ramesh-jarkiholi-discharged-from-hospital

ಬೆಳಗಾವಿ: ಕೊರೋನಾ ಪಾಸಿಟಿವ್ ಮತ್ತು ಉಸಿರಾಟದ ತೊಂದರೆ ಹಿನ್ನೆಲೆಯಲ್ಲಿ ಚಿಕಿತ್ಸೆಗೆ ಗೋಕಾಕ್ ಸರಕಾರಿ ಆಸ್ಪತ್ರೆ ಸೇರಿದ್ದ ರಮೇಶ್ ಜಾರಕಿಹೊಳಿ ಇಂದು ಡಿಸ್ಚಾರ್ಜ್ ಆಗಿದ್ದಾರೆ. ಸದ್ಯ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದು, ಹೋಮ್ ಕ್ವಾರಂಟೈನ್ ನಲ್ಲಿ ಇರುವಂತೆ ತಿಳಿಸಿ, ಬಿಡುಗಡೆ ಮಾಡಿದ್ದಾರೆ.

ಕಳೆದ ಶುಕ್ರವಾರ ಕೊರೋನಾ ಪಾಸಿಟಿವ್ ಬಂದ ಕಾರಣದಿಂದಾಗಿ ಗೋಕಾಕ್ ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದರು. ನಿನ್ನೆ ಮದ್ಯಾಹ್ನದಿಂದಲೂ ಅವರ ಆರೋಗ್ಯವು ಸ್ಥಿರವಾಗಿರುವ ಹಿನ್ನೆಲೆಯಲ್ಲಿ ಡಿಸ್ಚಾರ್ಜ್ ಮಾಡಲಾಗಿದ್ದು, ಕಡ್ಡಾಯವಾಗಿ ಹೋಮ್ ಕ್ವಾರಂಟೈನ್ ನಲ್ಲಿ ಇರುವಂತೆ ತಿಳಿಸಲಾಗಿದೆ. ಅಲ್ಲದೇ ೭ ದಿನಗಳ ಕಾಲ ಅವರ ಆರೋಗ್ಯದಲ್ಲಿ ಯಾವುದೇ ಬದಲಾವಣೆ ಕಂಡುಬಂದರೂ ವೈದ್ಯರಿಗೆ ತಿಳಿಸುವಂತೆ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿಗಳು ತಿಳಿಸಿದ್ದಾರೆ.

ಬ್ಲಾಕ್ ಮೇಲ್ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಕಾ ತಂಡದ ಎದುರು ವಿಚಾರಣೆಗೆ ಹಾಜರಾಗುವಂತೆ ಎರಡು ಬಾರಿ ನೋಟಿಸ್ ನೀಡಲಾಗಿದ್ದು, ಹೋಮ್ ಕ್ವಾರಂಟೈನ್ ಅವಧಿ ಮುಗಿದ ಬಳಿಕ ವಿಚಾರಣೆಗೆ ಹಾಜರಾಗಲಿದ್ದಾರೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿರಿ: Karnataka 2nd PUC Exam-2021: ದ್ವಿತೀಯ ಪಿಯುಸಿ ಪರೀಕ್ಷಾ ದಿನಾಂಕ ಪ್ರಕಟ

ತಾಜಾ ಸುದ್ದಿಗಳಿಗಾಗಿ ನಮ್ಮನ್ನು ಸಾಮಾಜಿಕ ತಾಣಗಳಲ್ಲಿ ಫಾಲೋ ಮಾಡಿ
ವಾಟ್ಸಪ್ಟೆಲಿಗ್ರಾಮ್ಕೂ ಆಫ್ಫೇಸ್ ಬುಕ್ ಫೇಜ್

ಪ್ರತಿಷ್ಠಿತ ನ್ಯೂಸ್ ಆಫ್ ಗಳಲ್ಲಿ ನಮ್ಮನ್ನು ಫಾಲೋ ಮಾಡಿ
ಡೈಲಿಹಂಟ್ಗೂಗಲ್ ನ್ಯೂಸ್ 

LEAVE A REPLY

Please enter your comment!
Please enter your name here