ಚೆನ್ನೈ ನ ಎಂಜಿಎಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ಕೊನೆಯುಸಿರೆಳೆದ ಖ್ಯಾತ ಗಾಯಕ ಎಸ್ ಪಿ ಬಾಲಸುಬ್ರಮಣ್ಯಂ ಅವರ ಅಂತ್ಯಕ್ರಿಯೆ ಇಂದು ನಡೆಯಲಿದೆ.
ಎಸ್ ಪಿ ಬಾಲಸುಬ್ರಹ್ಮಣ್ಯಂ ಅವರ ಅಂತ್ಯ ಕ್ರಿಯೆಯನ್ನು ಇಂದು ಚೆನ್ನೈನ ತಿರುವಳ್ಳುವರ್ ಜಿಲ್ಲೆಯ ತಮರೈಪಕ್ಕಂ ಗ್ರಾಮದ ಅವರ ಫಾರ್ಮ್ ಹೌಸ್ ನಲ್ಲಿ ನಡೆಸಲಾಗುತ್ತದೆ. ಅಂತಿಮ ಪೂಜಾ ವಿಧಿವಿಧಾನಗಳನ್ನು ತೆಲಗು ಬ್ರಾಹ್ಮಣ ಸಂಪ್ರದಾಯದಂತೆ ನಡೆಸಲಾಗುತ್ತದೆ ಎಂದು ತಿಳಿದುಬಂದಿದೆ.
ಈಗಾಗಲೇ ಪಾರ್ಥಿವ ಶರೀರವನ್ನು ಸಾರ್ವಜನಿಕರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತಿದ್ದು, ಅಂತ್ಯಸಂಸ್ಕಾರದ ವೇಳೆ ಪೊಲೀಸ್ ಗೌರವ ಸಮರ್ಪಣೆ ಮಾಡಲಾಗುವುದು ಎಂದು ತಮಿಳುನಾಡು ಮುಖ್ಯಮಂತ್ರಿ ತಿಳಿಸಿದ್ದಾರೆ. ಅಂತ್ಯಸಂಸ್ಕಾರಕ್ಕೆ ಸಂಬಂಧಿಸಿದಂತೆ ತಮಿಳುನಾಡು ಸರ್ಕಾರ ಎಸ್ಪಿಬಿ ಕುಟುಂಬದವರೊಂದಿಗೆ ನಿರಂತರ ಮಾತುಕತೆಗಳನ್ನು ನಡೆಸಿದೆ. ಅಂತ್ಯಕ್ರಿಯೆಯಲ್ಲಿ ನಟ ರಜನಿಕಾಂತ್ ಚಿರಂಜೀವಿ ಸೇರಿದಂತೆ ಗಣ್ಯಾತಿಗಣ್ಯರು ಸೇರಲಿರುವ ಕಾರಣದಿಂದಾಗಿ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.