ಬೆಂಗಳೂರು: ಖ್ಯಾತ ಚಿತ್ರ ನಟ, ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಅವರನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದ್ದು, ಕೊರೊನಾ ಸೋಂಕು ಇರುವುದು ದೃಡಪಟ್ಟಿದೆ.
ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅವರಿಗೆ ಕೊರೊನಾ ದೃಡ ಪಟ್ಟ ಹಿನ್ನೆಲೆಯಲ್ಲಿ, ಅವರ ನಿಕಟವರ್ತಿಯಾದ ರಾಕ್ ಲೈನ್ ವೆಂಕಟೇಶ್ ಅವರಿಗೂ ಆತಂಕ ಕಾಡಿತ್ತು. ಈ ಸಂಬಂಧ ಪರೀಕ್ಷೆ ಮಾಡಿಸಲಾಗಿ ಸೋಂಕು ಇರುವುದು ದೃಡ ಪಟ್ಟಿದೆ. ಸದ್ಯ ರಾಕ್ ಲೈನ್ ವೆಂಕಟೇಶ್ ಅವರು ರಾಜ್ ಕುಮಾರ್ ರಸ್ತೆಯಲ್ಲಿರುವ ಸುಗುಣಾ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆಯನ್ನು ಪಡೆದುಕೊಳ್ಳುತ್ತಿದ್ದಾರೆ.