿಟರ್, ರಾಹುಲ್ ಗಾಂಧಿ ಅವರು ಸಂಸ್ಥೆಯ ನಿಯಮಗಳನ್ನು ಉಲ್ಲಂಘಿಸಿದ್ದಾರೆ ಎಂದು ಹೇಳಿತ್ತು. ಟ್ವಿಟರ್ ಖಾತೆ ಅಮಾನತು ಮಾಡಿರುವುದಕ್ಕೆ ಕಾಂಗ್ರೆಸ್ ತೀವ್ರ ಆಕ್ಷೇಪ ವ್ಯಕ್ತಪಡಿಸಿತ್ತು.

ಇದನ್ನೂ ಓದಿರಿ: ಬೆಂಗಳೂರು ನಗರದಲ್ಲಿ ಝೀರೋ ಟ್ರಾಫಿಕ್ ಸಂಚಾರ ವ್ಯವಸ್ಥೆ ಬೇಡ – ಸಿಎಂ ಬಸವರಾಜ ಬೊಮ್ಮಾಯಿ

LEAVE A REPLY

Please enter your comment!
Please enter your name here