sabarimala-temple-begins-today-only-opportunity-for-covid-negatives

ಕೇರಳದ ಶಬರಿಮಲೆಯ ಅಯ್ಯಪ್ಪ ಸ್ವಾಮಿಯ ದೇವಾಲಯದ ಬಾಗಿಲು ತೆರೆಯಲಾಗಿದ್ದು, ಸರಕಾರದ ಕೋವಿಡ್ – 19 ಮಾರ್ಗಸೂಚಿಗಳನ್ನು ಪಾಲಿಸಿಕೊಂಡು ದೇವಾಲಯದ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುತ್ತದೆ.

ನಿನ್ನೆ ಭಾನುವಾರ ಹೊಸದಾಗಿ ಚುನಾಯಿತರಾದ ಶಬರಿಮಲೆ ಮೆಲ್ಸಂತಿ ವಿ ಕೆ ಜಯರಾಜ್ ಪೊಟ್ಟಿ ಮತ್ತು ಮಲಿಕಾಪುರಂ ಮೆಲ್ಸಂತಿ ಎಂ.ಎನ್‌. ರಾಜ್ ಕುಮಾರ್ ಅವರು ಮೊದಲು ಪವಿತ್ರ 18 ಮೆಟ್ಟಿಲುಗಳನ್ನು ಹತ್ತಿ ಪ್ರಾರ್ಥನೆ ಸಲ್ಲಿಸಿದರು. ಸೋಮವಾರ ಬೆಳಗ್ಗೆಯಿಂದಲೇ ಭಕ್ತರಿಗೆ ದೇವಾಲಯದ ಒಳಗೆ ಅವಕಾಶ ನೀಡಲಾಗುವುದು ಎಂದು ದೇವಾಲಯದ ಮೂಲಗಳು ತಿಳಿಸಿವೆ.

ಈ ಬಾರಿ ಅಯ್ಯಪ್ಪ ಸ್ವಾಮಿ ದೇವಾಲಯದ ಪ್ರವೇಶಕ್ಕೆ ಪ್ರತಿದಿನ 1000 ಜನರಿಗೆ ಮಾತ್ರ ಅವಕಾಶ ನೀಡಲಾಗುತ್ತಿದ್ದು, ಮೂಲ ಕ್ಯಾಂಪ್‌ಗಳಾದ ನಿಲಕ್ಕಲ್ ಮತ್ತು ಪಂಬಾವನ್ನು ತಲುಪಲು 24 ಗಂಟೆಗಳ ಮೊದಲು ತೆಗೆದುಕೊಂಡ ಕೋವಿಡ್-19 ನೆಗೆಟಿವ್‌ ಪ್ರಮಾಣಪತ್ರವನ್ನು ತೋರಿಸಬೇಕಾಗುತ್ತದೆ.

ಯಾತ್ರಾರ್ಥಿಗಳಿಗೆ ದೇವಾಲಯದ ಆವರಣದಲ್ಲಿ ಉಳಿಯಲು ಅವಕಾಶವಿರುವುದಿಲ್ಲ. ಬೆಟ್ಟದ ದೇವಾಲಯವನ್ನು ನಿರ್ವಹಿಸುವ ತಿರುವಾಂಕೂರು ದೇವಸ್ವಂ ಮಂಡಳಿ (ಟಿಡಿಬಿ) ಪ್ರಕಾರ, ಈ ಯಾತ್ರಾ ಕಾಲದಲ್ಲಿ ಸುಮಾರು 85,000 ಭಕ್ತರು ಪ್ರಾರ್ಥನೆ ಸಲ್ಲಿಸಲಿದ್ದಾರೆ. ಶನಿವಾರ ಮತ್ತು ಭಾನುವಾರದಂದು 2000 ಜನರಿಗೆ ದರ್ಶನಕ್ಕೆ ಅವಕಾಶ ನೀಡಲಾಗುವುದು ಎಂದು ತಿಳಿಸಿದ್ದಾರೆ.

ಆರೋಗ್ಯ ಇಲಾಖೆಯು ತಿರುವನಂತಪುರಂ, ತಿರುವಲ್ಲಾ, ಚೆಂಗಣ್ಣೂರು ಮತ್ತು ಕೊಟ್ಟಾಯಂನಲ್ಲಿರುವ ಎಲ್ಲಾ ಬಸ್ ನಿಲ್ದಾಣಗಳು ಮತ್ತು ರೈಲ್ವೆ ನಿಲ್ದಾಣಗಳು ಸೇರಿದಂತೆ ವಿವಿಧ ಕೇಂದ್ರಗಳಲ್ಲಿ ಕೋವಿಡ್ ಪರೀಕ್ಷೆಗಳಿಗೆ ವ್ಯವಸ್ಥೆ ಮಾಡಿಕೊಂಡಿದೆ.

LEAVE A REPLY

Please enter your comment!
Please enter your name here